ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ
ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 12 ವಾಹನಗಳು ಜಖಂಗೊಂಡಿವೆ. ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.
ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ ಒದಗಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ಒದಗಿಸುವ ದಿನಾಂಕ ಮತ್ತು ಎಲ್ಲಾ ಅಧಿಕಾರಿಗಳು ಬಂದರೆ ಮಾತ್ರ ಸಭೆ ನಡೆಸಬೇಕೆಂದು ಒತ್ತಾಯಿಸಿದರು. ಇಂದು ಸಭೆಗೆ 28 ಅಧಿಕಾರಿಗಳ
ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್ ಕಮಿಷನರ್ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರೊಬ್ಬರು ಕರೆ ಮಾಡಿ ನಮಗೆ ಬಸ್ ನಲ್ಲಿ ಸೀಟ್ ಮೀಸಲಾತಿ ಇದ್ದರೂ ಅದು ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಅದರ ಬೆನ್ನಲ್ಲೇ ಪಾಂಡೇಶ್ವರ ಸಂಚಾರ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52)ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು
ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್
ಜು.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ
ಕರಾವಳಿಯಲ್ಲಿ ನಿನ್ನೆ ಸಂಜೆಯಿಂದ ಮಳೆ ಬಿರುಸುಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಕೊಡಿಯಾಲ್ ಬೈಲ್‍ನ ಬಿಷಪ್ ಕಂಪೌಂಡ್‍ನ ಮೇಲ್ಬಾಗದ ಗುಡ್ಡ ಕುಸಿದು ಬಿದ್ದಿದೆ.ಗುಡ್ಡ ಕುಸಿತದ ಮೇಲ್ಭಾಗದಲ್ಲಿ ಕೋರ್ಟ್ ಆವರಣ ಮತ್ತು ರಸ್ತೆ ಇದ್ದು ವಾಹನಗಳು ನಿತ್ಯ ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಇದೀಗ ಈ ಭಾಗದಲ್ಲಿ ಭೂ ಕುಸಿತದ ಪರಿಣಾಮ ವಾಹನ ಸಂಚಾರಕ್ಕೆ ಅಲ್ಪ ಪ್ರಮಾಣದಲ್ಲಿ ತೊಂದರೆ ಆಗಿದೆ.



























