Home ಕರಾವಳಿ Archive by category ಪುತ್ತೂರು (Page 67)

ಸ್ವಚ್ಚ ಪರಿಸರ ನಿರ್ಮಾಣ ಮಲೇರಿಯಾ ನಿಯಂತ್ರಣದಲ್ಲಿ ಯಶಸ್ವಿಗೆ ದಾರಿ- ಡಾ. ದೀಪಕ್ ರೈ 

ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ ನಾವು ಯಶಸ್ವು ಕಾಣಲು ಸಾಧ್ಯ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ

ಪುತ್ತೂರಿನಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ

ರಾಜ್ಯದಾದ್ಯಂತ ಇಂದಿನಿಂದ ಎರಡು ದಿನಗಳ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಇಂದು ಮತ್ತೆ ನಾಳೆ ಸಂಪೂರ್ಣ ಬಂದ್ ಇರಲಿದೆ, ದಕ್ಷಿಣಕನ್ನಡ ಜಿಲ್ಲೆಯಲ್ಲೂ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಹಾಲು, ಪೇವರ್ ಅಂಗಡಿ,ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಅಗಿದೆ. ಅನಗತ್ಯ ತೆರಳುವ ವಾಹನಗಳಿಗೆ ಪೋಲೀಸರಿಂದ ದಂಡ ವಿಧಿಸಿದ್ದಾರೆ. ಪುತ್ತೂರಿನಲ್ಲಿ ಪೋಲೀಸರ ಬಿಗಿ ಕಾವಲು ಏರ್ಪಡಿಸಿದ್ದಾರೆ. ವೀಕೆಂಡ್ ಕರ್ಫೂವನ್ನು ಪೊಲೀಸರು ಕಟ್ಟು ನಿಟ್ಟಾಗಿ

ಕಡಬದಲ್ಲಿ ಅಡಿಕೆ ಚೀಲ ಕದ್ದೊಯ್ದ ಪ್ರಕರಣ: ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

ಕಡಬ :ಸುಲಿದು ಮಾರಾಟ ಮಾಡಲು ಅಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲವೊಂದನ್ನು ಬೈಕ್ ನಲ್ಲಿ ಬಂದು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಅಡಿಕೆ ಚೀಲದೊಂದಿಗೆ ರಂದು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಅಲೆಪ್ಪಾಡಿಯ ಸುಕೇಶ ಎಂಬವರ ಮನೆಯಿಂದ ಅಡಿಕೆ ಚೀಲ ಕಳವಾಗಿತ್ತು.ಆರೋಪಿ ಪರಮೇಶ್ವರ್ ಎಂಬಾತನನ್ನು ಇಂದು ಮುಂಜಾನೆ ಆತನ ಮನೆಯಿಂದ ವಶಕ್ಕೆ ಪಡೆದುಕೊಂಡು ವಿಚಾರಿಸಿ ಆತನು ಕಳವು ಮಾಡಿದ ಅಡಿಕೆಯನ್ನು ಮತ್ತು ಕಳವಿಗೆ ಉಪಯೋಗಿಸಿದ

ಕೆಮ್ಮಾರ: ಇಲಿಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗು ಸಾವು

ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಪಿವಿಎಸ್ ಪೈಪು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕ್ಲೀನ್ ಮಾಡಿದ್ದು ಇದರಲ್ಲಿ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಇತ್ತು. ಮನೆಯವರು ಕೆಲಸ

ಸವಣೂರಿನಲ್ಲಿ ಕೋವಿಡ್ ಕಾರ್ಯಪಡೆಯ ಸಭೆ

ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ ಪರಿಶೀಲನೆ ನಡೆಸಿ ಮಾತನಾಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ಕೇರ್ ಸೆಂಟರ್ ಗೆ

ಪುತ್ತೂರಿನಲ್ಲಿ ಹಡಿಲು ಗದ್ದೆಯ ಬೇಸಾಯ: ಶಾಸಕ ಸಂಜೀವ ಮಠಂದೂರು ಚಾಲನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಕೃಷಿ ಆಂದೋಲನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ

ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲು

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ

ವಾರಾಂತ್ಯದ ಕರ್ಫ್ಯೂಗೆ ವಿಟ್ಲ ಪೇಟೆ ಸಂಪೂರ್ಣ ಬಂದ್

ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ

ಕಳವು ಸೊತ್ತುಗಳ ವಶಪಡಿಸುವ ಕಾರ್ಯಾಚರಣೆ – ಹೆಚ್.ಸಿ.ಸ್ಕರಿಯರಿಗೆ ಪುತ್ತೂರು ಡಿವೈಎಸ್ಪಿಯವರಿಂದ ಪ್ರಶಂಸಾನಾ ಪತ್ರ

ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು ನೀಡಲಾಗಿದ್ದು, ಪುತ್ತೂರ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಪ್ರಶಾಂಸನಾ ಪತ್ರವನ್ನು ಸ್ಕರಿಯ ಅವರಿಗೆ

ಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ ಕೃಷಿಯನ್ನು ನಾಶಪಡಿಸಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು