ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್
ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ ವಿವಿಧ ಅಧಿಕಾರಿಗಳು ಜನಪ್ರತಿನಿಧಿಗಳಿಂದ ಮಿನಿವಿಧಾನ ಸೌಧ ಉದ್ಘಾಟನೆಗೊಂಡರೂ ಬಳಿಕ ನೀತಿ ಸಂಹಿತೆ ಜಾರಿಯಾದ ಬಳಿಕ ಕಂದಾಯ ಇಲಾಖೆಯ ಸಿಬ್ಬಂದಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಳೆದ ಕೆಲವು ದಿನದಿಂದ ಕಂದಾಯ
ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ. ಪ್ರತಿದಿನ ಸುಮಾರು 15000 ಕ್ಕೂ ಮಿಕ್ಕಿ ಆಗಮಿಸುವ ಭಕ್ತರಿಗೆ ಹಾಗೂ ದೇವಳದಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ತೆಗೆ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ತೆಗೆ ಮಧ್ಯಾಹ್ನದ ಬಳಿಕ ರಜೆಯನ್ನು ನಿಡಲಾಗುತ್ತಿದೆ. ಕಟೀಲು ಶ್ರೀ
ಮಂಜೇಶ್ವರ: ಮಂಜೇಶ್ವರ ರೈಲ್ವೇ ನಿಲ್ದಾಣದ ಮೇಲ್ದರ್ಜೆಗೇರಿಸುವಿಕೆ ಪುಟ್ ಓವರ್ ಬ್ರಿಡ್ಜ್ ಹಾಗೂ ಅತ್ಯವಶ್ಯಕ ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಮಂಜೇಶ್ವರದ ಜನರಿಗೆ, ಜನಪ್ರತಿನಿಧಿಗಳು ನೀಡಿದ ವಾಗ್ದಾನಗಳು ಕಡತಗಳಲ್ಲೇ ಬಾಕಿ ಉಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ವರ್ಷಗಳ ಹಿಂದೆ ರೈಲು ನಿಲ್ದಾಣದ ಹಳಿ ದಾಟುತ್ತಿದ ವೇಳೆ ಸಂಭವಿಸಿದ ಅಪಘಾತದಲ್ಲಿ ಆಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ವಿಚಾರವಾಗಿ ಜನರನ್ನು ಸಮಾಧಾನ ಪಡಿಸಲು ಡಂಗುರ
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ. ಜೂನ್ 18ರಂದು ನಡೆಯಲಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ವಿ4 ನ್ಯೂಸ್‍ನ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ
ಪೊಳಲಿ ಪರಿಸರದಲ್ಲಿ ನಿನ್ನೆ ಸಂಜೆ ಭಾರಿ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಮಳೆಗಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿತ್ತು. ಸಂಜೆಯ ವೇಳೆಗೆ ದೇವಸ್ಥಾನದ ಆವರಣದಲ್ಲಿ ಧಾರಕಾರವಾಗಿ ಮಳೆ ಸುರಿದಿದೆ. ಮಳೆಯಿಂದ ಭಕ್ತ ಜನ ಪುಳಕಿತರಾಗಿದ್ದು ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಅನುಗ್ರಹದಿಂದ ಮಳೆಯಾಗಿದೆ ಎನದನುವುದು ಭಕ್ತ ಜನರ ನಂಬಿಕೆ.
ದಕ್ಷಿಣ ಕನ್ನಡದ ಹಲವೆಡೆ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು
ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ ವತಿಯಿಂದ ನಗರದ ಕ್ಲಾಕ್‍ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಕ್ರೈಸ್ತ ಸಮುದಾಯದವರು, ಧರ್ಮಗುರುಗಳು, ಧರ್ಮಭಗಿನಿಯರು, ಇತರ ಸಮುದಾಯ ಮತ್ತು ಸಂಘಟನೆಗಳ
ಬಿಗ್‍ಬಾಸ್ ಕನ್ನಡ 9ರ ಕಾರ್ಯಕ್ರಮದಲ್ಲಿ ಗೆಲುವಿನ ನಗೆ ಬೀರಿರುವ ತುಳು ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ರೂಪೇಶ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಸರ್ಕಸ್. ಜೂನ್ 9ರಂದು ಒಮಾನ್-ಮಸ್ಕತ್‍ನಲ್ಲಿ ಮೆಗಾ ಪ್ರೀಮಿಯರ್ ಶೋ ಹಮ್ಮಿಕೊಂಡಿದ್ದಾರೆ. ಗಿರ್ಗಿಟ್ ಎಂಬ ಬ್ಲಾಕ್ ಬಸ್ಟರ್ ತುಳು ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರೂಪೇಶ್ ಶೆಟ್ಟಿ ಇದೀಗ ಸರ್ಕಸ್ ಸಿನಿಮಾದ ಮೂಲಕ ಸುದ್ದಿಯಲ್ಲಿದ್ದಾರೆ. ಸರ್ಕಸ್ ಸಿನಿಮಾದ ಪ್ರೀಮಿಯರ್ ಪ್ರದರ್ಶನ ದುಬೈ,




























