ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿ, ತಾಯಿ, ಅಜ್ಜಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತರ ವಿಭಾಗದ ಮುಖ್ಯಸ್ಥರಾದ ಡಾ. ನಿಕೇತನ ರವರು ಆಗಮಿಸಿ, ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿ ಶಿಕ್ಷಕರು ನಿರಂತರ ಅಧ್ಯಯನಶೀಲರಾಗಿರಬೇಕು, ಧೈರ್ಯ, ತಾಳೆ, ಸಮಯ
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರಚೆಸ್ ಪಂದ್ಯಾಟ ಶ್ರೀ ನರಸಿಂಹ ದೇವಾಡಿಗ ಮತ್ತು ಶ್ರೀ ಶೇಖರ್ ಖಾರ್ವಿ ಚೆಸ್ ಆಟ ಆಡುದರ ಮೂಲಕ ಚಾಲನೆ ನೀಡಲಾಯಿತು. ಶ್ರೀ ಶೇಖರ್ ಖಾರ್ವಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಿರಿಮಂಜೇಶ್ವರ ಮತ್ತು ಶ್ರೀ ನರಸಿಂಹ ದೇವಾಡಿಗ ಗ್ರಾಮ ಪಂಚಾಯತ್ ಅಧ್ಯಕ್ಷರು
ನಿಖಿಲ್ ಪೂಜಾರಿ ಮತ್ತು ಹೇಮಂತ್ ದೇವಾಡಿಗ ಇವರ ಮಾಲಿಕತ್ವದ ಎ-ವನ್ ಸರ್ವಿಸ್ ಸ್ಟೇಷನ್ ಇಂದು ಧಾರ್ಮಿಕ ವಿಧಿ ವಿಧಾನದ ಮೂಲಕ ಶುಭಾರಂಭಗೊಂಡಿದೆ ವೆಲ್ ವಾಟರ್ ಪಾಲಿಶ್, ಕಸ್ಟಮ್ ಪಾಲಿಶ್ ಹಾಗೂ ಎಲ್ಲಾ ರೀತಿಯ ವಾಹನಗಳ ಸರ್ವಿಸ್ ಗಳು ಇಲ್ಲಿ ಲಭ್ಯವಿದ್ದು, ಯಾವುದೇ ವಾಹನಗಳಾದರೂ ಅದನ್ನು ಪಳಪಳ ಹೊಳೆಯುವಂತೆ ಮಾಡುವ ಮೂಲಕ ಮತ್ತೆ ತಮ್ಮ ವಾಹನಗಳ ಮೇಲೆ ಒಲವು ಹೆಚ್ಚುವಂತೆ ಸಿದ್ಧಗೊಳಿಸಲಾಗುತ್ತದೆ. ಗ್ರಾಹಕರದ ಸುಂದರ್ ಕೊಠಾರಿ ಮಾತನಾಡಿ ಈ ಸಂಸ್ಥೆಯು ಈ ಹಿಂದೆ ಹಲವಾರು
ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ಈಗಾಗಲೇ ವಿಧಾನ ಮಂಡಲ ಅಧಿವೇಶನದಲ್ಲಿ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗಿತ್ತು. ನೇಮಿಸುವ ಭರವಸೆಯನ್ನು ನೀಡಿದ್ದರು.
ಉಡುಪಿ : ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಅದರ ತಪ್ಪಲಿನಲ್ಲಿ ಭೂಕುಸಿತ ದುರಂತಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮಘಟ್ಟಗಳ ಮೇಲೆ ಹೆಚ್ಚುತ್ತಿರುವ ಯಂತ್ರಗಳ ದಾಳಿಯಾಗಿದೆ ಎಂದು ಮಣಿಪಾಲದ ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ.ಉದಯ ಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ
ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಹೇಮಂತ್ ಇವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ರೂ 85.00ಕೋಟಿ ಮಂಜೂರಾಗಿದ್ದು, CRZ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಜೊತೆಗೆ ಗಂಗೊಳ್ಳಿ ಬಂದರು ಆಧುನಿಕರಣ, ಗಂಗೊಳ್ಳಿ ಕೋಸ್ಟಲ್ ಬರ್ತ್, ಕೊಡೇರಿ
ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ಎಂಬುದೇ ಯಕ್ಷಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ ನಿವಾಸಿಗಳಿಗೆ ದೋಣಿಯೊಂದೇ ಆಧಾರ. ನಾವುಂದ ಕುದ್ರುವಿನಲ್ಲಿ 7 ಮನೆಗಳಿದ್ದು, ಒಟ್ಟು ಸುಮಾರು 20 ಮಂದಿ
ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ನಡೆದಿದೆ.ಮೃತ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ರವರ ಪುತ್ರ ನಿಜಾಮ್ (22)ಎಂದು ಗುರುತಿಸಲಾಗಿದೆ.ಕಾರ್ಕಳ ಸಾಣೂರು ನಿಂದ ತನ್ನ ಕೆಲಸಕ್ಕೆಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ಟೇಕ್
ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಶ್ರೀ ಜಾರಂದಾಯ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಹರಿಪಾದೆ, ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ತಪೋವನ ತೋಕೂರು ಇವರ ಜಂಟಿ ಆಶ್ರಯದಲ್ಲಿ ಮೇಬೈಲು ಸದಾಶಿವ ಶೆಟ್ಟಿ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. […]




























