Home ಕರಾವಳಿ Archive by category ಉಡುಪಿ (Page 3)

ನ. 28 ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ :ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 24-11-2025 ರಂದು

ಶಾಸಕರಿಂದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ

ಹಿರಿಯಡ್ಕ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಇಂದು ದಿನಾಂಕ 19-11-2025 ರಂದು ಕೊಡಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮಕ್ಕಳಿಗೆ ಟಿ.ವಿ, ಮಕ್ಕಳ ಆಟಿಕೆ ಕಿಟ್ ಹಾಗೂ ಪಂಚಾಯತ್ ವರ್ಗ ಅನುದಾನ ಹಾಗೂ ಶೇಖರ 25ರ ನಿಧಿ ಮತ್ತು

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು. ನಾರಾಯಣಗುರು ಆಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ್‌ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾತನಾಡಿ ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು,

ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ

ಉಚ್ಚಿಲ ಶ್ರೀ ಮಾಹಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಶ್ರೀ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅಚರ್ಕರಾದ ರಾಘವೇಂದ್ರ ಉಪಾಧ್ಯಾಯ ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಕುಟುಂಬ ಭೇಟಿ

ಉಚ್ಚಿಲ:ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರೀಮತಿ ಶ್ರುತಿಯವರು ಕುಟುಂಬ ಸಮೇತ ಇಂದು ಭೇಟಿ ನೀಡಿದರು. ಸ್ವ ಕುಟುಂಬ ಸಮೇತರಾಗಿ ಬಂದ ಅವರು ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು ಹಾಗೂ ಶ್ರೀ ಕ್ಷೇತ್ರದ ವತಿಯಿಂದ ಶ್ರುತಿಯವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ,

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ

ಮುಲ್ಕಿ:ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯ ಗ್ರಾಹಕರ ದಿನಾಚರಣೆಯು ನವೆಂಬರ್ 11 ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಕಾರಣವಾಗಿದ್ದು ಆತ್ಮೀಯತೆ ಕರ್ತವ್ಯ ನಿಷ್ಠೆ ಇದ್ದರೆ ಮಾತ್ರ ಗ್ರಾಹಕರ ವಿಶ್ವಾಸ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ನವಶಕ್ತಿ ಮಹಿಳಾ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ ಜಗದ್ಗುರುಗಳಾದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಗಳ ದಿವ್ಯ ಹಸ್ತದಿಂದ ದೀಪ ಪ್ರಜ್ವಲಿಸಿ ಅರ್ಚನೆಯೊಂದಿಗೆ ಸರಸ್ವತಿ ವಂದನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಶ್ರೀ.

ಬೈಂದೂರು: 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ

ಬೈಂದೂರು:ಸರಕಾರದ ಅನುದಾನವನ್ನು ಕಾಯದೇ ಸರಕಾರೇತರ ಸಂಸ್ಥೆಗಳ ಸಹಯೋಗ ಪಡೆದು ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ನಿರಂತರ ಒದಗಿಸಿದ್ದಲ್ಲಿ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಬೈಂದೂರು ಕ್ಷೇತ್ರದ ಆಯ್ದ ಶಾಲೆಗಳಿಗೆ ಸಮೃದ್ಧ ಬೈಂದೂರು ಪರಿಕಲ್ಪನೆಯ “300 ಟ್ರೀಸ್” ಯೋಜನೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಯೂಥ್ ಫಾರ್ ಸೇವಾ ಬೆಂಗಳೂರು ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ

ನ.28ರಂದು ಪ್ರಧಾನಿ ಮೋದಿ ಉಡುಪಿ ಕೃಷ್ಣಮಠಕ್ಕೆ ಭೇಟಿ- ಪೂರ್ವಭಾವಿ ಸಭೆ

ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

ಉಡುಪಿ: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ. ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (೨೦) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ