ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತಪಟ್ಟ ಯುವಕ. ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್
ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ವೆಂಕಟರಮಣ ಆಚಾರ್ ಜೇನು ನೊಣದ ದಾಳಿಗೊಳಗಾಗಿದ್ದು ಚೇತರಿಸಿಕೊಂಡಿದ್ದಾರೆ. ಶಿಕ್ಷಣ ವೆಂಕಟರಮಣ ಆಚಾರ್ ಅವರು ಸಜೀಪಮುನ್ನೂರು ಗ್ರಾಮದ ಆಲಾಡಿ, ಶಾರಾದನಗರದ ಬಳಿ ಗಣತಿ ಕಾರ್ಯಕ್ಕೆ ತೆರಳಿದ್ದ ವೇಳೆ ಅಲ್ಲಿನ
ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದಾಗ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಎರಡು ಲಾರಿಗಳು ನಿಲ್ಲಿಸಿ, ತಪಾಸಣೆ ನಡೆಸಿದಾಗ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಅಕ್ರಮ ಸಾಗಾಟ ಎಂಬುದು ಬೆಳಕಿಗೆ ಬಂದಿದೆ. ಲಾರಿಗೆ ಕೇರಳ ರಾಜ್ಯದ ಪೆರ್ಲ
ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಕುರಿತು ಚರ್ಚಿಸಿದರು. ಬಾರಿ ಮಳೆಯಿಂದ ಪ್ರಮುಖ ರಸ್ತೆಗಳು ಹಾನಿಯಾಗೊಂಡು ವಾಹನ ಸಂಚಾರ ಕಷ್ಟ
ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ ಕಳೆದ 20 ವರ್ಷಗಳಿಂದ ಹತ್ತಾರು ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ
ಬಂಟ್ವಾಳದ ಬೆಂಜನಪದವಿನಲ್ಲಿ ಕಲ್ಲು ತೆಗೆದು ನಿರ್ಮಾಣಗೊಂಡ ನೀರು ನಿಂತ ಹಳ್ಳವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಂಜನಪದವು ನಿವಾಸಿ ಸಾಗರ್(28) ಮೃತಪಟ್ಟ ಯುವಕ. ಶನಿವಾರದಿಂದ ಸಾಗರ್ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು. ಆದರೆ ಆತ ಎಲ್ಲೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಸಾಗರ್ ಮೃತದೇಹ ಹಳ್ಳವೊಂದರಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ ( 19) ಮೃತಪಟ್ಟವರು.ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ



























