Home ಕರಾವಳಿ Archive by category ಉಳ್ಳಾಳ (Page 10)

ಉಳ್ಳಾಲ: ಅವಿವಾಹಿತ ಆತ್ಮಹತ್ಯೆ

ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಬೆಳಕಿಗೆ ಬಂದಿದೆ.ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು. ಕೋಟೆಕಾರು ಬೀರಿಯಲ್ಲಿರುವ ಈಕಾಟ್೯ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ

ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಸಾಗಾಟ- ಆರೋಪಿ ಸೇರಿದಂತೆ ಮದ್ಯ, ವಾಹನ ವಶಕ್ಕೆ 

ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು  ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ  ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು  ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆಯೂ ತೆಂಗಿನ ಗೆರಟೆಗಳನ್ನು ಮೇಲಿಟ್ಟು ಸಾರಾಯಿ ಸಾಗಾಟ ನಡೆಸಿ ಬಂಧಿತನಾಗಿದ್ದ ಆರೋಪಿ ಇದೀಗ ಮತ್ತದೇ ಮಾದರಿಯಲ್ಲಿ ಅಕ್ರಮ ಸಾಗಾಟ ನಡೆಸುವ ಮೂಲಕ ಕರ್ನಾಟಕ ಅಬಕಾರಿ ಪೊಲೀಸರಿಂದ ಬಂಧಿತನಾಗಿದ್ದಾನೆ.

ಉಳ್ಳಾಲ: ಹರಕೆಯ ಕೋಲ ನೀಡಿದ ‘ಕೊರಗಜ್ಜ’ ಚಿತ್ರ ತಂಡ

ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ನುಡಿನಮನ

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು ಸಮಿತಿಗೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು. ಸಮಿತಿಯ ಅಧ್ಯಕ್ಷರಾದ ದಿನಕರ

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ

ಉಳ್ಳಾಲ: ಸಿಡಿಲು ಬಡಿದು ಹಾನಿ

ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ.ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು ನಷ್ಟ ಸಂಭವಿಸಿದೆ. ಬೆಳಗ್ಗೆ ಮನೆಮಂದಿ ಮನೆಯಲ್ಲಿದ್ದ ಸಂದರ್ಭ ಘಟನೆ ನಡೆದಿದೆ. ಕಂದಾಯ ಇಲಾಖೆಗೆ ಈ

ಉಳ್ಳಾಲ: ಇಬ್ಬರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ

ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ  ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ  ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ

ಉಳ್ಳಾಲ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಟಾಸ್ಕ್ ಫೋರ್ಸ್ ರಚನೆ: ಯು.ಟಿ ಖಾದರ್

ಉಳ್ಳಾಲ:  ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್‌ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ  ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು  ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದರು. ದೇರಳಕಟ್ಟೆಯ ದ ಕಂಫರ್ಟ್ ಇನ್ ಸಭಾಂಗಣದಲ್ಲಿ  ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ  ನಗರಸಭೆ,

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಮಹೇಶ್ 43 ನಂಬರಿನ ಸಿಟಿ ಬಸ್‌ನಲ್ಲಿ ಚಾಲಕರಾಗಿದ್ದ ಇವರು,  ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ

ಉಳ್ಳಾಲ : ಚೂರಿ ಇರಿದು ಯುವಕನ ಹತ್ಯೆ

ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೆÇಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು