ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ಎಂಬಲ್ಲಿ ಬೆಳಕಿಗೆ ಬಂದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತಪಟ್ಟವರು. ಅ.4ರಂದು ಮನೆಯಲ್ಲಿ ಮೊಬೈಲ್ ಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಮನೆ ಸುತ್ತಮುತ್ತಲೂ , ಸಂಬಂಧಿಕರ
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.
ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ ಮಸೀದಿ ಸಮೀಪ ನಡೆದಿದೆ. ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ
ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಉದ್ಘಾಟನೆ ನೆರವೇರಿಸಿ ಮಾತನಾಡಿ, “ಹಿಂದಿನ ಕಾಲದಲ್ಲಿ ಆಟಿ ತಿಂಗಳು ತುಳುವರ ಕಷ್ಟದ ದಿನಗಳಾಗಿತ್ತು.
ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ
ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.
ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ ಸಂಕಷ್ಟ ಪರಿಹಾರ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆಯು ಶನಿವಾರದಂದು ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇವರು ಚುನಾವಣಾ ಪೂರ್ವದಲ್ಲಿಯೇ ಕಾಂಗ್ರೆಸ್ ನಾಯಕರು ಹಾಗೂ ಮಂಗಳೂರಿನ ನನ್ನ ಸ್ನೇಹಿತರು ಕೋಲ ಸೇವೆ ಕೊಡುವ ಬಗ್ಗೆ ಹೇಳಿದ್ದರು.ಈಗ ಘಳಿಗೆ
ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ಸೋಮವಾರ ವಿಧಿವಶರಾದರು.ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.




























