Home ಕರಾವಳಿ Archive by category ಉಡುಪಿ (Page 93)

ಶಾಲಾ ಪ್ರಾರಂಭೋತ್ಸವದಲ್ಲಿ ಉಡುಪಿ ಡಿಸಿ ಕೂರ್ಮಾರಾವ್ ಎಂ. ಭಾಗಿ

ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು

ಸರಕಾರ ಖಾಸಗಿ ಬಸ್ ಗಳ ವೆಚ್ಚ ಭರಿಸಿದ್ರೆ ಖಾಸಗಿ ಬಸ್ ನಲ್ಲೂ ಉಚಿತ ಪ್ರಯಾಣ : ಉಡುಪಿ ಸಿಟಿ ಬಸ್ ಮಾಲಕರ ಸಂಘ

ಉಡುಪಿ : ರಾಜ್ಯದಾದ್ಯಂತ ಕಾಂಗ್ರೆಸ್ ನ ಭರವಸೆ ನೀಡಿದ ಗ್ಯಾರಂಟಿ ಗಳು ಒಂದೊಂದೆ ಜಾರಿ ಆಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ನಿನ್ನೆಯಷ್ಟೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರಾಜ್ಯದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಸರಕಾರಿ ಬಸ್ ಮಾತ್ರ ಅಲ್ಲ, ಖಾಸಗಿ ಬಸ್ ಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ಮಾಡುತ್ತಿವೆ. ಇಲ್ಲಿ ಮಹಿಳೆಯರಿಗೆ ಸಮಸ್ಯೆ ಅಗುವ ಸಾದ್ಯತೆ ಇದೆ. ರಾಜ್ಯದಾದ್ಯಂತ 17

‘ಹೋದ್ರೆ ನನ್ನದೊಂದು ತಲೆಕೂದಲು ಮಾತ್ರ ಅಲ್ವಾ’ : ಸರ್ಕಾರದ 5 ಗ್ಯಾರಂಟಿಗಳ ಜಾರಿ ಬಗ್ಗೆ ಕುಯಿಲಾಡಿ ಮಾರ್ಮಿಕ ನುಡಿ

ಉಡುಪಿ : ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳ ಪ್ರಣಾಳಿಕೆ ಕುರಿತು ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ನೀಡಿರುವ ಹೇಳಿಕೆ ಚುನಾವಣಾ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡಿತ್ತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿಗಳ ಪೂರೈಕೆ ಮಾಡಿದರೆ ನಾನು ಕೆಪಿಸಿಸಿ ಕಚೇರಿ ಎದುರು ತಲೆ ಬೋಳಿಸಿ ಕೂತುಕೊಳ್ಳಲು ಸಿದ್ದನಿದ್ದೇನೆ ಎಂದು ಚುನಾವಣಾ ಸಂದರ್ಭದಲ್ಲಿ ಕುಯಿಲಾಡಿ ಸುರೇಶ್

‘ಕೇಂದ್ರ ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ’ : ಕುಸ್ತಿ ಪಟುಗಳ ಪರವಾಗಿ ಉಡುಪಿಯಲ್ಲಿ ಪ್ರತಿಭಟನೆ

ಹಲವು ದಿನಗಳಿಂದ ಭಾರತೀಯ ಮಹಿಳಾ ಕುಸ್ತಿ ಪಟುಗಳು ಭಾರತ ಕುಸ್ತಿ ಫೆಡರೇಶನ್ ನ ಅಧ್ಯಕ್ಷರಾದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ತೀವ್ರ ಪ್ರತಿಭಟನೆ ನಡೆಸುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ, ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಉಡುಪಿಯಲ್ಲಿ ಮೇ 31 ರ ಬುಧವಾರದಂದು ಪ್ರತಿಭಟಿಸಿವೆ. ಕರ್ನಾಟಕ ದಲಿತ

ಬೈಂದೂರು : ಅಪರಿಚಿತರು ಬಿಟ್ಟು ಹೋದ ಕರುಗಳು ಸಾವು

ಹೈಬ್ರಿಡ್ ಜಾನುವಾರುಗಳ ಹುಟ್ಟಿದ 3-4ದಿನಗಳ ಸುಮಾರು 10-12 ಗೋವಿನ ಗಂಡು ಕರುಗಳನ್ನು ಯರುಕೋಣೆ ಸಮೀಪದ ಆಲಗೆದ್ದಕೇರಿಯ ಕಲ್ಲುಕ್ವಾರಿ ಮಧ್ಯೆ ಬಿಟ್ಟು ಹೋದ ಘಟನೆ ನಡೆದಿದೆ. 2 ಕರುಗಳು ನೀರು ಆಹಾರ ಇಲ್ಲದೆ ಸತ್ತು ಹೋಗಿದೆ. ಕೆಲವು ಕರುಗಳು ಹಸಿವಿನಿಂದ ನಿತ್ರಾಣ ಗೊಂಡಿದ್ದು ಸ್ಥಳೀಯರು ನೀರು ಕುಡಿಸಿ, ಹುಲ್ಲು ನೀಡಿ ಉಪಚರಿಸಿದ್ದರು.ನಂತರ ಬೈಂದೂರು ಪಶುವೈದ್ಯಾಧಿಕಾರಿ ನಾಗರಾಜ್ ಅವರು ಕರುಗಳಿಗೆ ಚಿಕಿತ್ಸೆಯನ್ನು ನೀಡಿದ್ದಾರೆ. ಸ್ಥಳೀಯ ನಿವಾಸಿ ಶಿಕ್ಷಕ ಜಯಪ್ರಕಾಶ

ಲೋಕಾಯುಕ್ತ ಅಬ್ಬರ : ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮನೆಗೆ ದಾಳಿ

ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಅವರ ಉಡುಪಿಯ ಕೊರಂಗ್ರಪಾಡಿಯಲ್ಲಿರುವ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮೇ 31 ರ ಬುಧವಾರದಂದು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರಂಭಗೊಂಡ ಶೋಧ ಕಾರ್ಯಾಚರಣೆ ತಡರಾತ್ರಿ ವರೆಗೂ ನಡೆಸಲಾಗಿತ್ತು. ದಾಳಿ ವೇಳೆ ಕುಮಾರ್ ರವರ ನಿವಾಸದಲ್ಲಿ ಚಿನ್ನಾಭರಣ, ಐಷಾರಾಮಿ ಕಾರು, ಬೆಲೆಬಾಳುವ ಪೀಠೋಪಕರಣಗಳು, ಲಕ್ಷಾಂತರ ರೂಪಾಯಿ ನಗದು ಹಾಗೂ ಹೊರಜಿಲ್ಲೆಯಲ್ಲಿರುವ ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಿಕ್ಕಿದ್ದು,

ಖಾಸಗಿ ಬಸ್ ಮಹಿಳೆಯರಿಗೆ ಫ್ರೀ ಆಗಲಿ : ವಿ. ಸುನಿಲ್ ಕುಮಾರ್ ಟ್ವೀಟ್ ಖಂಡಿಸಿದ ಕಿಶನ್ ಹೆಗ್ಡೆ ಕೊಳ್ಕೆಬೈಲ್

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟೀ ಗೆ ನೂತನ ಸಾರಿಗೆ ಸಚಿವರಾದ ಡಾ. ರಾಮಲಿಂಗಾರೆಡ್ಡಿ ತೆರೆ ಎಳೆದಿದ್ದಾರೆ. ಮೇ 30 ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಮಹಿಳೆಯರು ಯಾವುದೇ ಷರತ್ತುಗಳಿಲ್ಲದೆ ಪ್ರಯಾಣಿಸಬಹುದು ಎಂದು ತಿಳಿಸಿದರು. ಆದರೆ ಈ ಗ್ಯಾರಂಟೀ ರಾಜ್ಯಾದ್ಯಂತ ಯಾವಾಗಿನಿಂದ ಜಾರಿಯಾಗಲಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್

ಬ್ರಹ್ಮಾವರ ರುಡ್ ಸೆಟ್‍ನಿಂದ ಸ್ವ ಉದ್ಯೋಗ ತರಬೇತಿ

ಬ್ರಹ್ಮಾವರದಲ್ಲಿ ರುಡ್ ಸೆಟ್ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರೀಗೆ ಸ್ವ ಉದ್ಯೋಗ ಮತ್ತು ಕಿರು ಉದ್ಯಮಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾನಾ ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸಹಕಾರದಲ್ಲಿ ಉಜಿರೆಯಲ್ಲಿ 1982ರಲ್ಲಿ ರುಡ್ ಸೆಟ್ ಗಳ ಪರಿಕಲ್ಪನೆಯಲ್ಲಿ ಮಾಡಲಾಗಿ ಬ್ರಹ್ಮಾವರದಲ್ಲಿ 1988 ಆರಂಭಗೊಂಡು ಸಹಸ್ರಾರು ಜನರೀಗೆ ಸ್ವಉದ್ಯೋಗದ ತರಬೇತಿ

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕೆಎಂಸಿ ಮಣಿಪಾಲ : ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಸಮಯದಲ್ಲಿ ಪ್ರಥಮ ಪ್ರತಿಕ್ರಿಯೆಗಾಗಿ ತರಬೇತಿ ಕಾರ್ಯಾಗಾರ

ಮಣಿಪಾಲ : ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮಣಿಪಾಲದ ಡಾ. ಟಿಎಂಎ ಪೈ ಹಾಲ್ ಒಂದರಲ್ಲಿ, ಮೇ 30 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳು ಮತ್ತು ತಜ್ಞರು ಇಂತಹ ಉಪಕ್ರಮಗಳ ಪ್ರಾಮುಖ್ಯತೆಯನ್ನು

ರಾ.ಹೆ. 66ರಲ್ಲಿ ಲಾರಿ ಪಲ್ಟಿ : ಗೇರುಬೀಜಗಳು ದಿಕ್ಕಾಪಾಲು

ಉಡುಪಿ ಜಿಲ್ಲೆ : ಮಂಗಳೂರಿನಿಂದ ಗೇರು ಬೀಜ ಹೇರಿಕೊಂಡ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ, ಇಂದು ಉಡುಪಿ ಸಮೀಪದ ಬಲಾಯಿಪಾದೆ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆಯಿತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ