Home ಕರಾವಳಿ Archive by category ಉಡುಪಿ (Page 43)

ಬೈಂದೂರು: ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟ ಈಶ್ವರಪ್ಪ

ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ. ಹಿಂದುತ್ವ ದೇಶ ಅಭಿವೃದ್ಧಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕುರಿತು ಜನ ಸ್ಪಷ್ಟ ಫಲಿತಾಂಶ ನೀಡಲಿದ್ದಾರೆ.ಯಾವ ಒತ್ತಡಗಳಿಗೂ ಮಣಿಯಲಾರೆ.ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದರು. ಅವರು

ಬೈಂದೂರು :ಲೋಕಸಭಾ ಚುನಾವಣಾ ಕಾರ್ಯಗಾರ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ ಇಂದು ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಗಾರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ರವರು ಮಹಿಳಾ ಕಾರ್ಯಕರ್ತರು ಹೇಗೆ ಚುನಾವಣೆಯಲ್ಲಿ ತಮ್ಮ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಯಗಾರ ನೆರವೇರಿಸಿದರು. ವೇದಿಕೆಯಲ್ಲಿ ಕರ್ನಾಟಕದ ಆರು ಲೋಕಸಭಾ ಕ್ಷೇತ್ರದ

ಎಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ : ಕೋಟ ಶ್ರೀನಿವಾಸ ಪೂಜಾರಿ

ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು, ಈಗಾಗಲೆ ನಮ್ಮ ಮತಕ್ಷೇತ್ರ ವ್ಯಾಪ್ತಿಯ 1850 ಮತಗಟ್ಟೆ ಮತ್ತು ಮತದಾರರ ಒಂದು ಸುತ್ತಿನ ಬೇಟಿ ಮಾಡಿ ಏಪ್ರಿಲ್ ೩ನೇ

ಕುಂದಾಪುರ: ಅಡಿಕೆ ಕಳವು ಪ್ರಕರಣದ ಮೂವರ ಬಂಧನ

ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್,ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್ ಬಂಧಿತ ಆರೋಪಿಗಳು. ಇವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ

ಪ್ರಚಂಡ ಬಹುಮತದಿಂದ ಬಿ. ವೈ ರಾಘವೇಂದ್ರ ಗೆಲುವು ನಿಶ್ಚಿತ : ಶಾಸಕ ಗುರುರಾಜ್ ಗಂಟಿಹೊಳೆ ವಿಶ್ವಾಸ

ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ, ನಿಲ್ದಾಣದ ವೀಕ್ಷಣೆ, ಅಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಮಾಹಿತಿಯನ್ನು ಪಡೆದರು. ವಿದ್ಯಾರ್ಥಿಗಳೊಂದಿಗೆ , ಉಪನ್ಯಾಸಕಿಯರಾದ ಸವಿತಾ ಮತ್ತು ವೈಷ್ಣವಿ ಉಪಸ್ಥಿತರಿದ್ದರು.

ಉಡುಪಿ: ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 8.81 ಲಕ್ಷ ರೂ. ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮಗಳನ್ನು ತಡೆಯಲು ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಒಟ್ಟು 8.81ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3.50ಲಕ್ಷ ರೂ., ಕಾಪು ವಿಧಾನಸಭಾ ಕ್ಷೇಕತ್ರದ ಉದ್ಯಾವರ ಚೆಕ್‌ಪೋಸ್ಟ್‌ನಲ್ಲಿ 4.51ಲಕ್ಷ ರೂ. ಹಾಗೂ ಮಾ.23ರಂದು ಉಡುಪಿ

ಉಡುಪಿ: ಅನಾರೋಗ್ಯ ಪೀಡಿತ ಕುಟುಂಬಕ್ಕೆ ಬೇಕಾಗಿದೆ ಸಹಾಯ ಹಸ್ತ

ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ

ಪಡುಬಿದ್ರಿಯಲ್ಲಿ ಆತಂಕ ಸೃಷ್ಟಿಸಿದ ಬೆಂಕಿ ಅನಾಹುತ

ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.