ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ’ ಸಾಯಿರಾಧ’, ಸಂತೋಷ್ ಶೆಟ್ಟಿ
ಬೈಂದೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ ಪ್ರತಿಭಟಿಸುವವರ ವಿರುದ್ಧ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮಲೆನಾಡು ಜನ
ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದನು.ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ
ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ ೫ ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ ೫೦೦೦ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು
ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಘಟನೆಯಲ್ಲಿ ಬದುಕಿಗೆ ಅಂತ್ಯ ಹೇಳಿದವರು. ಮಿಯ್ಯಾರು ಚಚ್ ೯ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಕಳೆದೊಂದು
ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು.
ಬೈಂದೂರು : ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನಾಗೂರಿನಲ್ಲಿ ವಿನೂತನ ಕನ್ನಡ ಹಬ್ಬ ಭಾನುವಾರು ನಾಗೂರು ಕೃಷ್ಣ ಲಲಿತಾ ಕಲಾಮಂದಿರದಲ್ಲಿ ನಡೆಯಿತು. ಕಿರಿಮಂಜೇಶ್ವರ ಗ್ರಾ ಪಂ ಅಧ್ಯಕ್ಷ ಶೇಖರ ಖಾರ್ವಿ ಕನ್ನಡ ಹಬ್ಬ 2024ರ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡಿ, ನಮ್ಮ ಭಾಷೆ, ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯ ಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ಬೆಳವಣಿಗೆ ಮಾಡಿಕೊಳ್ಳಬೇಕು. ಕನ್ನಡ ಭಾಷೆ ತನ್ನದೇ ಆದ ಇತಿಹಾಸ ಮತ್ತು ಶ್ರೇಷ್ಠತೆಯನ್ನು
ಕಾಪು ನಲ್ಲಿ ಯುನಿಟೆಡ್ ಟೋಯೊಟ ವತಿಯಿಂದಗ್ರ್ಯಾಂಡ್ ನವೆಂಬರ್ ಎಕ್ಸೇಂಜ್ ಮೇಳ ಫೈನಾನ್ಸ್ ಉತ್ಸವ ಇಂದು ಸಂಭ್ರಮದಲ್ಲಿ ಶುಭ ಆರಂಭಗೊಂಡಿದೆ. ಕಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಾಕ್ಷಿ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಿತಾ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾರ್ಕೆಟಿಂಗ್ ಮೆನೇಜರ್ ಸೋನಿಯಾ ಮೇಡಂ ಅವರು ಮಾತನಾಡಿ, ಯುನಿಟೆಡ್ ಟೋಯೊಟ ವತಿಯಿಂದ ಉಡುಪಿ ಜಿಲ್ಲೆಯ ಕಾಪು ನಲ್ಲಿ ಗ್ರ್ಯಾಂಡ್ ನವೆಂಬರ್ ಮೇಳ
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷೀ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಿದರು. ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಉಪನ್ಯಾಸಕೇತರರು ರಕ್ತದಾನವನ್ನು ನೀಡಿದರು.
ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಹಾರಾಷ್ಟ್ರ ಹಾಗೂ ಕರ್ನಾಟಕ ವತಿಯಿಂದ ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಧರ್ಮಶ್ರೀ ರಿಲೀಫ್ ಫೌಂಡೇಶನ್ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಸ್ಥೆ ವತಿಯಿಂದ ಇಂದು ಬೈಂದೂರು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿದ ತಂಗುದಾಣವನ್ನು ಕೊಂಕಣ ರೈಲ್ವೆಯ ತರಬೇತಿ ಮತ್ತು ಅಭಿವೃದ್ಧಿ ವ್ಯವಸ್ಥಾಪಕ ಶ್ರೀಧರ ಅವಭ್ರತ್ ಹಾಗೂ ಸೀನಿಯರ್ ರೀಜನಲ್ ಟ್ರಾಫಿಕ್ ಮ್ಯಾನೇಜರ್ ದೀಪಕ್




























