ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಇದರ ಹುಡುಗರ ಕ್ರಿಕೆಟ್ ತಂಡವು ಮಾರ್ಚ್, 2023ರಂದು NMAMIT, ನಿಟ್ಟೆಯಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿಹೊರಹೊಮ್ಮಿದ್ದಾರೆ. ಸಹ್ಯಾದ್ರಿ ತಂಡದ ಆಟಗಾರರು• ಯತಿನ್ ಯು ಶೆಟ್ಟಿ • ಅನುಪ್ ಎನ್ ರಾಯ್ಕರ್ •ಸುಶಾಂತ್ • ಅಭಿಷೇಕ್ • ಸಂಜಯ್
ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು 7 ವರುಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ, ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ, ಸರಕಾರದಿಂದ ಕನಿಷ್ಟ ಪರಿಹಾರವನ್ನೂ ಒದಗಿಸಿಕೊಡಲಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್ ನೆಟ್ಟಾರ್ ಸಾವಿಗೆ ಸ್ಪಂದಿಸಿದ ಸಂಘಪರಿವಾರ, ಬಿಜೆಪಿ ಸರಕಾರ ತಮ್ಮದೇ ಸಂಘಟನೆಯ ಕಾರ್ಯಕರ್ತ ವಿನಾಯಕ ಬಾಳಿಗಾ ಸಾವಿಗೆ ಯಾಕಾಗಿ ಸ್ಪಂದಿಸಿಲ್ಲ ಎಂದು ಪ್ರೋ
ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !ಲಾರಿ ಹಾಗೂ
ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಹಾಜಿ ಯು.ಕೆ. ಮೋನು ಕಣಚೂರು ಇವರಿಗೆ ಹುಟ್ಟೂರ ನಾಗರಿಕ ಸನ್ಮಾನ ಮತ್ತು ಸೌಹಾರ್ದ ಇಫ್ತಾರ್ ಕೂಟವು ಇದೇ ಮಾರ್ಚ್ 26 ರವಿವಾರ ಸಂಜೆ ನಾಲ್ಕು ಗಂಟೆಗೆ ದೇರಳಕಟ್ಟೆ ಸಿಟಿ ಗ್ರೌಂಡ್ ನಲ್ಲಿ ನಡೆಯಲಿದೆ. ಸೌಹಾರ್ದ ಇಫ್ತಾರ್ ಕೂಟವನ್ನು ದೇರಳಕಟ್ಟೆ ಬಿಬಿಸಿ ಹಾಲ್ ನಲ್ಲಿ ಆಯೋಜಿಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇಂದಿಲ್ಲಿ ಹಿರಿಯ ಸಾಮಾಜಿಕ ಧುರೀಣ ಶ್ರೀ ಪ್ರಸಾದ್ ರೈ ಕಲ್ಲಿಮಾರ್
ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ,ಡಬ್ಬಲ್ ಇಂಜಿನ್ ಸರಕಾರವೆಂದು ಬೀಗುತ್ತಿರುವ BJP ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದೆ.ನಗರ ಪಟ್ಟಣ ಪ್ರದೇಶದ ಸುಂದರೀಕರಣ ಹಾಗೂ ಸ್ವಚ್ಛತೆಗಾಗಿ ತನ್ನ ಸರ್ವಸ್ವವನ್ನೂ ಮುಡಿಪಾಗಿಟ್ಟ ಪೌರ ಕಾರ್ಮಿಕರ ಉತ್ತಮ ಬದುಕಿಗಾಗಿ ಎಳ್ಳಷ್ಟೂ ಕಾಳಜಿ ವಹಿಸದ ರಾಜ್ಯ ಸರಕಾರ
ಆರ್.ಟಿ.ಐ ಹಾಗೂ ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ನಡೆದು7 ವರ್ಷಗಳಾದರೂ ನಿಧಾನಗತಿಯಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರತಿಭಟಿಸಿ ಮಂಗಳವಾರ ಸಂಜೆ ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ಎದುರಿನಿಂದ ವಿನಾಯಕ ಬಾಳಿಗರ ಮನೆ ತನಕ ಮೆರವಣಿಗೆ ಸಾಗಿತು.ಮೆರವಣಿಗೆಯಲ್ಲಿ ವಿನಾಯಕ ಬಾಳಿಗಾ ಸಹೋದರಿ ರಾಧಾ ಬಾಳಿಗಾ , ಪ್ರೊ.ನರೇಂದ್ರ ನಾಯಕ್ , ಎಂ.ದೇವದಾಸ್
ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಾರ್ಚ್ 26ರಂದು ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಸಿದ್ದರಾಗಿ ಇದೇ ಮಾರ್ಚ್ 26ರಂದು ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ ಮಾಡಿದ್ದಾರೆ. ಪರಸ್ಪರ ಬಣ್ಣ ಹಚ್ಚಿ
ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದವರಲ್ಲಿ ಸಾಹಸ ಹಾಗೂ ಸಾಹಿತ್ಯದ ಗುಣ ಅಡಕವಾಗಿರುತ್ತದೆ. ಅದು ಬರವಣಿಗೆಗೆ ಪೂರಕ. ಬೆವರು ಅದ್ದಿದ ಮಣ್ಣಿನಲ್ಲಿ ಹುಟ್ಟಿದ ಸಾಹಿತ್ಯ ಕೃಷಿ ಎಲ್ಲಕ್ಕಿಂತಲೂ ಶ್ರೇಷ್ಠ ಎಂದು ತುಳು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು. ನಗರದ ಕೆನರಾ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ತುಳು ಲಿಪಿ ಶಿಕ್ಷಕಿ, ಲೇಖಕಿ ಗೀತಾ ಲಕ್ಷ್ಮೀಶ್ ಅವರ ‘ಪೆರ್ಗದ ಸಿರಿ’ ತುಳು ಕವನ ಸಂಕಲನವನ್ನು ಭಾನುವಾರ ಬಿಡುಗಡೆಗೊಳಿಸಿ
ಅಳಪೆ ಉತ್ತರ ವಾರ್ಡಿನ ಕೊಡಕ್ಕಲ್ ಪ್ರದೇಶದ ದಲಿತ ಸಮುದಾಯಕ್ಕೆ ಸೇರಿದ ಲೀಲಾರವರ ಮನೆಯ ಎರಡೂ ಭಾಗದಲ್ಲಿ ಮಳೆನೀರು ಹರಿಯುವ ರಾಜಕಾಲುವೆಗೆ ತಡೆಗೋಡೆಯನ್ನು ಕೂಡಲೇ ನಿರ್ಮಿಸಬೇಕೆಂದು ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಮನಪಾ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತೀ ವರ್ಷವೂ ಸುರಿಯುವ ವಿಪರೀತ ಮಳೆಗೆ ರಾಜಕಾಲುವೆಗಳು ಭರ್ತಿಗೊಂಡು ಕೃತಕ ನೆರೆ ಉಂಟಾಗುತ್ತಿದೆ.ಕಳೆದ ವರ್ಷದ ಮಳೆಗೆ ಲೀಲಾರವರ ಮನೆ ಮುಳುಗಿದ್ದು,ಅಕ್ಕಪಕ್ಕದ ಮನೆಗಳಿಗೂ ಭಾರೀ ಹಾನಿ
ವೇತನ ಹೆಚ್ಚಳ ಸೇರಿದಂತೆ ಹಲವು ಬಗೆಯ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಸ್ಪಂದಿಸದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ, ದಲಿತ ವಿರೋಧಿ ನಡೆಯನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವಿರೋಧಿಸುತ್ತದೆ ಹಾಗೂ ಪೌರ ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಮುಂದಾಗಬೇಕು ಮತ್ತು ನಗರದಲ್ಲಿ ಕಸ ವಿಲೇವಾರಿಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತದೆ. ಗುತ್ತಿಗೆ ಆಧಾರದಲ್ಲಿ



























