ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ
ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಕಾಪು
ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಯವರು, ಇಂದು ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ ಕಾಡಿಪಟ್ನ – ಪಡುಬಿದ್ರಿ ಬೀಚ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ., ಬ್ರಹ್ಮಾವರದಲ್ಲಿ 106, ಬೈಂದೂರಿನಲ್ಲಿ 130, ಕುಂದಾಪುರದಲ್ಲಿ 85, ಕಾರ್ಕಳದಲ್ಲಿ 151, ಕಾಪುವಿನಲ್ಲಿ 126 ಮತ್ತು ಹೆಬ್ರಿಯಲ್ಲಿ 116 ಮಿ.ಮೀ. ಮಳೆ ದಾಖಲಾಗಿದೆ.
ಉಡುಪಿ: ಎರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಉಡುಪಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರದ ಮೂಡನಿಡುಂಬೂರು ಬ್ರಹ್ಮ ಬೈದರ್ಕಳ ಗರಡಿ ಮತ್ತು ಬನ್ನಂಜೆ ಶಿರಿಬೀಡು ವಾರ್ಡ್‌ನಲ್ಲಿವ ಗರಡಿಗೆ ವಿಪರೀತ ಮಳೆಯಿಂದಾಗಿ ನೀರು ನುಗ್ಗಿದೆ. ಸಾಕಷ್ಟು ಮನೆಗಳ ಅಂಗಳದವರೆಗೂ ನೀರು ನುಗ್ಗಿದ್ದು, ಹರಿಯುವ ನೀರಿನಲ್ಲಿ ಕಾರ್ಮಿಕರು ನಡೆದಾಡಲು ಹರಸಾಹಸ ಪಡುವಂತಾಗಿದೆ. ಇಂದ್ರಾಣಿ ನದಿ ಇದೀಗ ನೆರೆಯಿಂದ
ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುತಿಭಾ ಪುರಸ್ಕಾರ – 2023 ಕಾರ್ಯಕ್ರಮ ಜುಲೈ 8 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಟಿಎಂಎಪೈ ಆಡಿಟೋರಿಯಂ ನ ಮೂರನೇ ಮಹಡಿಯಲ್ಲಿ ಜರುಗಲಿದೆ ಎಂದು ಉಡುಪಿ ಜಿಲ್ಲಾ
ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚರ್ಮುರಿ ಅಂಗಡಿಗಳು ಸಮುದ್ರಪಾಲಾಗಿದೆ. ಉಚ್ಚಿಲ ಭಾಗದಲ್ಲಿ ಸಮುದ್ರ ತೀರದ ಮನೆಗಳಿಗೆ ಅಪ್ಪಳಿಸಿ, ಹಲವು ಮರಗಳು ಸಮುದ್ರಪಾಲಾಗಿವೆ. ಸಮುದ್ರತೀರದಲ್ಲಿ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಉಳ್ಳಾಲ ಬೀಚ್, ಮೊಗವೀರಪಟ್ನ, ಸುಭಾಷನಗರ, ಕೈಕೋ, ಕಿಲೆರಿಯಾನಗರ, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ
ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ.
ಉಡುಪಿ: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆ ತಡರಾತ್ರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ರೈಲ್ವೆ ಟ್ರ್ಯಾಕ್ ನ ವಿದ್ಯುತ್ ಕಂಬದ ಮೇಲೆ ಮರ ಕುಸಿದು ಬಿದ್ದಿತ್ತು. ದೆಹಲಿ – ಕೇರಳ ನಡುವೆ ಓಡುವ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ರೈಲು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ, ಉಡುಪಿ ಜಿಲ್ಲೆಯ ರೈಲ್ವೆ ಟ್ರ್ಯಾಕ್ ನಲ್ಲಿ ಓಡುವ ಎಲ್ಲಾ ರೈಲುಗಳ ಸಂಚಾರ ಎರಡು ಗಂಟೆ ಸ್ಥಗಿತಗೊಂಡವು. ರೈಲ್ವೆ
ಉಡುಪಿ : ಉಡುಪಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಿಂದ ಸುರಿದ ಮುಂಗಾರು ಮಳೆ ವರದಿಯ ಪ್ರಕಾರ ಬೈಂದೂರು, ಕಾಪು ಮತ್ತು ಹೆಬ್ರಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸರಾಸರಿ 71 ಮಿಲಿ ಮೀಟರ್ ಮಳೆಯಾಗಿದ್ದು, ಕುಂದಾಪುರದಲ್ಲಿ 64, ಕಾರ್ಕಳದಲ್ಲಿ 60, ಹೆಬ್ರಿಯಲ್ಲಿ 70, ಬೈಂದೂರಿನಲ್ಲಿ 91, ಬ್ರಹ್ಮಾವರದಲ್ಲಿ 61 ಮತ್ತು




























