ಉಚ್ಚಿಲ:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಇಂದು ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ
ಬೈಂದೂರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಉದ್ದೇಶದಿಂದ ಸಮೀಕ್ಷೆ ಎರಡು ದಿನಗಳು ಬಾಕಿ ಉಳಿದಿದ್ದು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣಗೊಂಡಿದ್ದು ಶೇ.10ರಷ್ಟು ಸಮೀಕ್ಷೆ ಬಾಕಿ ಉಳಿದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯ ಪಡಿತರ ಚೀಟಿಯ ಅಂಕಿ ಅಂಶಗಳ ಪ್ರಕಾರ ಸುಮಾರು 1,35,000 ಮನೆಗಳಿದ್ದುಅ.16ರಂದು ಸುಮಾರು 1,20,000 ಮನೆಗಳು ಪೂರ್ಣಗೊಂಡಿದೆ.ಇನ್ನು ಎರಡು ದಿನಗಳಲ್ಲಿ ಸುಮಾರು
ಮಣಿಪಾಲ, ಅಕ್ಟೋಬರ್ 14, 2025: ಇಂದು ಉಡುಪಿ ಜಿಲ್ಲೆಯ ಆರೋಗ್ಯ ಕ್ಷೆತ್ರದಲ್ಲಿ ಒಂದು ಮೈಲಿಗಲ್ಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಇಂದು ತನ್ನ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಉದ್ಘಾಟಿಸಿತು, ಇದು ಈ ಪ್ರದೇಶದಲ್ಲಿ ಒಂದು ಪರಿವರ್ತನಾ ಅಧ್ಯಾಯವನ್ನು ಗುರುತಿಸುತ್ತದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯವನ್ನು ಒಲಿಂಪಿಕ್ ಬ್ಯಾಡ್ಮಿಂಟನ್ ಚಾಂಪಿಯನ್ ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿ ಸೈನಾ ನೆಹ್ವಾಲ್ ಅನಾವರಣಗೊಳಿಸಿದರು. ಶಸ್ತ್ರಚಿಕಿತ್ಸಾ
ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್
ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಕಚೇರಿಯ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿಆರ್ಟಿಓ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ
ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ
ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ.
ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅವರು ಮಾತನಾಡಿ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸೋಣ ಹಾಗೂಸಾಮಾಜಿಕ ನ್ಯಾಯ, ಪ್ರತಿಭಾ ನ್ಯಾಯ, ಪ್ರಾದೇಶಿಕ ನ್ಯಾಯವನ್ನು ಪ್ರತಿಪಾದಿ ಸುತ್ತಲೇ ಹಿಂದಿನ ಕಾಪು ತಾಲೂಕು ಸಮ್ಮೇಳನಗಳನ್ನು
ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಗಣೇಶ್
ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀ ಹರಿರಾಮ್ ಶಂಕರ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್




























