Home ಕರಾವಳಿ Archive by category ಉಡುಪಿ (Page 24)

ಉಡುಪಿ: ಪತ್ನಿ ಸಾವಿಗೀಡಾದ ಮರುದಿನವೇ ಪತಿ ನಿಧನ

ಪತ್ನಿ ಸಾವಿಗೀಡಾದ ಮರುದಿನವೇ ಪತಿ ಕೂಡ ನಿಧನರಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಕ್ರಿಯವಾಗಿದ್ದ ದಂಪತಿಗಳು ಈ ಮೂಲಕ ಒಂದೇ ಸಮಯದಲ್ಲಿ ಕೊನೆಯಸಿರೆಳೆದಿದ್ದಾರೆ. ಉದ್ಯಾವರದ ಚರ್ಚ್ ಪಾಲನಾ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಲಾರೆನ್ಸ್ ಡೇಸಾ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರ ಪತ್ನಿ ಶಿಕ್ಷಕಿ

ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ

ಬೈಂದೂರು : ಅಕ್ರಮ-ಸಕ್ರಮ ಅರ್ಜಿ ಅಧಿಕಾರಿಗಳ ಹಂತದಲ್ಲಿ ತಿರಸ್ಕಾರ ಮಾಡಕೂಡದು – ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು : ಅಕ್ರಮ- ಸಕ್ರಮ ( ಬಗರ್ ಹುಕುಂ ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಅರ್ಜಿ ತಿರಸ್ಕರಿಸುವುದು ಅಥವಾ ವಿಲೇವಾರಿ ಮಾಡುವಂತಿಲ್ಲ. ಸಮಿತಿಯ ಮುಂದೆ ತಂದು ಅಕ್ರಮ-ಸಕ್ರಮಕ್ಕೆ ಸಮಿತಿಯ ಸೂಚನೆಯಂತೆ ನಿರ್ಧರಿಸಬೇಕು.‌ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಲ್ಲಿ ಬಹುದೊಡ್ಡ ಹೋರಾಟ ರೂಪಿಸಬೇಕಾಗುತ್ತದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಎಚ್ಚರಿಕೆ ನೀಡಿದ್ದಾರೆ.ಕಾಡಿನಂಚಿನ ಗ್ರಾಮಗಳಲ್ಲಿ ಕಳೆದ ಅನೇಕ ವರ್ಷದಿಂದ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಎಲೆವೆಂಶಿಯಾ 2ಕೆ24 ಫೆಸ್ಟ್

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ರೋಬೊಸಾಫ್ಟ್ ಉಡುಪಿ ಮತ್ತು ಸಮಾಜ ಸೇವಕ ಈಶ್ವರ್ ಮಲ್ಪೆ ಇವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಜೊತೆ ಮಾತನಾಡಿ ಬಿ.ಸಿ.ಎ ವಿಭಾಗದಲ್ಲಿರುವ ಅವಕಾಶಗಳು ಹಾಗೂ ಹೊಸ ರೀತಿಯ ಪ್ರೋಗ್ರಾಮ್ ಗಳನ್ನು ನಡೆಸುವ ಕುರಿತು ವೈಯಕ್ತಿಕ ಸಾಧನೆಯನ್ನು

ಉಚ್ಚಿಲ ಕ್ಷೇತ್ರಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ’ ಸಾಯಿರಾಧ’, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು,

ಬೈಂದೂರು: ಸರ್ಕಾರದ ಧಮನಕಾರಿ‌ ನೀತಿ ಖಂಡನೀಯ – ಡಾ. ಅತುಲ್ ಕುಮಾರ್ ಶೆಟ್ಟಿ

ಬೈಂದೂರು: ಕಸ್ತೂರಿ ರಂಗನ್ ವರದಿ‌ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ‌ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ ಪ್ರತಿಭಟಿಸುವವರ ವಿರುದ್ಧ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮಲೆನಾಡು ಜನ

ಕಾಪು: ಹಿಟ್ & ರನ್: ಬೈಕ್ ಸವಾರ ಮೃತ್ಯು

ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದನು.ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ

ಲಂಚ ಸ್ವೀಕರಿಸುತ್ತಿದ್ದ ಆರೋಪ: ಉಡುಪಿ ಖಜಾನೆಯ ಉಪನಿರ್ದೇಶಕ ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ ೫ ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ ೫೦೦೦ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು

ಕಾರ್ಕಳ : ಪತಿಯ ಸಾವಿನಿಂದ ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆ‌ಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಘಟನೆಯಲ್ಲಿ ಬದುಕಿಗೆ ಅಂತ್ಯ ಹೇಳಿದವರು. ಮಿಯ್ಯಾರು ಚಚ್ ೯ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಕಳೆದೊಂದು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ಸಾವು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು.