Home ಕರಾವಳಿ Archive by category ಪುತ್ತೂರು (Page 6)

ಪುತ್ತೂರು: ಫೆ.18ರಂದು ದ್ವಾರಕೋತ್ಸವ

ಪುತ್ತೂರು: ಪುತ್ತೂರಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ದ್ವಾರಕೋತ್ಸವ-2024 ಎಂಬ ವಿಶಿಷ್ಟ ಕಾರ್ಯಕ್ರಮ ಫೆ.18ರಂದು ಮುಕ್ರಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ ರೂಪಾಯಿ. ಆರಂಭದ ಜೂನ್ ತಿಂಗಳಿನಲ್ಲಿ 20,87,658 ಇದ್ದ ಟಿಕೆಟ್ ನೀಡಿಕೆ ಹೆಚ್ಚುತ್ತ ಬಂದಿದ್ದು ಜನವರಿ ತಿಂಗಳಲ್ಲಿ ತಿಂಗಳು ಮುಗಿಯುವುದಕ್ಕೆ ಮೊದಲೆ 26,96,261ತಲುಪಿದೆ.

ಪುತ್ತೂರು: ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ನೆಹರೂನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.ಲಿವರ್ ಸಮಸ್ಯೆಯಿಂದಾಗಿ ಐಶ್ವರ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಬದಲಾವಣೆಯಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು

ಪುತ್ತೂರು: ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು. ಈ ರಸ್ತೆಗೆ ಸದ್ಯಕ್ಕೆ 5 ಲಕ್ಷ ಅನುದಾನ ನೀಡಿದ್ದೇನೆ. ಮುಂದೆ ಇದೇ ರಸ್ತೆಗೆ 15

*ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಶ್ರೀದೇವರ ದರ್ಶನ ಬಲಿಸೇವೆ

ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ಕ್ಷೇತ್ರದಲ್ಲಿ ದರ್ಶನ ಬಲಿಸೇವೆಯು ನಡೆಯಿತು. ಜನವರಿ 14 ರಂದು ಧ್ವಜರೋಹಣ ಮೂಲಕ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದೇ ದಿನ ರಾತ್ರಿ ಲಕ್ಷದೀಪೋತ್ಸವ, ಉತ್ಸವ ಬಲಿ, ಪ್ರತಿನಿತ್ಯ ರಾತ್ರಿ ನಿತ್ಯೋತ್ಸವ ನಡೆಯುತ್ತಿದೆ. 18ರಂದು ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮಿಸಿ, ರಾತ್ರಿ ಬಯ್ಯದ ಬಲಿ ನಡೆದಿದೆ. ಜ.20ರಂದು ಹೂತೇರು

ಪುತ್ತೂರು: ಶ್ರೀರಾಮ ಪ್ರಾಣಪ್ರತಿಷ್ಠೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಬಿಜೆಪಿ: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

ಪುತ್ತೂರು: ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಯಾವುತ್ತೂ ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿರುವುದು ಮಾಜಿ ಪ್ರಧಾನಿಗಳಾದ ನೆಹರು ಹಾಗೂ ರಾಜೀವ ಗಾಂಧಿ. ಆದರೆ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಡೆಯ ಬಗ್ಗೆ ನಮ್ಮ ವಿರೋಧವಿದೆ. ಮಂತ್ರಾಕ್ಷತೆ ಹೆಸರಲ್ಲಿ ಜನತೆಯನ್ನು ಮರುಳು ಮಾಡುವ ಹಾಗೂ ಪ್ರಾಣಪ್ರತಿಷ್ಠಾಪನೆಯ ಸಮಯದಲ್ಲಿ ತಂತ್ರಿಗಳನ್ನು ಬದಿಗಿಟ್ಟು ರಾಜಕಾರಣಿಗಳು

ಪುತ್ತೂರು: ಶ್ರೀರಾಮನ ವಿಗ್ರಹ ಪ್ರಾಣಪ್ರತಿಷ್ಠೆಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಿ

ಪುತ್ತೂರು: ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆಯು ಮಧ್ಯಾಹ್ನ 12.20 ರ ಶುಭಮುಹೂರ್ತದಲ್ಲಿ ನೆರವೇರಲಿದೆ. ಇಂತಹ ಅಪೂರ್ವ ಹಾಗೂ ಪವಿತ್ರ ಸಂದರ್ಭದಲ್ಲಿ ಪೂರ್ವಾಹ್ನ 11 ಗಂಟೆಯಿಂದ 1.30 ಗಂಟೆಯವರೆಗೆ ಎಲ್ಲಾ ಹಿಂದೂಗಳು ತಮ್ಮ ವ್ಯವಹಾರ, ವಹಿವಾಟುಗಳಿಗೆ ಬಿಡುವು ನೀಡಿ ಸ್ಥಳೀಯ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕ್ಷತೆ

ಪುತ್ತೂರು: ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀ ರಾಮಲಲ್ಲ,ನ ಪ್ರತಿಷ್ಠಾಪನ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಸೀಮೆಗೆ ಸಂಬಂಧಿಸಿ ಮೂರು ದಿವಸ ಪುತ್ತೂರು ತಾಲೂಕಿನ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಶ್ರೀ ರಾಮಶ್ವ ಯಾತ್ರೆಗೆ ದೇವಳದ ರಥ ಬೀದಿಯಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ದೇವಳದ ವಠಾರದಲ್ಲಿ ಅಶ್ವಕ್ಕೆ ಹೂವಿನ ಹಾರ ಹಾಕಿ ಗಂಧ ಪ್ರಸಾದ ಹಚ್ಚಿ ತೀರ್ಥ ಸಿಂಪಡಿಸಲಾಯಿತು.

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು

ಪುತ್ತೂರು: ಈಶ್ವರಮಂಗಲದ ಮೇನಾಲ ದರ್ಗಾಗೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು