ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ.
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ
ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ. ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ: ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಸೋಮೇಶ್ವರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುವ ಘಟನೆಯಲ್ಲಿ ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್ ಶ್ರೀನಿವಾಸ್ ಅವರ ಪುತ್ರಿ ಪಾರ್ವತಿ ಎಸ್ (20)
ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ. ತಡರಾತ್ರಿ 8.05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ
ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು ತಾನೇ ನಿರ್ದೇಶಿಸಲಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಅವರು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಶುಕ್ರವಾರ ರಾತ್ರಿ ಸಂದರ್ಶನಗೈದು
ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ 12.30ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ಎಂಬಲ್ಲಿ ಬೆಳಕಿಗೆ ಬಂದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತಪಟ್ಟವರು. ಅ.4ರಂದು ಮನೆಯಲ್ಲಿ ಮೊಬೈಲ್ ಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಮನೆ ಸುತ್ತಮುತ್ತಲೂ , ಸಂಬಂಧಿಕರ