ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ
ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಶನಿವಾರ ಸಂಜೆ ಆರ್ವಾರ್ – ಅಂಬುತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ
ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್ ಮತ್ತು ಅವನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಪೆಟ್ರೋಲ್ ಪಂಪ್
ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಗಿದ್ದು, ಕಳೆದ ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. ಮಂಗಳೂರಿನ ಅತ್ತಾವರದ ಕೆ.ಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ ಜೋಸೆಫ್ ಕ್ರಾಸ್ತಾರಾವರು ಪ್ರವೀಣನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಆತ ಸ್ನೇಹಾಲಯದಲ್ಲಿ ಎಲ್ಲರ ಪ್ರೀತಿ ಪಾತ್ರನಾಗಿದ್ದ, ಆತನ ನಿಜ ಹೆಸರು ತಿಳಿಯದ
ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್‌ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ತ್ರಿಶೂರು ಭಾಗಕ್ಕೆ ಕಾರಿನಲ್ಲಿ ಸಂಚರಿಸುತಿದ್ದ
ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ
ಮಂಜೇಶ್ವರ : ಎಟಿಎಂಗೆ ಹಣ ತುಂಬಿಸಲು ಬಂದ ವಾಹನದ ಗಾಜು ಪುಡಿಗೈದು ೫೦ಲಕ್ಷ ರೂ. ದರೋಡೆಗೈದು ತಂಡ ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ. ವಾಹನದ ಗಾಜು ಒಡೆದು ಹಣವಿದ್ದ ಪೆಟ್ಟಿಗೆಯನ್ನು ತೆಗೆದುಕೊಂಡು ತಂಡ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಉಪ್ಪಳದಲ್ಲಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಹಣ ತುಂಬುತ್ತಿದ್ದಾಗ ಖಾಸಗಿ ಕಂಪನಿಯ ವಾಹನದಲ್ಲಿ ಕಳ್ಳತನ ನಡೆದಿದೆ. ಸ್ಥಳಕ್ಕಾಗಮಿಸಿದ ಉಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ