Home ಕರಾವಳಿ Archive by category ಮಂಗಳೂರು (Page 137)

ಪಿ.ಬಿ.ಹರೀಶ್ ರೈ ರವರು ಬರೆದ ಮತಪೆಟ್ಟಿಗೆ ಕೃತಿ ಬಿಡುಗಡೆ

ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಬರೆದಿರುವ ಮತಪೆಟ್ಟಿಗೆ ಕರಾವಳಿ ಜನರ ತೀರ್ಪು ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು.ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಪಿ.ಬಿ.ಹರೀಶ್ ರೈ ಬರೆದಿರುವ ಮತಪೆಟ್ಟಿಗೆ ಕೃತಿಯನ್ನು ಮಂಗಳೂರಿನ ಜಿ.ಆರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ

ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿಯ ರಾಷ್ಟ್ರ ಮಟ್ಟದ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ 200 ಮೀ. ಓಟದಲ್ಲಿ ಕಂಚಿನ ಪದಕ ಹಾಗೂ ್ಠ4100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರುವ ಶ್ರೀಮತಿ ಅಗ್ನೆಸ್ ಸಲ್ದಾನ ಅವರ ಸಾಧನೆಯನ್ನು ಸಂಸ್ಥೆಯ

ಶ್ರೀ ವೀರನಾರಾಯಣ ದೇವಸ್ಥಾನ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆ , ವೆಬ್ಸೈಟ್ ಲೋಕಾರ್ಪಣೆ ,

ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಕಡಿಮೆ ಸಮಯದಲ್ಲಿ ಸುಂದರವಾಗಿ ರೂಪಗೊಂಡಿರುವ ಶ್ರೀ ಕ್ಷೇತ್ರ ಹಿಂದೂ ಧರ್ಮದ ರಕ್ಷಣೆಯ ಕೇಂದ್ರವಾಗಲಿ,ಬ್ರಹ್ಮಕಲಶೋತ್ಸವದ ಧರ್ಮ ಕಾರ್ಯದಲ್ಲಿ ಲಕ್ಷಾಂತರ ಭಕ್ತರು ಸೇರುವಂತಾಗಲಿ ಸಮಾಜಕ್ಕೆ

ರೈಲು ನಿಲ್ಲಿಸುವ ಮೂಲಕ ಅಪಘಾತ ತಪ್ಪಿಸಿದ ಮಹಿಳೆ

ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ  ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು

ಪ್ರೊ. ನರೇಂದ್ರ ನಾಯಕ್ ಅವರಿಗೆ ಪೊಲೀಸ್ ಭದ್ರತೆ ಮುಂದುವರಿಸಲು ಆಗ್ರಹಿಸಿ ಮನವಿ

ಪ್ರೋ. ನರೇಂದ್ರ ನಾಯಕ್ ಅಖಿಲ ಭಾರತ ವಿಚಾರವಾದಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರು. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರು. ಮೌಢ್ಯಾಚರಣೆಗಳನ್ನು ಬಯಲಿಗೆಳೆಯುವುದು, ವೈಜ್ಞಾನಿಕ ಮನೋಭಾವ ಮೂಡಿಸುವುದರಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಂವಿಧಾನದ ಉದ್ದೇಶಗಳಾದ ವೈಜ್ಞಾನಿಕ ಮನೋಭಾವ, ಜಾತ್ಯಾತೀತ ತಿಳುವಳಿಕೆಗಳನ್ನು ಸಮಾಜದಲ್ಲಿ ಮೂಡಿಸುವ ಕಾರಣಕ್ಕೆ ಪ್ರತಿಗಾಮಿ ಶಕ್ತಿಗಳಿಂದ ಹಲವು ಬಾರಿ ದಾಳಿಗಳಿಗೆ ಗುರಿಯಾಗಿದ್ದಾರೆ. ಸಮಾಜದಲ್ಲಿ

ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿ : ತುಳು ಲಿಪಿ ನಾಮಫಲಕ ಅನಾವರಣ

ಕಾಸರಗೋಡಿನ ಬದಿಯಡ್ಕದ ವಿದ್ಯಾಗಿರಿಯ ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿಯಲ್ಲಿ ತುಳು ಲಿಪಿ ನಾಮಫಲಕವನ್ನು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಬದಿಯಡ್ಕದ ಗ್ರಾಮ ಪಂಚಾಯತ್ ಮೆಂಬರ್ ಶ್ರೀ ಬಾಲಕೃಷ್ಣ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು, ಇವರು ತಮ್ಮ ಭಾಷಣದಲ್ಲಿ ತುಳು ಬಾಷೆಯು ಶೀಘ್ರದಲ್ಲಿ 8ನೇ ಪರಿಚ್ಚೆದಕ್ಕೆ ಸೇರುವಂತಾಗಲಿ ಎಂದರು. ಸ್ಥಳದ ಹಿರಿಯ ದೈವ ಪಾತ್ರಿ ಶ್ರೀ ನಿಟ್ಟೋನಿ ಇವರು ತುಳು ಲಿಪಿ ನಾಮಫಲಕವನ್ನು ಉದ್ಘಾಟಿಸಿದರು.

ಬಂಟ್ವಾಳ : 170ಕ್ಕೂ ಹೆಚ್ಚು ಗಡಿಯಾರಗಳಿರುವ ಮನೆ

ಮನುಷ್ಯನ ಜೀವನದಲ್ಲಿ ಸಮಯಕ್ಕೆ ಎಷ್ಟು ಮಹತ್ವವಿದೆಯೋ, ಸಮಯವನ್ನು ಸೂಚಿಸುವ ಗಡಿಯಾರಕ್ಕೂ ಅಷ್ಟೇ ಪ್ರಾಮುಖ್ಯತೆಯಿದೆ. ಇಂದಿನ ಯುಗದಲ್ಲಿ ಕನಿಷ್ಟ ಒಂದಾದರೂ ಗಡಿಯಾರ ಇಲ್ಲದ ಮನೆ ಇರೋದು ಅಪರೂಪವೇ ಅಲ್ಲವೇ. ಆದರೆ ಈ ಮನೆಯಲ್ಲಿ ಮಾತ್ರ ಎಲ್ಲಿ ನೋಡಿದರೂ ಅಲ್ಲಿ ಗಡಿಯಾರ. 170 ಕ್ಕಿಂತಲೂ ಹೆಚ್ಚು ಗಡಿಯಾರಗಳಿರುವ ಈ ಮನೆ ಒಂದು ಗಡಿಯಾರಗಳ ಮ್ಯೂಸಿಯಂ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡ್ತಮುಗೇರು ಸಮೀಪದ ಶಶಿ ಭಟ್ ಪಡಾರ್ ಎಂಬವರಿಗೆ ಸೇರಿದ ಮನೆ.

ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು

ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಆರ್ಥಿಕ ನೆರವು

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ

ಮಕ್ಕಳ ಬೌದ್ಧಿಕ ವಿಕಸನಕ್ಕೆ ಶಿಬಿರ ಪೂರಕ- ವಿಷ್ಣುಮೂರ್ತಿ ಆಚಾರ್

ಹಾಲಿನಂತೆ ಬಿಳುಪು ಮತ್ತು ಹೊಳಪಿನಿಂದ ಕೂಡಿರುವ ಮಕ್ಕಳ ಮನಸ್ಸಿಗೆ ಸಾಣೆ ಹಿಡಿದು ಸಂಸ್ಕಾರ ಕಲ್ಪಿಸಿಕೊಡುವುದು ಮುಖ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಈ ಶಿಬಿರ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ವೇದ ವಿದ್ವಾಂಸರಾದ ವೇ.ಮೂ ವಿಷ್ಣುಮೂರ್ತಿ ಆಚಾರ್ ಪುನರೂರು ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಹಾಗೂ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಉಚಿತವಾಗಿ ಆಯೋಜಿಸಿದ