Home ಕರಾವಳಿ Archive by category ಉಡುಪಿ (Page 32)

ಶ್ರೀಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್ ನಾಡ : ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಲೋಕೇಶ್ ಕಾಂಚನ್ ಅಯ್ಕೆ

ಕಳೆದ 12 ವರ್ಷಗಳಿಂದ ಸಾರ್ವಜನಿಕ ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿಯಿಂದ ಹಲವಾರು ಜನಪರ ಹಾಗೂ ಸಮಾಜಮುಖಿ ಕೆಲಸ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇತ್ತಿಚೆಗೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು, ಮುದ್ದು ಮನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು

ಕಾರ್ಕಳ: ಗ್ಯಾಸ್ ಸಿಲಿಂಡ್ ಸ್ಫೋಟ, ಅಪಾಯದಿಂದ ಮನೆಮಂದಿ ಪಾರು

ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿಯ ಕಟ್ಟಡವೊಂದರ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ರಾತ್ರಿ 11.30ರ ವೇಳೆಗೆ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ, ಬಾಗಿಲು ಸಂಪೂರ್ಣ ನುಚ್ಚು ನೂರಾಗಿದೆ. ಫ್ಲ್ಯಾಟ್ ನ ಒಳಗಿರುವ ಪೀಠೋಪಕರಣಗಳು, ಬಟ್ಟೆಬರೆ, ಅಡುಗೆಮನೆ ವಸ್ತುಗಳು ಬೆಂಕಿಗಾಹುತಿಯಾಗಿದೆ. ಫ್ಲ್ಯಾಟ್ ನಲ್ಲಿದ್ದವರ ಸಮಯ ಪ್ರಜ್ಞೆಯಿಂದ ಯಾವುದೇ

ಮೀನುಗಾರಿಕಾ ಮನೆ ಹಂಚಿಕೆಯಲ್ಲಿ ಹಗರಣದ ಆರೋಪ: ತನಿಖೆಗೆ ಆಗ್ರಹ

ಉಪ್ಪುಂದ: ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಮೀನುಗಾರಿಕಾ ಮನೆಗಳು ಮಂಜೂರಾಗಿ ನಿಯಮ ಪ್ರಕಾರ ಹಂಚಿಕೆಯಾಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ  ಮಾತ್ರ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ‌ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಉಪ್ಪುಂದದ ಕಾರ್ಯಕರ್ತ ದಲ್ಲಿ ಮೀನುಗಾರಿಕೆ

ಪಡುಬಿದ್ರಿ: ರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತದ ಆತಂಕ: ಕಡಲು ಕೊರೆತಕ್ಕೆ ಸಂಪರ್ಕ ರಸ್ತೆ ಬಲಿಯಾಗಲು ಕ್ಷಣಗಣನೆ

 ಪ್ರವಾಸಿಗರನ್ನು ತನ್ನತ್ತ ಸೆಳೆಯುವ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕದಲ್ಲಿ ಬ್ಲೂ ಪ್ಲ್ಯಾಗ್ ಬೀಚ್ ಮುಚ್ಚುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಡುಬಿದ್ರಿ ಬ್ಲೂ ಪ್ಲ್ಯಾಗ್ ಬೀಚ್ ನ ಪ್ರಬಂಧಕ ವಿಜಯ ಶೆಟ್ಟಿ, ಕಡಲಿನ ಅಬ್ಬರಕ್ಕೆ ಬ್ಲೂ ಪ್ಲ್ಯಾಗ್ ಬೀಚ್ ನ ಸಂಪರ್ಕ ಕೊಂಡಿ ಕಾಂಕ್ರೀಟ್ ರಸ್ತೆ ಕಡಲು ಪಾಲಾಗುವ ಎಲ್ಲಾ ಲಕ್ಷಣಗಳು ಗೊಚರಿಸುತ್ತಿದ್ದು, ಪ್ರವಾಸಿಗರ ಹಾಗೂ ಸಿಬ್ಬಂದಿಗಳ

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಇನ್ಸಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಕಾಲೇಜಿನಲ್ಲಿ ರಾಷ್ಟ್ರೀಯ ಅಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನವನ್ನು ಆಚರಿಸಲಾಯಿತು. ಈ ದಿನದ ಅಂಗವಾಗಿ ಕಾಲೇಜಿನ ಒಟಿ ಎಟಿ ವಿಭಾಗದ ವತಿಯಿಂದ ಆಯೋಜಿಸಿದ “ಸಂಗಮ 2024” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ಸಿಟಿ ಆಸ್ಪತ್ರೆಯ ಹಿರಿಯ ಸಮಾಲೋಚಕ, ಶಸ್ತ್ರ ಚಿಕಿತ್ಸಕ ಡಾ. ರಾಮಚಂದ್ರರವರು ವಿದ್ಯಾರ್ಥಿಗಳಿಗೆ

ಕುಂದಾಪುರ: ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!

ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರಿ ಗ್ರಾಮಪಂಚಾಯತ್ ವ್ಯಾಪ್ತಿಯ ಸುಳ್ಸೆ ತಿರುವಿನಲ್ಲಿ ಎರಡು ಬೃಹತ್ ಗಾತ್ರದ ಮರ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಉರಳಿ ಬಿದ್ದು ಕೆಲ ಹೊತ್ತು ಸಂಚಾರ ವ್ಯತ್ಯಯ ಉಂಟಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಯುವಕರು ಉರುಳಿ

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶಯದೇವಿಸುತೆ ಮರವಂತೆ ನೇಮಕ

ಇದೀಗಾಗಲೇ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯೆಯಾಗಿರುವ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ರವರು ಇದೀಗ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸತತ ಸೇವೆಗೈಯ್ಧಿರುವಂತಹ ಇವರ ಕಲಾಪ್ರತಿಭೆಯ ನಿರಂತರ ಸೇವೆಗೆ ಅಕ್ಕಮಹಾದೇವಿ

ಉಡುಪಿ: ದುರಂತದಿಂದ ಪಾರಾದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು

ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ತೀರಾ ಸಮೀಪದಲ್ಲಿ

ಪಡುಬಿದ್ರಿ: ಹೆದ್ದಾರಿ ಹೊಂಡ ತಪ್ಪಿಸಲು ಹೋದ ಕಾರು ಸ್ಕೂಟರ್‌ಗೆ ಡಿಕ್ಕಿ – ಸ್ಕೂಟರ್ ಸವಾರಗೆ ಗಂಭೀರ ಗಾಯ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸೀದಿ ಸಮೀಪ ಹೆದ್ದಾರಿಯ ಹೊಂಡ ತಪ್ಪಿಸಲು ಹೋದ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಕೂಟರ್ ದಾಖಲೆ ಪರಿಶೀಲನೆ ಮಾಡಿದ ಸ್ಥಳೀಯ ಅದಮಾರು ನಿವಾಸಿ ನವನೀತ್ ಪಿ. ಎಂಬವರಿಗೆ ಸೇರಿದ್ದಾಗಿದ್ದು, ಅವರೇ ಈ ಸ್ಕೂಟರನ್ನು ಚಲಸಯಿಸುತ್ತಿದ್ದರೋ ಎಂಬುದು ದೃಢಪಟ್ಟಿಲ್ಲ. ಅದಮಾರು

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ. ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆ ಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು