Home ಕರಾವಳಿ Archive by category ಮಂಗಳೂರು (Page 104)

ಮಂಗಳೂರು: ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ ಪ್ರಕರಣ: ಆರೋಪಿಯ ಬಂಧನ

ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ

ಮಂಗಳೂರು || ಎಸ್‍ಬಿಇಬಿಎ “ಕೌಮಾರಂ”-ಬಾಲ ರೋಗ ಚಿಕಿತ್ಸೆಯ ವಿಚಾರ ಸಂಕಿರಣ

ಭಾರತ್ ಮಿಷನ್ ಬಿಷಾಕ್ ಬಿಎಮ್‍ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್‍ಬಿಇಬಿಎ “ಕೌಮಾರಂ” – ಬಾಲ ರೋಗ ಚಿಕಿತ್ಸೆಯ ಬಗ್ಗೆ ರಾಷ್ಟ್ರೀಯ ಮಟ್ಟದ 50ನೇ ವಿಚಾರ ಸಂಕಿರಣವು ಮಂಗಳೂರು ನಗರದ ಜಿ. ಎಚ್. ಎಸ್ ರೋಡ್‍ನ ಹೋಟೆಲ್ ವರ್ದ ಸಾಫ್ರೋನ್‍ನಲ್ಲಿ ಸಂಪನ್ನಗೊಂಡಿತು. ಭಾರತದ ವಿವಿಧ 14 ರಾಜ್ಯಗಳಿಂದ ಬಂದ ಆಯುರ್ವೇದ

ಮಂಗಳೂರು: ಅದ್ಯಪಾಡಿ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು. ಊರ ಪರ ವೂರ ಹಾಗೂ ಬೈಲು ಮಾಗಣೆಯ ಸಮಸ್ತ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಕ್ಷೇತ್ರದ ಆಡಳಿತ ಮಂಡಳಿಯವರು ಹಾಗೂ ಮೊಕ್ತೇಸರರದ ಮೋನಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.

ಮೂಡುಬಿದಿರೆ|| ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ-ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್‍ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯಾದ್ಯಂತ “ಟೋಬಿ” ಸಿನಿಮಾ ರಿಲೀಸ್- TOBY

ರಾಜ್ ಬಿ. ಶೆಟ್ಟಿ, ಚೈತ್ರಾ ಆಚಾರ್ ನಟನೆಯ ಟೋಬಿ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಗೊಂಡಿದೆ. ರಾಜ್ಯದೆಲ್ಲೆಡೆ ಟೋಬಿ ಸಿನಿಮಾ ನೋಡಿ ಪ್ರೇಕ್ಷಕರು ಭೇಷ್ ಎನ್ನುತ್ತಿದ್ದಾರೆ. ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ `ಟೋಬಿ' ಚಿತ್ರದ ಫಸ್ಟ್ ಲುಕ್ ನಲ್ಲಿ ಡಿಫರೆಂಟಾಗಿ ಕಾಣಿಸಿಕೊಂಡಿದ್ದರು. ಅದಾಗಲೇ ಸಿನಿಮಾದ ಬಗ್ಗೆ ಪ್ರೇಕ್ಷಕರು ತುಂಬಾ ನಿರೀಕ್ಷೆಯನ್ನಿರಿಸಿದ್ದರು. ಇಂದು ರಾಜ್ಯದ್ಯಾಂತ 175

ಮಂಗಳೂರು: ಸಮಾಜ ಸೇವಕ ಡಾ. ಅಬ್ದುಲ್ ಶಕೀಲ್‍ಗೆ ಏಷ್ಯಾ ಅಚೀವರ್ಸ್ ಅವಾರ್ಡ್

ಮಂಗಳೂರು: ಕೋವಿಡ್ ಸಂದರ್ಭ ಹತ್ತು ಸಾವಿರಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ಅಕ್ಕಿ ವಿತರಣೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಹಿತ ಹಲವು ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸುತ್ತಿರುವ ಡಾ. ಅಬ್ದುಲ್ ಶಕೀಲ್ ಅವರು ಭಾರತೀಯ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್, ಸ್ವಾಮಿ ವಿವೇಕಾನಂದ ಕಲ್ಚರಲ್ ಸೆಂಟರ್ ಕೊಲಂಬೊ ಮತ್ತು ಹೈ ಕಮಿಷನ್ ಆಫ್ ಇಂಡಿಯಾ ಕೊಲಂಬೊ ಕೊಡಮಾಡುವ ಏಷ್ಯಾ ಅಚೀವರ್ಸ್

ಉಳ್ಳಾಲ: ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಸ್ಪೀಕರ್ ಯು.ಟಿ. ಖಾದರ್ ಗೆ ಸನ್ಮಾನ

ಮಂಗಳೂರು ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ವರವರಿಗೆ ಸನ್ಮಾನಿಸಲಾಯಿತು. ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮಾತನಾಡಿ, ಯು.ಟಿ ಖಾದರ್ ರವರು ಸರ್ವ ಧರ್ಮಿಯರಿಗೆ ಪ್ರೀತಿಪಾತ್ರರಾಗಿದ್ದು. ಸರ್ವರ ಮನ ಗೆಲುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಗೌರವಾಧ್ಯಕ್ಷ ಹಾಜಿ ಎನ್.ಎಸ್ ಕರೀಂ, ಉಪಾಧ್ಯಕ್ಷ ಶಬರೀಶ್ ಶೆಟ್ಟಿ, ಕೋಶಾಧಿಕಾರಿ

ಮಿಲಾಗ್ರೆಸ್ ಪಿಯು ಕಾಲೇಜು, ಹಂಪನಕಟ್ಟೆ : 2023-24ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳು ಮತ್ತು ಸಂಘಗಳ ಉದ್ಘಾಟನೆ

ಮಂಗಳೂರು : ಮಿಲಾಗ್ರೆಸ್ ಪಿಯು ಕಾಲೇಜು, ಹಂಪನಕಟ್ಟೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳು ಮತ್ತು ಸಂಘಗಳನ್ನು ಆಗಸ್ಟ್ 21 ರಂದು ಉದ್ಘಾಟಿಸಲಾಯಿತು. ಎಲ್ಲಾ ಕ್ಲಬ್ ಸದಸ್ಯರು, ಕೋ-ಆರ್ಡಿನೇಟರ್‌ಗಳು ಮತ್ತು ಇತರ ವಿದ್ಯಾರ್ಥಿಗಳು ಪಿಯು ಕಾಲೇಜು ಸಭಾಂಗಣದಲ್ಲಿ ಜಮಾಯಿಸಿದರು. ಮುಖ್ಯ ಅತಿಥಿ ಶ್ರೀ ಸಚೇತ್ ಸುವರ್ಣ ಇತಿಹಾಸ ಉಪನ್ಯಾಸಕರು, ಸರ್ಕಾರಿ ಪಿಯು ಕಾಲೇಜು, ಕಾವೂರು, ಪ್ರಾಂಶುಪಾಲ ಶ್ರೀ ಮೆಲ್ವಿನ್ ವಾಸ್,ಶ್ರೀ ಕಿರಣ್ ಡಿ ಸೋಜಾ ಇಂಗ್ಲಿಷ್