ಬ್ರಹ್ಮಾವರದಲ್ಲಿ ನೂತನ ತಾಲೂಕು ಕೇಂದ್ರವಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಆಗಸ್ಟ್ 5ರಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಬಳಿಕ ಭಂಟರ ಭವನದಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಐ ಅರುಣ್ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ರಾಷ್ಟ್ರೀಯ
ಉಡುಪಿ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಶರಣ್ ಪಂಪ್‍ವೆಲ್ ಮತ್ತು ದಿನೇಶ್ ಮೆಂಡನ್ ಮೇಲೆ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿರುವುದು ಖಂಡನೀಯ ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಖಂಡಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಖಂಡನೆ ವ್ಯಕ್ತಪಡಿಸಿದರು. ಹಿಂದೂ ಸಮಾಜದ ಮೇಲೆ ಆಗುತ್ತಿರುವ
ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ
ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ನೊಳಗೆ ಹೋಗಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ನಡೆದಿದೆ. ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದನ್ನು ವಾಹನದ ಅಡಿಗೆ ಬೀಳದಂತೆ ರಕ್ಷಿಸುವ ನಿಟ್ಟಿನಲ್ಲಿ ದಾಮೋದರ್ ಪಾಂಗಳ ಮತ್ತು ಸ್ಥಳೀಯರು ಅವರು ಹಾವನ್ನು ರಕ್ಷಣೆ ಮಾಡಿ, ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಟ್ಟಿದ್ದರು. ಈ ವೇಳೆ
ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತುಗಳು ಹಾನಿಯಾಗಿಲ್ಲ. ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕರು ತಿಳಿಸಿದ್ದಾರೆ.
ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ ಲಕ್ಷ 6 ಹಸ್ತಾಂತರಿಸಲಾಗುತ್ತಿದೆ.
ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಕಾರ್ಯಚರಣೆ ನಡೆದಿದ್ದು ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಸತೀಶ್ ಖಾರ್ವಿ ಎಂಬುವವರು ನಾಪತ್ತೆಯಾಗಿದ್ದು ನಿನ್ನ ರಾತ್ರಿ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಕಾರ್ವಿ ಶವ ಪತ್ತೆಯಾಗಿದೆ.
ಕದಿಕೆ ಟ್ರಸ್ಟ್‌ನ ಮಾರ್ಗದರ್ಶನದಲ್ಲಿ ತಯಾರಾದ ಅಡಿಕೆ ಮತ್ತು ಇತರ ನೈರ್ಸಗಿಕ ಬಣ್ಣದ ಉಡುಪಿ ಸೀರೆಗಳನ್ನು ತಾಳಿಪಾಡಿ ನೇಕಾರರ ಸೊಸೈಟಿ ಕಿನ್ನಿಗೋಳಿಯಲ್ಲಿ ಬಿಡುಗಡೆ ಮಾಡಲಾಯಿತು. ೨೦೧೮ರಲ್ಲಿ ಉಡುಪಿ ಸೀರೆ ಪುನರುಜ್ಜೀವನವನ್ನು ಪ್ರಾರಂಭಿಸಿದ ಕದಿಕೆ ಟ್ರಸ್ಟ್, ಎನ್‌ಜಿಒ ಸಾಮಾಜಿಕ ಮಾಧ್ಯಮ ಪ್ರಚಾರ, ನಬಾರ್ಡ್ ಬೆಂಬಲದೊಂದಿಗೆ ತರಬೇತಿ ಮತ್ತು ಇತರ ಕ್ರಮಗಳಂತಹ ಬಹುಮುಖಿ ವಿಧಾನಗಳೊಂದಿಗೆ ಎರಡು ಜಿಲ್ಲೆಗಳಲ್ಲಿ ನೇಯ್ಗೆಯನ್ನು ಅಳಿವಿನಿಂದ ಮರಳಿ ತಂದಿದೆ. ಉಡುಪಿ
ಉಡುಪಿ ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್‍ಗೆ ಸಿಎಂ ದಿಢೀರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ ಸಿಎಂ, ‘ಈ ಯೋಜನೆಯಿಂದ ನಿಮಗೆ ಹಣ ಸಿಗುವುದಿಲ್ಲ, ಬದಲಾಗಿ ನಿಮ್ಮ ಅಮ್ಮನಿಗೆ ಹಣ ಸಿಗುತ್ತದೆ ಎಂದಿದ್ದಾರೆ. ಇದೇ ವೇಳೆ ‘ಡಿಗ್ರಿ ಪಾಸಾದ ಮೇಲೆ ನಿಮಗೆ ಕೆಲಸ ಸಿಗುವ ತನಕ ಯುವನಿಧಿ ನೀಡುತ್ತೇವೆ. ನಿಮ್ಮ ಭವಿಷ್ಯಕ್ಕೆ




























