ತುಳುನಾಡ ಸಂಸ್ಕøತಿ, ಆಚಾರ-ವಿಚಾರ, ನಡೆ ನುಡಿ, ಜೀವನ ಪದ್ಧತಿ ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರೆಸಿಕೊಂಡು ಕುತೂಹಲ ಹುಟ್ಟಿಸುವ ಕಥೆ ಹೆಣೆದು ಸುಂದರವಾಗಿ ಮಾಡಿರುವ ತುಳು ಸಿನಿಮಾ ಕೊರಮ್ಮ. ಈ ಚಲನಚಿತ್ರ ಆಗಸ್ಟ್ 11ರಂದು ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ. ಸಫೈರ್ ಪ್ರೋಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ಅಡ್ಯಾರು ಮಾಧವ ನಾಯ್ಕ್
ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.
ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತ ಪಟ್ಟರೆ ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮೃತರನ್ನು ಮೂಡುಬಿದಿರೆ ಸಮೀಪದ ಬೆಳುವಾಯಿ ನಿವಾಸಿ ರಾಮಣ್ಣ ಎಂದು ಗುರುತಿಸಲಾಗಿದೆ. ಐಕಳ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ಕಾರ್ನಾಡ್ ಕಡೆಯಿಂದ ಬೆಳುವಾಯಿ ಕಡೆಗೆ ಹೋಗುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು
ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್ ವತಿಯಿಂದ ಮಂಗಳೂರು ನಗರದಾದ್ಯಂತ ಸೇವ್ ಟ್ರಿ ಸೇವ್ ಲೈಫ್ ಅಭಿಯಾನದ ಮೂಲಕ ವನಮಹೋತ್ಸವ ಕಾರ್ಯಕ್ರಮvu ಆಗಸ್ಟ್ 10ರಂದು ಬೆಳಿಗ್ಗೆ 11.30ಕ್ಕೆ ಮಣ್ಣಗುಡ್ಡೆಯ ವರ್ಟೆಕ್ಸ್ ಮ್ಯಾನೇಜ್ ಮಾರ್ಕೆಟ್‍ಸ್ಪೇಸ್‍ನಲ್ಲಿ ನಡೆಯಲಿದೆ.
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತ ಮಂಗಳೂರು ಮೆನ್ನಬೆಟ್ಟು ಗ್ರಾಮದ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28). ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4
ಬೆಂಗ್ರೆ: ಬೇಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೆಂಗ್ರೆಯ ಶಾಲೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೆÇೀಷಕರು ಭಾಗವಹಿಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್.ಐ.ಓ ಸಂಘಟನೆಯೊಂದಿಗೆ ಜೊತೆಗೂಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ
ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಆಗಸ್ಟ್ 9ರಂದು ಮಂಗಳೂರಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿಯಲ್ಲಿ ಪ್ರಚಾರಂದೋಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ದೇಶದ ಎಲ್ಲ ಸಂಪತ್ತನ್ನು ಅಭಿವೃದ್ಧಿಯ ಹೆಸರಿನಲ್ಲಿ ದೇಶಿ ಮತ್ತು ವಿದೇಶಿ
ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ
ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್ ನಡೆಸಲಾಗಿತ್ತು. ಎರಡು ಬಾರಿ 19 ವಯೋಮಿತಿ ಅಖಿಲ ಭಾರತ ಜ್ಯೂನಿಯರ್ ರ್ಯಾಂಕಿಂಗ್ ಚಾಂಪಿಯನ್ ಆಗಿರುವ
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ವೇದಮ್ ಶೈಕ್ಷಣಿಕ ಉತ್ಸವದಲ್ಲಿ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಟ್ರೆಶರ್ ಹಂಟ್, ಎಸ್ಕೆಪೀಡ್, ಪ್ಯಾಕ್ಮಾನ್, ವಿಭಾಗದಲ್ಲಿ ಹುಮೇರಾ ಆರಿಫ್, ಅಬ್ದುಲ್ ಕರೀಂ ಖತೀಜತುಲ್ ಮಕ್ಸೂದಾ, ರಿಫಾತ್ ಮರಿಯಮ್, ನೂಮನ್ ಷರೀಫ್, ಮುಸ್ಕಾನ್ ಮೊದಲನೇ ಹಾಗೂ ರಿಜ್ವಾನ್ ಮೊಹಮ್ಮದ್ ರಯಾನ್ ಮತ್ತು ಮೊಹಮ್ಮದ್ ಆರೀಫ್ ಎರಡನೇಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.




























