ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ ಪ್ರದೇಶ ದುರ್ವಾಸನೆ ಬೀರುತ್ತಿದೆ. ಜನರಲ್ಲಿ ಸ್ವಚ್ಚತೆಯ ಪರಿಕಲ್ಪನೆ ಕೇವಲ ಅಕ್ಟೋಬರ್ 2ರ ಸ್ವಚ್ಛತಾ
ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ
2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ ಹೊರಗಡೆಯಲ್ಲಿ ಈತನಿಗೆ ಸೇರಿದ ಬೈಕ್ ಕಂಡು ಬಂದಿದೆ.ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ
ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಹೊಡೆದು ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ. ಗಂಭೀರ ಗಾಯಗೊಂಡ ಮಗುವನ್ನು
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ



























