Home ಕರಾವಳಿ Archive by category ಮಂಗಳೂರು (Page 117)

ಮಂಗಳೂರು : ಎಚ್ಚರಿಕೆ ಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಬಂಟ್ವಾಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿದಂತೆ ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಯಾವುದೇ ಪ್ರಕರಣಗಳು ಮರುಕಳಿಸಬಾರದು, ಈ ದಿಸೆಯಲ್ಲಿ ಗುಡ್ಡದ ಸಮೀಪದ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಕಾಳಜಿ ಕೇಂದ್ರಗಳು ಅಥವಾ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ

ಸಂಸದರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ. ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ  ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ವಾರ್ ರೂಮ್ (ಲ್ಯಾಂಡ್ ಲೈನ್): 0824-2448888  ಮೊ: 9606595356/ 9606595394

ಖಾವಿಧಾರಿಗಳಿಂದ ಜಾತ್ರೆಗಾಗಿ ಕಲೆಕ್ಷನ್ : ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಳ್ಳಾಲ: ಜಾತ್ರೆಗೆ ಸಹಾಯಹಸ್ತ ಬೇಕು ಎಂದು ಭಿಕ್ಷಾಟನೆಯಲ್ಲಿ ತೊಡಗಿದ್ದ ಯುವಕನನ್ನು ತೊಕ್ಕೊಟ್ಟುವಿನ ಕ್ಯಾಟರಿಂಗ್ ಸಂಸ್ಥೆ ಮಾಲೀಕ ರಾಜೇಶ್ ಎಂಬವರು ಸಂಶಯದ ಮೇರೆಗೆ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ತೊಕ್ಕೊಟ್ಟು ಕಾಪಿಕಾಡು ರಾಜ್ ಕೇಟರಸ್ ಬಳಿ ಬಂದಿದ್ದ ಖಾವಿ ತೊಟ್ಟ ಯುವಕ ಜಾತ್ರೆ ನಡೆಸಲು ದಾನ ನಡೆಸಬೇಕು ಎಂದು ಮಾಲೀಕ ರಾಜೇಶ್ ಎಂಬವರಲ್ಲಿ ಕೇಳಿದ್ದನು. ಸಂಸ್ಥೆ ಮಾಲೀಕರು ರಾತ್ರಿ ವೇಳೆ ಜಾತ್ರೆಗಾಗಿ ಹಣ ಕೇಳುವುದನ್ನು ಸಂಶಯ ವ್ಯಕ್ತಪಡಿಸಿ ವಿಚಾರಣೆ

ಕ.ಸಾ.ಪ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸಭೆ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಡಾ.ಮಂಜುನಾಥ್ ಎಸ್. ರೇವಣಕರರವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಾವತಿ ಜೆ. ಬೈಕಾಡಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗೌರವ ಕಾರ್ಯದರ್ಶಿ ಎನ್.ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ

ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ

ದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ದೈವಾರಾಧನೆ ಪ್ರದರ್ಶನದ ವಸ್ತುವಲ್ಲ. ಶಿಕ್ಷಣ ಇಲಾಖೆ ಕೂಡಲೇ ತನ್ನ ಆದೇಶದಲ್ಲಿ ಬದಲಾವಣೆ ಮಾಡಿ, ದೈವಾರಾಧನೆ, ಕೋಲ ಕೈಬಿಡಬೇಕು

ಮಂಗಳೂರು : ಮಳೆಯ ಅಬ್ಬರಕ್ಕೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ

ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ

ದ. ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ

ಮಂಗಳೂರು, :- ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು

ಮೃತರ ಕುಟುಂಬಕ್ಕೆ ಪರಿಹಾರ – ಜಿಲ್ಲಾಡಳಿತದಿಂದ ಅಗತ್ಯ ಕ್ರಮ : ಡಿಸಿ

*ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್‌ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್‌ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ.ಈ ಬಗ್ಗೆ ಮಂಗಳೂರು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.ಮೃತರ ವಾರಸುದಾರರಿಗೆ ಮೆಸ್ಕಾಂ ಇಲಾಖಾ