ಮಂಗಳೂರಿನ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನೆ ಸಭೆ ನಡೆಯಿತು. ಮಂಗಳೂರಿನ ಪ್ರಮುಖ ಸಮಸ್ಯೆಗಳ ಬಗ್ಗೆ ಜನರು ಮತ್ತು ಸಂಘಟನೆಗಳ ಪ್ರಮುಖರು ಸಭೆಯ ಮುಂದಿಟ್ಟರು.ಉಪಸಾರಿಗೆ ಆಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೋನ್ ಬಿ, ಮಿಸ್ಥಿತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಯೆಯ್ಯಾಡಿ ಜಂಕ್ಷನ್‍ನಲ್ಲಿ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ವಾಣಿಜ್ಯ ಕಟ್ಟಡ ಬಿದ್ದಿದ್ದು, ಸಂಭಾವ್ಯ ಹಾನಿ ತಪ್ಪಿದೆ. ಯೆಯ್ಯಾಡಿಯಿಂದ ಶಕ್ತಿನಗರಕ್ಕೆ ಸಂಪರ್ಕಿಸುವ ರಸ್ತೆ ಇದ್ದಾಗಿದ್ದು, ಇಲ್ಲಿ ದಿನ ನಿತ್ಯ ವಾಹನ ಸಂಚಾರ ಕೂಡ ಇದ್ದು, ಪಾದಚಾರಿಗಳು ಈ ರಸ್ತೆಯನ್ನೆ ಅವಲಂಭಿಸಿದ್ದಾರೆ. ಮರ ಬಿದ್ದ ಪರಿಣಾಮ ದ್ವಿಚಕ್ರವಾಹನ ಜಖಂ ಆಗಿದೆ.
ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ `ಈದುಲ್ ಅಝ್ಹಾ’ ಆಚರಿಸಲಾಗುತ್ತಿದೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್
ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ ಭರತ್‌ರಾಜ್ ಕೆ. ಸನಿಲ್ ಆಯ್ಕೆಯಾಗಿದ್ದಾರೆ.ಹೊಸದಿಗಂತ ಪತ್ರಿಕೆಯಲ್ಲಿ 2022ರ ಜೂ.13ರಂದು ಪ್ರಕಟಗೊಂಡ “ಮತ್ತೆ ಒಂದಾಗಲಿ ಒಡೆದ
ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ
ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಕಾಮತ್ ಅವರು, ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನೇಕ ಕಡೆಗಳಲ್ಲಿ
ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು.ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ವರದಿ: ಮಂಗಳೂರು
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕೆಲವು ವೈದ್ಯರು ಮತ್ತು ಎಫ್‍ಎಸ್ ಎಲ್ ಅಧಿಕಾರಿಗಳು ಸಹ
ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋವಂಶ ಹತ್ಯೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಆಗ್ರಹಿಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗೋವು ಹಿಂದುಗಳ ಶ್ರದ್ಧಾ ಬಿಂದುವಾಗಿದ್ದು, ಆ ಗೋವಿಗೋಸ್ಕರ ನೂರಾರು ವರ್ಷಗಳ ಕಾಲ ಹಿಂದೂ ಸಮಾಜ ಹೋರಾಟ ಮಾಡಿದೆ. ಜೂನ್ 29ರಂದು ಬಕ್ರೀದ್ ನಡೆಯಲಿದ್ದು, ಕುರ್ಬಾನಿ ಹೆಸರಿನಲ್ಲಿ ಗೋವುಗಳ ವಧೆ ನಡೆಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ




























