ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬಾಳು ಕಟ್ಟಿನಾಡಿ ಚಕ್ರಾ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ಕೆಲಸ ನಡೆಯುತ್ತಿದ್ದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಪರಿಶೀಲನೆ ನಡೆಸಿದರು. ಹೊಳೆಯ ಪಕ್ಕದ ಜನರ ಬದುಕಿಗೆ ಹಲವು ವರ್ಷಗಳ ಕಾಲ ಸಂಕಷ್ಟದ ಸ್ಥಿತಿಯಿತ್ತು. ಶಾಲಾ ಮಕ್ಕಳು, ಹಳ್ಳಿಯ ನಾಗರಿಕರು, ಊರಿನ ಗ್ರಾಮಸ್ಥರು ಯಾವುದೇ
ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು. ತಾ-07-08-2023 ನೇ ಸೋಮವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನ ದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 74 ವಯಸ್ಸಿನ ಶ್ರೀ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ
ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್ ನಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ ಎಂದು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆರೋಪಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾರ್ಕಳ ಎರ್ಲಪಾಡಿಯ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮನ ಪಾರ್ಕ್ ನಿರ್ಮಾಣಗೊಂಡಿರುವ ಜಮೀನು, ಗೋಮಾಳದ
ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ -4 ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಇವರ ಅಂಗಸಂಸ್ಥೆ, ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರ ನಾಗೂರು ಸಂಭ್ರಮದಲ್ಲಿ ನಡೆಯಿತು. ಬೈಂದೂರು ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಗುರುರಾಜ್ ಗಂಟಿಹೊಳೆ ಯವರಿಗೆ ಡಿವೈನ್ ಪಾರ್ಕ್ ನ ಸಂಸಾರಿ ಸಂತ ಪರಮಪೂಜ್ಯ ಡಾಕ್ಟರ್ ಜೀ ಅವರ ಸಾಧನಾ ಗಾಥೆಯ 5 ಆವೃತ್ತಿಯನ್ನು ಹಸ್ತಾಂತರಿಸಿದರು. ಕೋಟ ಮೂಡು ಗಿಳಿಯಾ ರು ಸರ್ವಕ್ಷೇಮ
ಸ್ಯಾಂಡಲ್ವುಡ್ನಲ್ಲಿ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ. ಥೈಲ್ಯಾಂಡ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.
ಉಡುಪಿಯ ಮಲ್ಪೆ ಬೀಚ್‌ನ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಇದೇ ವೇಳೆ ಇನ್ನೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಆಕೆಯ ಗೆಳತಿ ಯಶಸ್ವಿನಿ(16) ಎಂಬವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಮಂಗಳೂರು ಕಡೆಗೆ
ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು. ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್
ಪಶ್ವಿಮ ಘಟ್ಟದಿಂದ ಹರಿದು ಬರುವ ಭಾರೀ ಪ್ರವಾಹದ ನದಿಗಳಿಂದ ಆಗುವ ಭೂ ಸವೆತ, ಕೃಷಿ ಭೂಮಿ ನಾಶವನ್ನು ಕಾಣಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾಗಲಿ, ಸಂಬಂಧ ಪಟ್ಟ ಜನಪ್ರತಿನಿಧಿಗಳು ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಆಗುಂಬೆ ಬಳಿಯ ಸೀತಾನದಿಯಲ್ಲಿ ಹುಟ್ಟಿ ಬರುವ ಸೀತಾ ನದಿ ಅತೀ ಹೆಚ್ಚು ತಿರುವುಗಳನ್ನು ಮತ್ತು ವೇಗದ ತೀರ್ವತೆ ಇರುವ ನದಿಯಾಗಿದೆ. ನೀಲಾವರ ಬಳಿಯ ಬಾವಲಿ ಕುದ್ರು ಪ್ರದೇಶದ ಉತ್ತರ ಭಾಗ ಕೂರಾಡಿ ಬಂಡೀಮಠ
ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ತಾರಾಪತಿ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಅಂದಾಜು 5 ನಾಟಿಕಲ್ ಮೈಲುಗಳ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಬಲೆಗಳ ನಡುವೆ ಸಿಲುಕಿದ್ದ ಓರ್ವ
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಇದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಮುಂದೊಂದು ದಿನ ರಾಜಕೀಯ ನಿವೃತ್ತಿ -ದೇಹಾಂತ್ಯ ಆಗುವವರೆಗೆ ನಾನು ಬಿಜೆಪಿಯಲ್ಲಿ ಕಾರ್ಯಕರ್ತನಾಗಿರುತ್ತೇನೆ.ಇಹಲೋಕ ತ್ಯಾಗ ಮಾಡುವ




























