ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ
ಬಂಟ್ವಾಳದ ಬೆಂಜನಪದವಿನಲ್ಲಿ ಕಲ್ಲು ತೆಗೆದು ನಿರ್ಮಾಣಗೊಂಡ ನೀರು ನಿಂತ ಹಳ್ಳವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಂಜನಪದವು ನಿವಾಸಿ ಸಾಗರ್(28) ಮೃತಪಟ್ಟ ಯುವಕ. ಶನಿವಾರದಿಂದ ಸಾಗರ್ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು. ಆದರೆ ಆತ ಎಲ್ಲೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಸಾಗರ್ ಮೃತದೇಹ ಹಳ್ಳವೊಂದರಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ ( 19) ಮೃತಪಟ್ಟವರು.ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.ಈ ಬಳಿಕ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಅಯ್ಕೆಯಾಗಿದ್ದರು.ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿಗೆ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಭಾಷಣ
ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ
ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದರು. ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ಇವರು ಹಲವಾರು
ಬಂಟ್ವಾಳ: ಬಿ.ಸಿ.ರೋಡು ಅಡ್ಡಹೊಳೆ ಚತುಷ್ಫಥ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಣಿ, ಸೂರಿಕುಮೇರು, ಕಲ್ಲಡ್ಕ, ಮೆಲ್ಕಾರ್, ನೆಹರುನಗರದಲ್ಲಿ ಅಭಿವೃದ್ದಿ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಹಾಗೂ ಗುತ್ತಿಗೆ ಸಂಸ್ಥೆ ಕೆಎನ್‌ಆರ್‌ಸಿಯ ಅಧಿಕಾರಿಗಳೊಂದಿಗೆ ಚರ್ಚಿದರು. ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿಯಲ್ಲಿ ಅಭಿವೃದ್ದಿ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ



























