ಪಡುಬಿದ್ರಿಯ ಮುಖ್ಯ ಬೀಚ್‌ನಲ್ಲಿ ವಿಶ್ರುದ್ ಕೋಸ್ಟಲ್ ಡೆವಲಪರ್ಸ್ ವತಿಯಿಂದ ಸ್ವಚ್ಚತಾ ಪಕ್ವಾಡ್ ಅಭಿಯಾನ ಕಾರ್ಯಕ್ರಮ ನಡೆಯಿತು. ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸಿ.ಎಸ್.ಬಿ ಸಿಬ್ಬಂದಿಗಳು ಸಹಿತ ಸಾರ್ವಜನಿಕರ ಸಹಕಾರದಿಂದ ಕಾರ್ಯಕ್ರಮ ಉತ್ತಮವಾಗಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ
ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ 3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬೈಂದೂರು ಯಡ್ತರೆ ಸರ್ಕಲ್‍ನಲ್ಲಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಯುತ್ತಿದೆ. ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ, ಈ ವರೆಗೆ ಇಲ್ಲದ
ಸುಳ್ಸೆ ಯಕ್ಷಿಬ್ರಹ್ಮ ನಂದಿಕೇಶ್ವರ ದೈವಸ್ಥಾನ ಸಮೀಪದ ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55) ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತಪಟ್ಟ ದಂಪತಿಗಳು. ಮಹಾಬಲ ದೇವಾಡಿಗ ಸುಳ್ಸೆ ಕರಣಿಕರ ಮನೆಯಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದು, ಶುಕ್ರವಾರ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಕಳೆದರೂ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಪತ್ನಿ ಲಕ್ಷ್ಮೀ ಅನುಮಾನಗೊಂಡು ಕರಣಿಕರ ಮನೆಗೆ ತೆರಳಿದ್ದರು. ಈ ವೇಳೆ ಕರಣಿಕರ ಮನೆಗೆ ಹೋಗುವ ಕಾಲುದಾರಿಯಲ್ಲಿ ಮುರಿದು
ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸಹಾಯಧನವನ್ನು ಅಕ್ಟೋಬರ್ 1ರಂದು ವಿತರಿಸಲಾಗುವುದು ಎಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಪಡುಬಿದ್ರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ರೂ. 20 ಲಕ್ಷ
ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು 3ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರು ಗಣಿ ಇಲಾಖೆ ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಮೂಲಕ ಮುಷ್ಕರ ನಿರತರೊಂದಿಗೆ ನಡೆದ ಮಾತುಕತೆ ವಿಫಲತೆ ಕಂಡುಬಂದ ಹಿನ್ನೆಲೆಯಲ್ಲಿ ಅರ್ನಿಷ್ಟಾವಧಿ ಮುಷ್ಕರ ಮುಂದುವರಿಯುವ ಸೂಚನೆ ಕಂಡು ಬಂದಿದೆ. ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಬಸ್
ಸದ್ಯ ಉಡುಪಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದ್ದು, ಅಧಿಕೃತ ಮರಳು ಗಣಿಗಳು ಮಾತ್ರ ಕಾರ್ಯಚರಣೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲೂ ಕೂಡ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ. ಕುಂದಾಪುರ ತಾಲೂಕು ಬೇಳೂರು ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಸಕ್ರಮ ಮರುಳುಗಾರಿಕೆಯನ್ನ ದುರುಪಯೋಗ ಪಡಿಸಿಕೊಂಡ ಕೆಲ ಪಂಚಾಯತ್ ಸದಸ್ಯರು ತಮ್ಮ ರಾಜಕೀಯ ಪ್ರಭಾವ ಬಳಸಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ವಿವರ ವಿಡಿಯೋ
ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.
ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ. ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಹೇಳಿದರು. ಅವರು ಕಾರ್ಕಳ ನಗರ ಠಾಣೆ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಮಸೀದಿಯ ಧರ್ಮಗುರುಗಳು ಮತ್ತು ಮಸೀದಿಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಈದ್ ಮಿಲಾದ್ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣವಾದ ಭದ್ರತೆಯನ್ನು ಕೊಡುತ್ತೇವೆ. ಸಮಯದೊಳಗಡೆ ಸಭೆ, ಸಮಾರಂಭಗಳನ್ನು ಮುಕ್ತಾಯಗೊಳಿಸಬೇಕು ಎಂದರು. ಈ ಸಂದರ್ಭ
ಭಾರತೀಯ ಸೇನೆಗೆ ಸೇರಬಯಸುವ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ ಉಡುಪಿಯಲ್ಲಿ ಆಯೋಜಿಸಲಾಗಿದೆ. ಉಡುಪಿ ಸಮೀಪದ ಉದ್ಯಾವರದ ಹಿನ್ನೀರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸೀ ಸೈಲಿಂಗ್ ತರಬೇತಿ ಕಾರ್ಯಾಗಾರದಲ್ಲಿ ಹೊರರಾಜ್ಯದ ಕೆಡೆಟ್ ಗಳು ಭಾಗವಹಿಸಿರುವುದು ವಿಶೇಷವಾಗಿತ್ತು. ನೂತನ ಕೆಡೆಟ್ಗಳ ನೌಕಯಾನದ ಎಕ್ಸ್ಪೀರಿಯನ್ಸ್ ಹೇಗಿತ್ತು ಅಂತೀರಾ… ಈ ಸ್ಟೋರಿ ನೋಡಿ ಭಾರತೀಯ ನೌಕಾದಳಕ್ಕೆ ಸೇರಬಯಸುವ ಎನ್‍ಸಿಸಿ ಕೆಡೆಟ್‍ಗಳು
ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಸೆ.24 ರಂದು ಸಂಜೆ ಮನೆಯಿಂದ ಹೊರಟವರು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ,ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ತೆರಳಿ ಅಲ್ಲಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




























