ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ.
ಉಡುಪಿಯಲ್ಲಿ ರಾಮ ಪ್ರತಿಷ್ಠಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕೃಷ್ಣ ಮಠದಲ್ಲಿ ಇದೇ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ ನಡೆಯಿತು. ಬ್ರಹ್ಮರಥ, ಚಿನ್ನದ ರಥ ಮಹಾಪೂಜಾ ರಥ, ಬೆಳ್ಳಿರಥ ಹಾಗೂ ನವರತ್ನ ರಥವನ್ನು ರಥ ಬೀದಿಗೆ ಪ್ರದಕ್ಷಿಣೆ ತರಲಾಯಿತು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಾತ್ರಿ ನಡೆದ ಉತ್ಸವದಲ್ಲಿ ರಾಮಾಯಣ ಸಹಿತ ಕೃಷ್ಣದೇವರ ಉತ್ಸವ ನಡೆಸಲಾಯಿತು. ಮಹೋತ್ಸವಕ್ಕೂ ಮುನ್ನ ಮಧ್ವ ಸರೋವರದಲ್ಲಿ ತೆಪೋತ್ಸವ ನಡೆಯಿತು. ಈ
ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಕ್ಷೇತ್ರ ಕಾರ್ಣಿಕ ಕ್ಷೇತ್ರವಾಗಿದೆ ಇದೊಂದು ಪ್ರಾರ್ಥನೆ ಕೇಂದ್ರವಾಗಿದೆ ಈ ಕ್ಷೇತ್ರದಲ್ಲಿ ಸುಮಾರು 300 ವರ್ಷಗಳಿಂದ ಅತ್ತೂರು ಸಂತ ಲಾರೆನ್ಸರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದೇಶ ವಿದೇಶಗಳಿಂದ ಲಕ್ಷಾಂತರ ಜನರು ಈ ಪುಣ್ಯಕ್ಷೇತ್ರಕ್ಕೆ ಬಂದು ಪ್ರಾರ್ಥಿಸುತ್ತಾರೆ. ಅವರಿಗೆ ಸಂತ ಲಾರೆನ್ಸರು ಎಲ್ಲವನ್ನು ಕೊಟ್ಟಿರುತ್ತಾರೆ. ಈ ಪುಣ್ಯಕ್ಷೇತ್ರದಲ್ಲಿ ಅಸಾಧ್ಯವಾದುದು ಸಾಧ್ಯವಾಗಿದೆ. ಜಾತಿ ಮತ ಭೇದವಿಲ್ಲದೆ ಎಲ್ಲಾ
ಕುಂದಾಪುರ : ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸ್ ರು ಭೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಕಳ್ಳತನ ಪ್ರಕರಣದಲ್ಲಿ ಬಂಧಿತರು. ಲೋಕೇಶ್ ಮಂಜುನಾಥ ನಾಯ್ಕ ಅವರು ಸುಮಾರು 53.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿ ಪರ್ಸಿನಲ್ಲಿಟ್ಟು, ಪತ್ನಿಯ ವ್ಯಾನಿಟಿ
ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು
ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ.ಎಮಿಯೆಂಟೆಕ್ ಸಿಎಂಡಿ ಸಿಜಿತ್ ಆರ್ಯ ಬಿಲ್ಡ್ ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಸಾರ್ವಿನ್ ಪ್ಲಾಸ್ಟ್
ಭಾರತೀಯ ಪರಂಪರೆ, ಮಾಧ್ವ ತತ್ವವನ್ನು ಜಗತ್ತಿಗೆ ಸಾರಿದ ಹಾಗೂ ಗೀತಾಸಾರವನ್ನು ವಿಶ್ವಕ್ಕೆ ಪಸರಿಸಲು ಕಾರಣವಾಗಿರುವ ಉಡುಪಿ ಅಷ್ಠಮಠಗಳ ಪೈಕಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಯವರ ಪರ್ಯಾಯ ಪೀಠಾರೋಹಣ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ವಿವಿಧೆಡೆಗಳಿಂದ ಆಗಮಿಸಿದ್ದ ಹೊರೆಕಾಣಿಕೆಯನ್ನು ಮೆರವಣಿಗೆಯ ಮೂಲಕ ಮಠಕ್ಕೆ ಅಗಮಿಸಿತ್ತು. ಈ ಸಂದರ್ಭ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ಪಲಿಮಾರಿನ ನಡಿಯೂರು ಕೊಪ್ಪಲ ರಸ್ತೆಯಲ್ಲಿ ವಶಕ್ಕೆ ಪಡೆದಿದ್ದಾರೆ.ಅಕ್ರಮ ಮರಳುಗಾರಿಕೆಯ ಬಗ್ಗೆ ಮಾಹಿತಿ ಪಡೆದ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಸಿಬ್ಬಂದಿಗಳೊಂದಿಗೆ ನಂದಿಕೂರು ಪಲಿಮಾರು ರಸ್ತೆಯಾಗಿ ಪೊಲೀಸ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ಅವರಾಲು ಮಟ್ಟು ಕಡೆಯಿಂದ ಕುಂಜ್ಞಾಲಿ ತೋಟ ಸಣ್ಣ ಸೇತುವೆ ಬಳಿ ಕೆ.ಎಲ್. 60-ಎ.9937ನೋಂದಾನಿ ಸಂಖ್ಯೆಯ ಟಿಪ್ಪರೊಂದು ಪೊಲೀಸ್ ವಾಹನ ನೋಡಿ ಪಕ್ಕದ
ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು ನಡೆಯಲಿದೆ ಎಂದು ಸಂತ ಲಾರೆನ್ಸರ ಬಸಿಲಿಕ ಧರ್ಮಗುರು ಅಲ್ಬನ್ ಡಿಸೋಜಾ ಹೇಳಿದರು. ಅವರು ಕಾರ್ಕಳ ಅತ್ತೂರು ಚರ್ಚ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ವಧರ್ಮದ ಏಕತೆಯ ಹಬ್ಬವಾಗಿದ್ದು, ನಾಡಿನ ಲಕ್ಷಾಂತರ ಭಕ್ತರು ಬರುವ
ಪಡುಬಿದ್ರಿ: ತೆಂಕ ಎರ್ಮಾಳು ಗ್ರಾ.ಪಂ. ಅಧ್ಯಕ್ಷೆ ಸುರೇಖರವರ ಪತಿ ಚಂದ್ರಶೇಖರ ಪೂಜಾರಿ(57) ಹೃದಯಘಾತದಿಂದ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಗ್ರಾಮದೆಲ್ಲೆಡೆ ಸಮಾಜಸೇವೆಯಿಂದ ಜನಾನುರಾಗಿಯಾಗಿದ್ದ ಇವರು ಹುಲಿವೇಷ ಹಾಕಿ ಬಾರೀ ಗಾತ್ರದ ಮರಕಾಲು ಕುಣಿತದಲ್ಲಿ ತನ್ನ ಎಳೆಯ ವಯಸ್ಸಿನಲ್ಲಿ ಹೆಸರು ಗಳಿಸಿದ್ದರು. ಪತ್ನಿ ಸಹಿತ ಸಹಿತ ಇಬ್ಬರು ಪುತ್ರರು ಹಾಗೂ ಒರ್ವ ಪುತ್ರಿಯನ್ನು ಅಗಲಿದ್ದಾರೆ. ಕರ್ನಾಟಕ ರಾಜ್ಯ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಕಾಪು ಶಾಸಕ ಗುರ್ಮೆ



























