Home ಕರಾವಳಿ Archive by category ಉಡುಪಿ (Page 4)

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆಗೆ ಶರಣು

ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್‌ ಶಾಪ್ ನಡೆಸಿಕೊಂಡಿದ್ದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್ ಪತ್ನಿ ಸಮೇತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ.

ಕಾಪು ತಾಲೂಕು ಏಳನೇ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆ

ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅವರು ಮಾತನಾಡಿ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸೋಣ ಹಾಗೂಸಾಮಾಜಿಕ ನ್ಯಾಯ, ಪ್ರತಿಭಾ ನ್ಯಾಯ, ಪ್ರಾದೇಶಿಕ ನ್ಯಾಯವನ್ನು ಪ್ರತಿಪಾದಿ ಸುತ್ತಲೇ ಹಿಂದಿನ ಕಾಪು ತಾಲೂಕು ಸಮ್ಮೇಳನಗಳನ್ನು

ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕಎಸ್ ಎಮ್ ರಾಮ್ ಪ್ರಸಾದ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಗಣೇಶ್

ಉಡುಪಿ: ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀ ಹರಿರಾಮ್ ಶಂಕರ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್

ಬಿಜೆಪಿ ಕಾಪು ಮಂಡಲ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ “ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿನೊಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲ

ಬೈಂದೂರು ಬಂಟರಯಾನೆ ನಾಡವರ ಸಂಘ ನೂತನ ಅಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪುಂದ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘ ರಿ. ಇದರ ನೂತನ ಅಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪಂದ ಪ್ರದಪ್ರದಾನ ಸಮಾರಂಭಬೈಂದೂರು ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ.ಜೆ. ಸಭಾಭವನದಲ್ಲಿ ಸಂಭ್ರಮದಲ್ಲಿ ನಡೆಯಿತು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ಸಮಾಜಕ್ಕಾಗಿ ಏನು ಮಾಡಿರುತ್ತೇವೆ ಅದು ಮಾತ್ರ ಶಾಶ್ವತವಾಗಿರುತ್ತದೆ. ಸಮುದಾಯದ ಏಳಿಗೆಗಾಗಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಇದರಿಂದ ಸಂಘಟನೆ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಓರಿಯೆಂಟೇಶನ್ ಡೇ ಕಾರ್ಯಕ್ರಮ

ಉಡುಪಿ:ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ ಬೇಡಿಕೆಗಳಿದ್ದು ಶ್ರಮ, ಶ್ರದ್ದೆ ಇಂದ ಓದಿದರೆ ಶ್ರೇಯಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು

ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಕಾಪು ಮಾರಿಯಮ್ಮನ ದರುಶನ

ಕಾಪು: ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 1ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಕಾಪು ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ,

ಪಡುಬಿದ್ರಿ:ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆ ಶೀಘ್ರದಲ್ಲೇ ಶುಭಾರಂಭ

ಪಡುಬಿದ್ರಿ: ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆಯು ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರಿ ಮುಖ್ಯ ರಸ್ತೆಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್, ಬಸ್ ಸ್ಟಾಂಡ್ ಹತ್ತಿರ ದಿನಾಂಕ 05-10-2025 ಶುಭಾರಂಭ ಗೊಳ್ಳಲಿದೆ. ನೂತನ ರಾಜರಾಜೇಶ್ವರಿ ಸಿಲ್ಕ್ಸ್ ನ ಉದ್ಘಾಟನೆಯನ್ನು ಶ್ರೀ ಕೆ. ಪ್ರಕಾಶ್ ಶೆಟ್ಟಿ ಚೇರ್‌ಮನ್, ಎಂ. ಆರ್. ಜಿ. ಗ್ರೂಪ್, ಬೆಂಗಳೂರು ನಡೆಸಿಕೊಡಲಿದ್ದಾರೆ. ದೀಪ ಪ್ರಜ್ವಲನೆಯನ್ನು ಶ್ರೀ ಗುರುರಾಜ್ ಭಟ್ ಪ್ರಧಾನ