Home ಕರಾವಳಿ Archive by category ಉಡುಪಿ (Page 42)

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಾಲಾ ಮುಖ್ಯೋಪಾಧ್ಯಾಯನ ಬಂಧನ 

ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ. ಈತ ಶಾಲೆಯ 13 ಮಕ್ಕಳಿಗೆ 2023ರ ಜೂ.5ರಿಂದ 2024ರ ಎ.3ರ ಮಧ್ಯಾವಧಿಯಲ್ಲಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಅರಿವು ಕಾರ್ಯಕ್ರಮ

ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್ ಸಹಪ್ರಾಧ್ಯಾಪಕರು ಕೃಷಿ ಕೇಂದ್ರ ಬ್ರಹ್ಮಾವರ ಇವರು ವಿದ್ಯಾರ್ಥಿಗಳಿಗೆ ನೀರಿನ ಮಹತ್ವ, ನೀರಿನ ಮಿತ

ಮೇ.24ರಂದು ಗಾಯತ್ರಿ ಫಿಲ್ಮ್ ಮೇಕರ್ಸ್‌ನ ಬಲಿಪೆ ತುಳುಚಿತ್ರ ಬಿಡುಗಡೆ

ಗಾಯತ್ರಿ ಫಿಲ್ಮ್ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ತಯಾರಾದ ಎಂಡೋ ಸಂತ್ರಸ್ತರ ನೋವು ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡು ಸಿದ್ಧಗೊಂಡಿರುವ ಬಲಿಪೆ ತುಳುಚಿತ್ರವು ಮೇ.24ರಂದು ಬಿಡುಗಡೆಗೊಳ್ಳಲಿದೆ. ಬಲಿಪೆ ಎಂದರೆ ದೈವದ ವಾಹನವಾಗಿದ್ದು, ನೂರು ಹುಲಿಯ ಶಕ್ತಿಯನ್ನು ಹೊಂದಿರುವ ಒಂದು ಹುಲಿ ಎಂದರ್ಥ. ಬಲಿಪ ಚಿತ್ರದಲ್ಲಿ ತುಳುವ ಮಾಣಿಕ್ಯ ಅರವಿಂದ್ ಬೋಳಾರ್, ರಂಜನ್ ಬೋಳಾರ್ ಹಾಗೂ ನಾಯಕ ನಟನಾಗಿ ಹರ್ಷಿತ್ ಬಂಗೇರ, ನಾಯಕ ನಟಿಯಾಗಿ ಅಂಕಿತಾ ಪಟ್ಲ ನಟಿಸಿದ್ದು,

ಕಾರ್ಕಳ : ಮತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ

ಕಾರ್ಕಳ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ಕಾರ್ಕಳದ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಹಾಗೂ ಪುರಸಭಾ ಮುಖ್ಯ ಅಧಿಕಾರಿ, ರೂಪಾ ಟಿ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆ ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಭಾರತ ಒಂದು ಪ್ರಪಂಚದಲ್ಲಿ ಅತಿ ಬಲಿಷ್ಠವಾದ

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ

ಉಡುಪಿ: ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ

ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್‌ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ