ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ
ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ ಅವರು ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ
ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು
ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ವರದಿ: ಪ್ರಶಾಂತ್ ನೆಲ್ಯಾಡಿ
2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.