ಎರ್ಮಾಳು ಬಡಾ ದೇವಸ್ಥಾನ ಬಳಿಯ ನಿವಾಸಿ ಅದಮಾರು ವಿದ್ಯಾಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ಕುಂಜೂರಿನ ಮನೆಯೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ನವೀನ್ ಬಂಗೇರ (53), ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು ಕಳೆದ ಸುಮಾರು ಮೂರು
ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಕಾಮುಖ ಆರೋಪಿ ಕಲ್ಕತ್ತ ವೆಸ್ಟ್ ಬೆಂಗಾಲ್ ಮುರ್ಶಿದಾಬಾದ್ ನಿವಾಸಿ ಮಾಫಿಜುಲ್ ಶೇಖ್ಈತ ಪಡುಬಿದ್ರಿ ಅಂಚೆ ಕಛೇರಿ ಪಕ್ಕದ ನಿರ್ಮಾಣ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕನಾಗಿ
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ.
ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ. ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಆಟಿ ಮಾರಿಪೂಜೆ ಸಂಭ್ರಮದಲ್ಲಿರುವ ಕಾಪುವಿನ
ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ಸು ನಿಲ್ದಾಣದ ಎದುರು ಒಳಚರಂಡಿಯ ಮಲಿನ ನೀರು ಸೋರಿಕೆಯಾಗಿ ಉಂಟಾಗುವ ಅವಾಂತರಗಳು ಹೇಳತಿರದು. ಇಲ್ಲಿಯ ಕೊಳಚೆ ನೀರು ಸೋರಿಕೆ ಹೊರಚಿಮ್ಮಿ ರಸ್ತೆ ಮೇಲೆ ಹರಿಯುತ್ತಿರುವುದಲ್ಲದೆ ಪರಿಸರ ಮಾಲಿನ್ಯಗೊಂಡು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತಿದೆ. ಬಂಡಿಮಠ ಬಸ್ ನಿಲ್ದಾಣ ಮುಂಭಾಗ ಹೆದ್ದಾರಿಯಲ್ಲಿ ಎರಡು ಕಡೆ ಚರಂಡಿಯಿಂದ ನೀರು ಸೋರಿಕೆಯಾಗುತ್ತದೆ. ಹೆದ್ದಾರಿಯಲ್ಲಿ ಸಹಸ್ರಾರು ವಾಹನಗಳು ನಿತ್ಯ ಓಡಾಟ ನಡೆಸುತ್ತವೆ.
ಪರಿಸರವನ್ನು ಸಂರಕ್ಷಿಸುವ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದ್ದು, ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸವನ್ನು ಉಳಿಸಬೇಕಾಗಿದೆ ಎಂಬುದಾಗ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಹೇಳಿದ್ದಾರೆ. ಅವರು ಪಡುಬಿದ್ರಿ ಪೊಲೀಸ್ ಠಾಣೆ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ ಜಂಟಿಯಾಗಿ ಹೆಜಮಾಡಿ ಟೋಲ್ ಗೇಟ್ ಬಳಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿ, ಮರಗಿಡಗಳ ಮಹತ್ವ ಮಹಾಮಾರಿ ಕೋವಿಡ್ ಸಂದರ್ಭ ನಾವೆಲ್ಲಾ ಅರಿತುಕೊಂಡಿದ್ದೇವೆ.
ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾಯತ್
ಕುಂದಾಪುರ: ಕೊರಗರಿಗೆ ಕೃಷಿ ಭೂಮಿ ಇಲ್ಲದಿರುವುದರಿಂದ ಅವರು ಕೃಷಿಕರಾಗದೇ ಇಂದಿಗೂ ದಯನೀಯ ಸ್ಥಿತಿಯಲ್ಲಿ ಇದ್ದಾರೆ. ಹಲವು ಸರ್ಕಾರಗಳು ನಾನಾ ಯೋಜನೆಗಳನ್ನು ತಂದರೂ ಕೊರಗರಿಗೆ ಕೃಷಿ ಮಾಡಿಕೊಳ್ಳಲು ತುಂಡು ಭೂಮಿಯನ್ನೂ ಕೊಟ್ಟಿಲ್ಲ. ಕೊರಗ ಸಮುದಾಯದ ಮನವಿಗಳು ಕೇವಲ ಕುಂದು ಕೊರತೆ ಸಭೆಗೆ ಮಾತ್ರವೇ ಸೀಮಿತವಾಗಬಾರದು. ಅದು ಕಾರ್ಯರೂಪಕ್ಕೂ ಬರಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಹೇಳಿದರು. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ
ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ. ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ
ಕುಂದಾಪುರ: ಅರಶಿನಗುಂಡಿ ಜಲಪಾತ ವೀಕ್ಷಿಸುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಿಶ್ವಪ್ರಸಿದ್ದ ತ್ರಾಸಿ-ಮರವಂತೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಮುಂಜಾಗ್ರತ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಕೆಂಪು ಬಣ್ಣದ ರಿಬ್ಬನ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಅಲ್ಲದೇ ಬೀಚ್




























