ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಮೊಂತೇರೊ ಅಫ್ಘಾನಿಸ್ತಾನದಿಂದ ಕಳೆದ ವಾರ ಪಾರಾಗಿ ಬಂದಿದ್ದರು. ಇದೀಗ ಉದ್ಯೋಗಕ್ಕಾಗಿ ತೆರಳಿ ಸಿಕ್ಕಿಬಿದ್ದಿದ್ದ ಮೆಲ್ವಿನ್ ಸಹೋದರ ಡೆಮ್ಸಿ ಮೊಂತೆರೊ ಕೂಡ ಇಂದು ಅಪ್ಘನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಇಕೊಲೊಗ್ ಇಂಟರ್ನ್ಯಾಷನಲ್ ಕಂಪನಿಯಲ್ಲಿ ಎ.ಸಿ
ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ
ಉಳ್ಳಾಲ: ಕೆರೆ ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಮೃತರು. ತಲಪಾಡಿ ಟೋಲ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜೇಶ್ ಅವರು ಎಂದಿನಂತೆ ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದರು. ಇಂದು ಸಂಜೆ ಈಜುವಾಗ ಏಕಾಏಕಿ ಮುಳುಗಿ ಅಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಿಸಲು
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು
ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು
ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಬದ್ಯಾರು ನಿವಾಸಿ
ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ
ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.


















