ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು. ಮಂಜೇಶ್ವರ ಪಂಚಾಯತ್‌ನ ವತಿಯಿಂದ ನಡೆದ ಶುಚಿತ್ವ ಮಿಷನ್‌ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜೇಶ್ವರದ ರಾಜಕೀಯ ವಲಯದಲ್ಲಿ ಬಿ.ವಿ.ರಾಜನ್ ವಿಶೇಷ ವ್ಯಕ್ತಿತ್ವದೊಂದಿಗೆ ಗುರುತಿಸಿದವರು. ಈ ಪ್ರದೇಶದಲ್ಲಿ                         
        
              ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ                         
        
              ಬದುಕು ಕಟ್ಟೋಣ ಗೆಳೆಯರ ಬಳಗ ಎಂಬ ಸಾಮಾಜಿಕ ಕಳಕಳಿಯ ಸಂಸ್ಥೆಯ ವತಿಯಿಂದ ಪ್ರಾಣಮ್ ಭಂಡಾರಿ ದಡ್ಡಗಡಿ ಇವರ ಸ್ಮರಣಾರ್ಥ ಕೆಎಸ್ ಹೆಗ್ಡೆ  ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ, ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರು ನಲ್ಲಿ ಅತ್ಯಾಪೂರ್ವ ಅರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು. ವಿವಿಧ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸುಮಾರು 160ಕ್ಕಿಂತಲೂ ಅಧಿಕ ಜನರು ಈ ಅರೋಗ್ಯ ಶಿಬಿರದಲ್ಲಿ                         
        
              ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,                         
        
              ಕಾಸರಗೋಡು ಕರಂದಕ್ಕಾಡ್ ಶ್ರೀ ವೀರಹನುಮಾನ್ ಮಂದಿರದ ವಾರ್ಷಿಕ ಮಹಾಸಭೆ ಅಧ್ಯಕ್ಷರಾದ ಶ್ರೀ ಅವಿನಾಶ್ ಅವರ ಅಧ್ಯಕ್ಷತೆಯಲ್ಲಿ ಮಂದಿರ ಪರಿಸರದಲ್ಲಿ ನಡೆಯಿತು. ವಿವಿಧ ಚರ್ಚೆಗಳ ನಂತರ ಹೊಸ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ ಯಾದರು, ಉಪಾಧ್ಯಕ್ಷ ಶ್ರೀ ರವಿ ಕರಂದಕ್ಕಾಡ್, ಕಾರ್ಯದರ್ಶಿ ಜಿತೇಶ್ ಕರಂದಕ್ಕಾಡ್, ಜತೆ ಕಾರ್ಯದರ್ಶಿ ಹರೀಶ್ ಪ್ರತೀಕ್, ಕೋಶಾಧಿಕಾರಿ ಜೀವನ್, ಮತ್ತು ಕಾರ್ಯಕಾರಿಣಿಸಮಿತಿ ಸದಸ್ಯರಾಗಿ ಮಾಧವ, ರಾಧಾಕೃಷ್ಣ, ಗಣೇಶ್,                         
        
              ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ ಎ ಗ್ರೇಡ್ ನೊಂದಿಗೆ ಶಾಲೆಗೆ ಹಾಗೂ ಕಾಸರಗೋಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತ ಪ್ರಯತ್ನ, ಕಲಿಯಬೇಕೆಂಬ ಹಠ, ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಲಯಾಳಂ ಕಥಕ್ಕಳಿ ಸಂಗೀತವನ್ನು ನಿರರ್ಗಳವಾಗಿ ಹಾಡಿ                         
        
              ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ   ಫೆಬ್ರವರಿ 16 ರಿಂದ 29 ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸಿ, ಉದ್ಘಾಟಿಸಿ, ಆಮಂತ್ರಣ ಪತ್ರಿಕೆ                         
        
              ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21 ರಂದು ತನ್ನ ನಿವಾಸಿಗಳಿಗೆ ಕ್ರಿಸ್‌ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್‌ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್‌ಮಸ್ ಕ್ಯಾರೋಲ್‌ಗಳಿಗೆ                         
        
              ಕಾಸರಗೋಡಿನ ನೀರ್ಚಾಲು ಪೆರಡಾಲದ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ತುಲು ಲಿಪಿ ಕಲಿಕಾ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೈ ತುಲುನಾಡ್ ಸಂಘಟನೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಜೊತೆ ಸೇರಿಕೊಂಡು ಮಹಾಜನ ಸಂಸ್ಕೃತ ಕಾಲೇಜ್ ನೀರ್ಚಾಲುವಿನ ಆಶ್ರಯದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ತರಗತಿಯು ಉದ್ಘಾಟನೆಗೊಂಡಿತ್ತು. ಹಿರಿಯರೂ, ಶಾಲಾ ಮೆನೇಜರ್ ಜಯದೇವ ಖಂಡಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.                         
        
              ಮಂಜೇಶ್ವರ : ಅಜ್ಞಾತ ಮಧ್ಯ ವಯಸ್ಕನೊಬ್ಬ ರೈಲ್ವೇ ಹಳಿಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಮಾರು 55 ವರ್ಷ ಪ್ರಾಯವಿರುವ ಈತ ಎರಡು ದಿವಸಕ್ಕೆ ಮೊದಲು ಗಡಿ ಪ್ರದೇಶವಾದ ತಲಪಾಡಿಯಲ್ಲಿ ಮಲಯಾಳ ಭಾಷೆಯಲ್ಲಿ ಮಾನಸಿಕವಾಗಿ ಅಸ್ವಸ್ಥಗೊಂಡ ರೀತಿಯಲ್ಲಿ ಮಾತನಾಡುತ್ತಿದ್ದನೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈತನ ಕ್ರೆಯಲ್ಲಿ ಮನೋಹರ್ ಎಂದು ಬರೆಯಲಾಗಿದೆ. ಮಾಹಿತಿ ಅರಿತು ಸ್ಥಳಕ್ಕೆ ಸಮಾಜ                         
        

























