ಬಾಲಿವುಡ್ ಬೆಡಗಿ ಕನ್ನಡತಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ಧಾರೆ.ದೇವಳದ ವತಿಯಿಂದ ನಟಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದಿಸಲಾಯಿತು. ಯಕ್ಷಗಾನ ವೀಕ್ಷಣೆ ದೇವಿಯ ದರ್ಶನ ಪಡೆದ ನಂತರ ಶಿಲ್ಪಾ ಶೆಟ್ಟಿ ಯಕ್ಷಗಾನವನ್ನು ವೀಕ್ಷಿಸಿ ಕಲೆಯ
ಮೂಡುಬಿದಿರೆ: ಹದಿನೆಂಟು ಕೆರೆ, ಬಸದಿ,ದೇವಸ್ಥಾನಗಳು, ಕೇರಿಗಳು ಹೀಗೆ ಐತಿಹಾಸಿಕ ಮಹತ್ವವಿರುವ ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಯಲ್ಲಿ ಪ್ರಾಚೀನ ಕೆರೆಗಳದ್ದೇ ವಿಶೇಷತೆ. ಇದೀಗ ಬಹುಕಾಲದ ಕಾಯುವಿಕೆಯ ಬಳಿಕ ಶತಮಾನಗಳಿಂದ ಗಿಡಗಂಟಿಪೆÇದೆಗಳಲ್ಲಿ ಮರೆಯಾಗಿ ಹೂಳು ತುಂಬಿಕೊಂಡಿದ್ದ ದೊಡ್ಮನೆ ಶ್ರೀ ಚಂದ್ರಶೇಖರ ದೇವಸ್ಥಾನದ ಸುಂದರ ಕೆರೆ ಜೀಣೋದ್ಧಾರಕ್ಕೆ ತೆರೆದುಕೊಂಡಿದೆ. ಇಲ್ಲಿನ ಪ್ರಾಂತ್ಯ ಗ್ರಾಮದ ದೊಡ್ಮನೆ ರಸ್ತೆ ಕೊನೆಯಲ್ಲಿರುವ ಶ್ರೀ ಚಂದ್ರಶೇಖರ
ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಇದರ 9ನೇ ವರ್ಷದ ಸಂಭ್ರಮದ ಪ್ರಯುಕ್ತ ಬಂಟ ಸಾಂಸ್ಕøತಿಕ ವೈಭವ 2023 ಬಂಟ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಗರದ ಉರ್ವಾಸ್ಟೋರ್‍ನ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೆರ್ ಟ್ರಸ್ಟ್‍ನ ಸ್ಥಾಪಕಾಧ್ಯಕ್ಷರಾದ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವು
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮ್ಯಾಪ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಮ್ಯಾಪ್ಸ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ್ದು, ಕುಮಾರಿ ಅನನ್ಯಾ ಎ. 600ರಲ್ಲಿ 588 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ್‍ಯಾಂಕ್ ಪಡೆದಿರುತ್ತಾರೆ. ಕಾಲೇಜಿಗೆ ಶೇ.99 ಫಲಿತಾಂಶ ಲಭಿಸಿದ್ದು, ಶೇ.50 ವಿಶಿಷ್ಟ ಶ್ರೇಣಿ ಹಾಗು ಶೇ.46 ಪ್ರಥಮ ಶ್ರೇಣಿಯಲ್ಲಿ
ಕರಾವಳಿಯಲ್ಲಿ ಇಂದು ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು. ನಗರದ ಪ್ರಮುಖ ಮಸೀದಿಗಳಿಗೆ ತೆರಳಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಹಬ್ಬದ ಸಂಭ್ರಮವನ್ನು ವಿನಿಮಯಮಾಡಿಕೊಂಡರು. ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು. ನಗರದ ಬಾವುಟಗುಡ್ಡದ ಈದ್ಗಾ ಜುಮಾ
2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಉಡುಪಿ ದ್ವಿತೀಯ, ಕೊಡಗು ತೃತೀಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತವಾದ ಬಳಿಕ ತೀವ್ರ ಅಸಮಾಧಾನದಿಂದಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಜೆಡಿಎಸ್‍ಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಅನ್ಯಾಯದ ಪರಮಾವಧಿ, ದುಡ್ಡಿನ ಮದ ಯಾರಿಗೂ ಇರಬಾರದು. ಇತಿಹಾಸವುಳ್ಳ
ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ
ಚುನಾವಣಾ ಪ್ರಚಾರ ಸಹಿತ ಇನ್ನಿತರ ಕಾರ್ಯಗಳಿಗೆ 18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ದ.ಕ. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.ಕೇಂದ್ರ ಸರಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಯಂತೆ 18 ವರ್ಷ ಪ್ರಾಯದೊಳಗಿನ ಎಲ್ಲರನ್ನು ಮಕ್ಕಳು ಎಂದು ಪರಿಗಣಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸರಕಾರ ಹಾಗೂ ಕೆಐಡಿಬಿ




























