Home ಕರಾವಳಿ Archive by category ಪುತ್ತೂರು (Page 66)

ಉಪ್ಪಿನಂಗಡಿ: ನದಿ ಸ್ನಾನಕ್ಕಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ

ತೈಲ ಬಾಂಡ್ ಬಗ್ಗೆ ಸುಳ್ಳು ಪ್ರಚಾರದಿಂದ ಸಮಾಜಕ್ಕೆ ತಪ್ಪು ಸಂದೇಶ: ಕಾವು ಹೇಮನಾಥ ಶೆಟ್ಟಿ 

ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್

ಪುತ್ತೂರಿನ ನೈತ್ತಾಡಿಯ ಕಲ್ಲಗುಡ್ಡೆಯಲ್ಲಿ ಅಕ್ರಮ ಮದ್ಯ ಮಾರಾಟ: ಭಾರಿ ಪ್ರಮಾಣದ ಮದ್ಯ ವಶ 

ಪುತ್ತೂರು: ಮನೆಯ ಸಮೀಪದ ಗುಡ್ಡೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆಯ ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ರೂ. 26,118 ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ  ನಡೆದಿದೆ. ಕೆಮ್ಮಿಂಜೆ ಗ್ರಾಮದ ನೈತಾಡಿ ದಿ.ಬಟ್ಯಪ್ಪ ಪೂಜಾರಿ ಅವರ ಪುತ್ರ ಬಾಬು ಪೂಜಾರಿ(48ವ) ಮತ್ತು ಕಲ್ಲಗುಡ್ಡೆ ನಿವಾಸಿ ಚಲ್ಲ ಎಂಬವರ ಪುತ್ರ

ಸಂಪ್ಯದಲ್ಲಿ ನೇಗಿಲು ಹಿಡಿದು ಉಳುಮೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ…ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ ಮಾಡುತ್ತಿದ್ದ ಬೇಸಾಯಗಾರರ ಉತ್ಸಾಹ ನೂರ್ಮಡಿಗೊಂಡಿತು. ಸಂಧಿಯ ಸಾಲುಗಳು ಪುಂಖಾನು ಪುಂಖವಾಗಿ ಗದ್ದೆಯ ತುಂಬಾ

ಪುತ್ತೂರು ಹನಿಟ್ರ್ಯಾಪ್ ಪ್ರಕರಣ: 30ಲಕ್ಷ ಕಳೆದುಕೊಂಡ ಯುವಕ: ಯುವತಿಯ ಬಂಧನ

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲೂ ಬೆಳಕಿಗೆ ಬಂದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25)ಎಂಬವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ

ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಕಾನ್ಸಂಟ್ರೇಟರ್, ವಿಟಿಂ ಕಿಟ್ ಹಸ್ತಾಂತರ

ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್‌ಮೆಂಟ್ ಟೌನ್‌ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸರಳ ಕಾರ್ಯಕ್ರಮದಲ್ಲಿ ಭಟ್ ಬಯೋಟೆಕ್ ಸಂಸ್ಥೆಯ ಡಾ.ಶ್ಯಾಮ್ ಭಟ್ ಶಾಸಕ ಸಂಜೀವ ಮಠಂದೂರು ಅವರಿಗೆ ಆಮ್ಲಜನಕ ಕಾನ್ಸಂಟ್ರೇಟರ್‌ನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು,

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್‌ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.

ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಅನಾರೋಗ್ಯದಿಂದ ನಿಧನ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ.

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ

ಪುತ್ತೂರು ನಗರಸಭೆ ಕಚೇರಿ ಕಟ್ಟಡ, ಮಳೆ ನೀರು ಕೊಯ್ಲು ಅಳವಡಿಕೆಗೆ ಶಿಲನ್ಯಾಸ

ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ ನೀರು ಕೊಯ್ಲು ಅನಿವಾರ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಸೋಮವಾರ ಪುತ್ತೂರು ನಗರಸಭೆಯ ವತಿಯಿಂದ ನಡೆಯಲಿರುವ ನೂತನ ಕಚೇರಿ ಕಟ್ಟಡ ಮತ್ತು ಮಳೆ ನೀರು ಕೊಯ್ಲು ಅಳವಡಿಕೆಯ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ