Home ಕರಾವಳಿ Archive by category ಉಡುಪಿ (Page 34)

ಬೈಂದೂರು: ಸೋಮೇಶ್ವರದ ಬಳಿ ಗುಡ್ಡ ಕುಸಿದರೆ ಅಧಿಕಾರಿಗಳೇ ಹೊಣೆ – ತಕ್ಷಣವೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಖಡಕ್ ಸೂಚನೆ

ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ

ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದುದು – ಮಾರ್ಗರೇಟ್ ಸುದರ್ಶಿನಿ

ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ,ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಹಾಗೂ ಆನೆ ಕಾಲು ರೋಗ ರಕ್ತ ತಪಾಸಣೆ

ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ-ಕಚೇರಿಗೆ ಮುತ್ತಿಗೆ ಹಾಕಲು ಸಾರ್ವಜನಿಕರ ನಿರ್ಧಾರ

ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದ್ದು, ಗ್ರಾಹಕರಿಗೆ ಸೇವೆ ಎಂಬುದು ಮರೀಚಿಕೆಯಾತ್ತಿದೆ ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಶೀಘ್ರವಾಗಿ ಹಮ್ಮಿಕೊಳ್ಳಲಿದ್ದೇವೆ ಎಂಬುದಾಗಿ ತೆಂಕ ಗ್ರಾ.ಪಂ. ಸದಸ್ಯ ಬಾಲಚಂದ್ರ ಹೇಳಿದ್ದಾರೆ.ಮಳೆಗಾಲ ಬರುವುದಕ್ಕೆ ಮೊದಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದ ಇಲಾಖೆಯ

ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ

ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ. ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ ಸದಸ್ಯರನ್ನು ಹೊಂದಿರುವ ಈ ಸಂಸ್ಥೆ ಅನೇಕ ಸಮಾಜೋಮುಖಿ ಕಾರ್ಯಗಳನ್ನು ನಡೆಸಿ ಜನಾನುರಾಗಿದೆ.ಉಪಾಧ್ಯಕ್ಷರಾಗಿ

ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಖಾಸಗಿ ಬಸ್ ಮಾಲೀಕರು ಹಾಗೂ ಕೆಎಸ್ ಆರ್ ಟಿಸಿ, ಆರ್ ಟಿಒ ಅಧಿಕಾರಿಗಳ ಸಭೆ

ಬೈಂದೂರು: ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ ಬಸ್ ಮಾಲೀಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಆರ್‌ಟಿಓ ಅಧಿಕಾರಿಗಳ ಸಭೆ ನಡೆಸಿದರು. ಕೆಎಸ್‌ಆರ್‌ಟಿಸಿಗೆ ಸೂಚನೆಖಾಸಗಿ ಬಸ್ ಇಲ್ಲದ ರೂಟ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು

ಕಿರು ಬಂದರು ಅಭಿವೃದ್ಧಿಗೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಕೊಡೇರಿ ಕಿರು ಬಂದರು ಸಮಗ್ರ ಅಭಿವೃದ್ಧಿ, ಸ್ಥಳೀಯ ಮೀನುಗಾರರ ಸಮಸ್ಯೆ, ಜಟ್ಟಿ ಹಾಗೂ ಬ್ರೇಕ್ ವಾಟರ್ ವಿಸ್ತರಣೆ, ಡ್ರೆಜ್ಜಿಂಗ್ ಸಹಿತ ಹಲವು ಸಮಸ್ಯೆಗಳು ಮತ್ತು ಅಹವಾಲು ಆಲಿಸುವ ಸಂಬಂಧ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬುಧವಾರ ಕೊಡೇರಿಯ ಬಂದರು ಪ್ರದೇಶದಲ್ಲಿ ಮೀನುಗಾರರು ಮತ್ತು ಅಧಿಕಾರಿಗಳ ಸಭೆ ನಡೆಸಿದರು. ಕೊಡೇರಿ ಕಿರು ಬಂದರು ತಾಲೂಕಿನ ಪ್ರಮುಖ ಮೀನುಗಾರಿಕ ಕೇಂದ್ರಗಳಲ್ಲಿ ಒಂದಾಗಿ ಬೆಳೆಯುತ್ತಿದೆ. ಇಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಯ ದಂಡೆಗೆ ಡಿಕ್ಕಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಬಡಾ ಎರ್ಮಾಳು ಅಪೂರ್ವ ಲಾಡ್ಜ್ ಮುಂಭಾಗ ಕಾರೊಂದು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಮೋರಿಯೊಂದರ ದಂಡೆಗೆ ಡಿಕ್ಕಿಯಾಗಿ ಮುಗುಚಿ ಬಿದ್ದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು ಮರಳಿ ಉಡುಪಿಗೆ ಹಿಂದಿರುಗಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿಗಳು ಸಹಿತ ಪೊಲೀಸರು ಹೆದ್ದಾರಿಗಡ್ಡವಾಗಿ ಉರುಳಿಬಿದ್ದ

ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ  ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ

 37ನೇ ವರ್ಷದ  ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಸರ್ವಾನುಮತಮತದಿಂದ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಆರ್ಚಕರಾಗಿ ವೇ. ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ಎರ್ಮಾಳು ರೋಹಿತ್ ಹೆಗ್ಡೆ, ಉಪಾಧ್ಯಕ್ಷರಾಗಿ ಕೆ. ವಿಶ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು, ಕರುಣಾಕರ ಕೋಟ್ಯಾನ್,

ಬೈಂದೂರು: ಬಾವಿಗೆ ಕಾಲು ಜಾರಿ ಬಿದ್ದು ಸಾವು

ಬೈಂದೂರು:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು

ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಸೇವಾ ನಿವೃತ್ತಿರಾದ ಅರುಣ್‌ ಕುಮಾರ್ ಎಸ್. ವಿ. ಅವರಿಗೆ ಸನ್ಮಾನ

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ವತಿಯಿಂದ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಸೇವೆಯಲ್ಲಿ ಜನಮನ್ನಣೆ ಗಳಿಸುವುದು ಕಷ್ಟ ಸಾಧ್ಯ. ಆದರೆ ತಮ್ಮ ಮೂರೂವರೆ ದಶಕದ ಸುಧೀರ್ಘ ಸೇವೆಯ ಅವಧಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿದು