Home ಕರಾವಳಿ Archive by category ಮಂಗಳೂರು (Page 160)

ಇಖ್ರಾ ಅರೆಬಿಕ್ ಶಾಲೆ : ಗಣರಾಜ್ಯೋತ್ಸವ

ಮಂಗಳೂರು ನಗರದ ಕಂಕನಾಡಿಯ ಇಖ್ರಾ ಅರೆಬಿಕ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತ ಸಂವಿಧಾನವು ಪ್ರತಿಯೊಬ್ಬರಿಗೂ ಗೌರವದಿಂದ ಬದುಕು ಅವಕಾಶವನ್ನು ಕಲ್ಪಿಸಿದೆ. ಎಲ್ಲಾ ಧರ್ಮೀಯರಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಕಲ್ಪಿಸಿದೆ. ದೇಶದ ಕಾನೂನಿಗೆ

ಮಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ

ಯೋಧ ಮುರಳೀಧರ್ ರೈ ಹೃದಯಾಘಾತದಿಂದ ನಿಧನ

ಸಶಸ್ತ್ರ ಸೀಮಾಬಲ್‍ನಲ್ಲಿ ಭೋಪಾಲ್‍ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‍ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರು

ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನ

ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿನ ನಾಗರಿಕರು ಹಾಗೂ ಕೊಡಿಯಾಲ್ ಬೈಲ್ ಪರಿಸರದಲ್ಲಿನ ಕಾಲೇಜುಗಳ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ, ಪ್ರಧಾನ ಕಾರ್ಯದರ್ಶಿಗಳಾದ

ನಿಧಿಲ್ಯಾಂಡ್ ಸಂಸ್ಥೆಯ ನೂತನ ಕಛೇರಿ ಉದ್ಘಾಟನೆ

ನಗರದ ಕಟ್ಟಡ ನಿರ್ಮಾಣ ಸಂಸ್ಥೆ ‘ನಿಧಿ ಲ್ಯಾಂಡ್‌’ನ ನೂತನ ಕಚೇರಿ ನಗರದ ಬಿಜೈ ಕಾಪಿಕಾಡ್‌ನಲ್ಲಿರುವ ನ್ಯೂ ಬೆರ್‍ರಿ ಎನ್‌ಕ್ಲೇವ್‌ನಲ್ಲಿ ಶಾಸಕ ಡಾ. ವೈ. ಭರತ್‌ ಶೆಟ್ಟಿ ಸೋಮವಾರ ಉದ್ಘಾಟಿಸಿದರು.ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ ನಿರ್ಮಾಣ ಕ್ಷೇತ್ರದ ಪರವಾನಗಿ ನೀಡುವ ಕೆಲಸಗಳನ್ನು ಸರಳಗೊಳಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಿಧಿ ಲ್ಯಾಂಡ್ ಬಿಲ್ಡರ್ ಸಂಸ್ಥೆಯು ಮಂಗಳೂರಿನ ಉದ್ಯಮ ಕ್ಷೇತ್ರದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಮಾದರಿಯಾಗಿದೆ

ಜಿಪಂ ಸಿಇಒ ಡಾ. ಕುಮಾರ್‌ ಗೆ ರಾಜ್ಯ ಮಟ್ಟದ ಪ್ರಶಸ್ತಿ

ಮಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ (2023) ಅಂಗವಾಗಿ ವಿವಿಧ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ನಿರ್ವಹಣೆಗಾಗಿ ದ.ಕ. ಜಿಪಂ ಸಿಇಒ ಡಾ. ಕುಮಾರ್‌ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜ.25ರ ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ

ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ನೇಮಕ,ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಸಂತೋಷ್ ಕಾಮತ್

ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ

ಜೋಸ್ ಆಲುಕ್ಕಾಸ್ : ಸಂತ ಜೋಸೆಫ್ ಪ್ರಶಾಂತ್ ನಿವಾಸ್ ವೃದ್ದಾಶ್ರಮಕ್ಕೆ ಬೊಲೆರೋ ವಾಹನ ಕೊಡುಗೆ

ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್‍ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್‍ರಾವ್ ರಸ್ತೆಯಲ್ಲಿರುವ ಶೋರೂಂನಲ್ಲಿ ಕೊಡುಗೆಯಾಗಿ ನೀಡಲಾಯಿತು. ಉತ್ತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನ ಜ.28ರಿಂದ 30ರ ವರೆಗೆ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ 30ರ ವರೆಗೆ ನಡೆಯಲಿದೆ. ಜನವರಿ 28ರ ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ನವಕಲಶಾಭಿಷೇಕ, ಗಣಹೋಮ, ಚಪ್ಪರ ಮುಹೂರ್ತ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 5ಕ್ಕೆ ಶ್ರೀ ಕಂಬೇರ್ಲು ದರ್ಶನ ನಂತರ ಭಂಡಾರ ಏರುವುದು. ಸಂಜೆ 7

ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರ 2022 ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಈ ವರ್ಷದಿಂದ ಎರಡು ಹೊಸ ಪ್ರಶಸ್ತಿಗಳನ್ನು ದಾನಿ ಡಾ. ಪಿ. ದಯಾನಂದ ಪೈ ಇವರ ಹೆಸರಿನಲ್ಲಿ ಸ್ಥಾಪಿಸಿದೆ. ಜ್ಯೂರಿ ಸಮಿತಿಗಳ ಶಿಫಾರಸಿನ ಮೇರೆಗೆ ಇದೀಗ ವಿಶ್ವ ಕೊಂಕಣಿ ಕೇಂದ್ರವು ಈ ಪ್ರಶಸ್ತಿಗಳ ವಿಜೇತರ ಹೆಸರುಗಳನ್ನು ಪ್ರಕಟಿಸಿದೆ. ಸಾರ್ವಜನಿಕರಿಂದ ಆನ್ ಲೈನ್ ಮುಖಾಂತರ ಆಹ್ವಾನಿಸಲಾದ ನಾಮ ನಿರ್ದೇಶನಗಳ ಆಧಾರದಲ್ಲಿ ಜ್ಯೂರಿ ಸಮಿತಿಯ ಸದಸ್ಯರ ಮೌಲ್ಯಮಾಪನದ ಬಳಿಕ ಪ್ರಶಸ್ತಿಗಾಗಿ ಆಯ್ಕೆಗಳನ್ನು ಪ್ರಕಟಿಸಲಾಗಿದೆ.ಗೋವಾದ ಹೆಸರಾಂತ