ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜೇಶ್ ಪುದುಶೇರಿ ಅವರು
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ
ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಭಕ್ತಾಧಿಗಳ ಉಪಸ್ಥಿತಿಯಲ್ಲಿ ನೆರವೇರಿತು. ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವು ದಕ್ಷಿಣ
2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದರು. ನಸು ನಿದ್ದೆಯಲ್ಲಿದ್ದವರು ಭೀಕರ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸಂಯೋಜಕರು ತೇಜಸ್ ರಾಜ್, ಜಿಲ್ಲಾ ಕಾಂಗ್ರೆಸ್ ಆಸಾಂಘಟಿತ ಸಮಿತಿ ಅಧ್ಯಕ್ಷರಾದ ಬಿ ಎಂ ಅಬ್ಬಾಸ್ ಅಲಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ
ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡಿರುವ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮಕುಂಭಾಭಿಷೇಕ ಜರುಗಿತು. ದೇವಳದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ೫-೪೫ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಕಲಾಶಾಭಿಷೇಕ, ಪ್ರಸನ್ನಪೂಜೆ, ನ್ಯಾಸಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಹಗಲು ರಥೋತ್ಸವ, ಪಲ್ಲಪೂಜೆ, ಪ್ರಸನ್ನಪೂಜೆ, ಮಹಾಅನ್ನಂತರ್ಪಣೆ, ಉತ್ಸವಬಲಿ, ಶ್ರೀ ಭೂತಬಲಿ,
ಚಿಣ್ಣರ ಚಾವಡಿ ಮಂಗಳೂರು ಆಶ್ರಯದಲ್ಲಿ ಮೇ 22ರಿಂದ 24ರವರೆಗೆ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನ ಸಭಾಂಗಣದಲ್ಲಿ ಚಿಣ್ಣರ ಕಲರವ – 2023 ಮಕ್ಕಳ ಸಂತಸ ಕಲಿಕಾ ಕಾರ್ಯಗಾರವು ಜರುಗಲಿದೆ. ಮೇ 22ರಂದು ಸೋಮವಾರ ಬೆಳಿಗ್ಗೆ 9.30ಕ್ಕೆ ಪ್ರಾರಂಭಗೊಳ್ಳಲಿರುವ ಕಾರ್ಯಗಾರದ ಉದ್ಘಾಟನೆಯನ್ನು ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಪಿಂಟೋ SJ ಯವರು ನಡೆಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್,ಜಿಲ್ಲಾ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರೂ, ಜಿಲ್ಲಾ ಸಂಘಟನಾ ಸಂಚಾಲಕರೂ, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ ಹಾಗೂ ಜಿಲ್ಲೆಯ ಖ್ಯಾತ ವಾದ್ಯ ಕಲಾವಿದರೂ ಆಗಿರುವ ಶ್ರೀಯುತ ಭಾಸ್ಕರ್. ಎಂ. ಮಳವೂರು ಸಿದ್ಧಾರ್ಥನಗರ ಇವರು ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದಾಗಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆಯನ್ನು ಮಧ್ಯಾಹ್ನ 2 ಗಂಟೆಗೆ
ಕರಾವಳಿ ಜಿಲ್ಲೆಯಲ್ಲಿ ಪಶ್ಚಿಮಘಟ್ಟದಿಂದ ಹರಿದು ಬರುವ50 ಕ್ಕೂ ಹೆಚ್ಚು ಜೀವ ನದಿಗಳಿಂದ ವರ್ಷದಿಂದ ವರ್ಷಕ್ಕೆ ನದಿ ತೀರದ ಭೂಮಿಗಳು ಮಳೆಗಾಲದಲ್ಲಿ ಬರುವ ಬಾರೀ ಪ್ರವಾಹದಿಂದ ನದಿ ತೀರದ ಭೂಮಿಗಳು ನದಿಯ ಒಡಲು ಸೇರಿ ಮಣ್ಣು ನಾಶವಾಗುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಭಾಗದಲ್ಲಿ ಹರಿಯುವ 3 ನದಿಗಳಾದ ಸೀತಾ . ಸ್ವರ್ಣಾ ಮತ್ತು ಮಡಿ ಸಾಲು ನದಿಗಳಿಂದ ಕಳೆದ ಹಲವಾರು ವರ್ಷದಿಂದ ನದಿ ತೀರದ ಕೃಷಿ ಭೂಮಿ , ತೆಂಗಿನ ತೋಟ ನದಿಯ ಒಡಲು ಸೇರುತ್ತಿದೆ . ಸೀತಾ […]




























