ಕುಂದಾಪುರ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೊರಗರ ಭೂಮಿ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಸಂಬಂಧಪಟ್ಟಂತೆ ನಾಡ ಗ್ರಾಪಂ ಮುಂಭಾಗ ಧರಣಿ ನಡೆಸುತ್ತಿದ್ದು, ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರ ಸೂಚನೆಯಂತೆ ಸ್ಥಳಕ್ಕೆ ಆಗಮಿಸಿದ ಕುದಾಪುರ ತಹಶೀಲ್ದಾರ್
ಉಡುಪಿ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. 2023 ರ ಘೋಷ ವಾಕ್ಯ
ಬ್ರಹ್ಮಾವರ : ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಸ್ವೀಝಲ್ ಫುರ್ಟಾಡೊ ಅವರು ಸೌತ ಅಮೇರಿಕಾ ಪೆರುವಿನಲ್ಲಿ ನಡೆದ ಮಿಸ್ ಟೀನ್ ಇಂಟರ್‍ನ್ಯಾಶನಲ್ ಸ್ಪರ್ಧೆಯಲ್ಲಿ ಮಿಸ್ ಟೀನ್ ಯೂನಿವರ್ಸಲ್ ಇಂಟರ್‍ನ್ಯಾಷನಲ್ ಪ್ರಿನ್ಸಸ್ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಸ್ವೀಜಲ್ ಅವರು ‘ಮಿಸ್ ಟೀನ್ ಯೂನಿವರ್ಸಲ್ ಏಷ್ಯಾ’ ಮತ್ತು ‘ಅತ್ಯುತ್ತಮ ರಾಷ್ಟ್ರೀಯ ಕಾಸ್ಟೂಮ್ಸ್ ಪ್ರಶಸ್ತಿ’ಯನ್ನೂ
ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ತಮ್ಮ ಜೀವವನ್ನೇ ಪಣಕ್ಕಿಟ್ಟು ಸದಾ ನೆರವಿಗೆ ಧಾವಿಸುವ ಮಾನವೀಯತೆಯ ಸರದಾರ ಈಶ್ವರ್ ಮಲ್ಪೆ, ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ನೀವು ನಂಬಲಿಕ್ಕಿಲ್ಲ, ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಈ ನಾಯಿಗಳು ಮಲ್ಪೆ ಬಂದರಿನ ಧಕ್ಕೆಯೊಳಗೆ ಹೊರ ಬರಲಾಗದೆ ಅಕ್ಷರಶಃ ಬಂಧಿಯಾಗಿದ್ದವು. ಎಲ್ಲ ಕಡೆ ನೀರಿನಿಂದ ಆವೃತವಾಗಿರುವುದರಿಂದ ನಾಯಿಗಳು ಒಳಗೇ ಬಂಧಿಯಾಗಿದ್ದವು.
ಉಡುಪಿ : ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆ ಎಸ್ ಆರ್ ಟಿ ಸಿ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಜೂನ್ 11ರ ರವಿವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ […]
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಬ್ರಹ್ಮಾವರ ಕೃಷಿ ಇಲಾಖೆಯ ವತಿಯಿಂದ ಹಲಸು ಮೇಳವನ್ನು ಜೂನ್ 10 ರಂದು ಆಯೋಜಿಸಲಾಗಿತ್ತು. ಬ್ರಹ್ಮಾವರ ಕೃಷಿ ಇಲಾಖೆಯಿಂದ ಪ್ರತೀ ವರ್ಷದಂತೆ ನಡೆಸಿಕೊಂಡು ಬರುವ ಹಲಸು ಮೇಳವನ್ನು ಈ ಬಾರಿ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು ಹಲಸು ಹಣ್ಣುಗಳು, ಹಲಸಿನ ಹಪ್ಪಳ, ಹಲಸಿನ ಸಂಡಿಗೆ, ಸೇರಿದಂತೆ ವಿವಿಧ ಬಗೆಯ ಹಲಸಿನ ಖಾದ್ಯಗಳು ಜನರನ್ನ ಕೈ ಬೀಸಿ ಕರೆಯುತ್ತಿತ್ತು. ಕೇವಲ ಹಲಸಿನ
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ. ಈ ವಿಚಾರವಾಗಿ ವಿದ್ಯಾರ್ಥಿನಿ ಜೋರಾಗಿ ಕೂಗಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದರು. ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದಾಗ, ವಿದ್ಯಾರ್ಥಿನಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ
ಉಡುಪಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೇಸಿಗೆಯ ಧಗೆ ಮತ್ತು ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ಕರಾವಳಿ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಜಿಲ್ಲೆಯಾದ್ಯಂತ ತುಂತುರು ಮಳೆ ಮುಂದುವರಿದು ಮೋಡ ಕವಿದ ವಾತಾವರಣ ಮನೆಮಾಡಿದೆ. ಆದರೆ ಕಡಲತೀರದ ಸೌಂದರ್ಯವನ್ನು ಸವಿಯಲು ದೂರದೂರಿನಿಂದ ಬಂದ ಪ್ರವಾಸಿಗರಿಗೆ ಮಾತ್ರ ಮಳೆಯ ದಿಢೀರ್ ಆಗಮನ ಸಂತೋಷವನ್ನುಂಟು ಮಾಡಲಿಲ್ಲ. ಬಿಪರ್ ಜೋಯ್
ಬೈಂದೂರು ತಾಲೂಕಿನ ನಾಡ ಗ್ರಾ.ಪಂ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು 5 ಸೆಂಟ್ಸ್ ಕಾಲೊನಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಎಂಬವರಿಗೆ ಸಮಾನ ಮನಸ್ಥಿತಿ ಯವಕರ ವಾಟ್ಸಾಪ್ ಗ್ರೂಪ್ ಹಾಗೂ ಲಯನ್ಸ್ ಕ್ಲಬ್ ನಾವುಂದ, ಗ್ರಾಮ ಪಂಚಾಯತ್ ನಾಡ, ಮತ್ತು ಪತ್ರಕರ್ತ ಮಿತ್ರರು ಸುಸಜ್ಜಿತವಾದ ಮನೆಯನ್ನು ನಿರ್ಮಿಸಿ ಕೊಟ್ಟರು. ಬಂಧುಗಳಿಲ್ಲದೆ ತಟ್ಟಿಯಲ್ಲಿ ಬದುಕನ್ನು ಸಾಗಿಸುತ್ತಿದ್ದ ಚೆಂದು ಅಜ್ಜಿಯ ಸಂಕಷ್ಟದ ಬದುಕಿನ




























