ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ. ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ
ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ. ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ವಿರೋಧಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ
ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ 24ನೇ ಚಾತುರ್ಮಾಸ್ಯವು ಶ್ರೀವಜ್ರದೇಹಿ ಮಠದಲ್ಲಿ ಸಂಪನ್ನಗೊಂಡಿತು. ಪೂಜ್ಯ ಶ್ರೀಗಳು ಮೃತ್ತಿಕಾ ಪೂಜೆಯನ್ನು ನೆರವೇರಿಸಿದರು. ವ್ಯಾಸ ಪೂಜೆ ಮತ್ತು ಪಟ್ಟದ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಅನಂತರ ಭಕ್ತರು ಈ ಸತ್ಕರ್ಮದಲ್ಲಿ ಪಾಲ್ಗೊಂಡಿದ್ದರು.
ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ
ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳ ಜುಲೈ 14 ರಿಂದ 16 ರವರೆಗೆ ವಿದ್ಯಾಗಿರಿಯ ಕೆ ಅಮರನಾಥಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು
ಬಡತನ ಹಾಗೂ ಕಷ್ಟದಲ್ಲಿರುವವರಿಗೆ ನಮ್ಮಿಂದಾಗುವ ಸಹಾಯ ಮಾಡುವ ಮೂಲಕ ಮಾನವ ತತ್ವವನ್ನು ಸಹಕಾರ ಗೊಳಿಸಬೇಕು, ನೊಂದಿರುವ ವ್ಯಕ್ತಿಗೆ ಮಾಡುವ ಸೇವೆಯೇ ದೇವರಿಗೆ ನಿಜವಾಗಿ ಮಾಡುವ ಸೇವೆ, ಕುಲಾಲ ಸಮಾಜದ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿ ಶ್ರೀ ವೀರನಾರಾಯಣ ಕ್ಷೇತ್ರ ಭವ್ಯವಾಗಿ ನಿರ್ಮಾಣಗೊಂಡಿದೆ. ದೇವಸ್ಥಾನಗಳು ಅಂತರಂಗವನ್ನು ಗಟ್ಟಿಗೊಳಿಸುವ ಆಧ್ಯಾತ್ಮಿಕದ ಜಿಮ್ಮಾ ಸೆಂಟರ್ ಆಗಬೇಕು ಎಂದು ಕೇಮಾರು ಶ್ರೀ ಸಂದೀಪನಿ ಸಾಧನ ಆಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.
ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಇದುವರೆಗೆ ಸುಮಾರು 65 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ದಾನಿಗಳ, ಮಹರಾಷ್ಟ್ರ ಸರಕಾರ ಅಲ್ಲದೆ
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬಗ್ಗೆ ಇರುವ ಸಾಧಕ-ಭಾದಕಗಳ ಬಗ್ಗೆ ಮಂಗಳೂರು ಧರ್ಮಕೇಂದ್ರ ಕೈಸ್ತ ಮುಖಂಡರು ಸಭೆ ಸೇರಿ ಚರ್ಚಿಸಿದರು.ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಡಿಕುನ್ಹಾ ರವರು ಸವಿಸ್ತಾರವಾಗಿ ವಿಷಯವನ್ನು ಸಭೆಗೆ ಮಂಡಿಸಿದರು. ಹಿರಿಯ ಬರಹಗಾರಾ ಹಾಗೂ ಸೆವಕ್ ವಾಡಿಚಿ ಪತ್ರಿಕೆಯ ಸಂಪಾದಕ ವಂದನೀಯ ಚೇತನ್ ಲೋಬೊ ಪ್ರತಿಕ್ರಿಯೆ ನೀಡಿದರು. ಸಭಾ ಪಾಲಕರಾದ ಖ್ಯಾತ ವಕೀಲರಾದ ಎಂ. ಪಿ. ನೊರೊನ್ಹಾರವರು ವಿವಿಧ




























