ಅರ್ಕುಳ ಮತ್ತು ಅಡ್ಯಾರು ಗ್ರಾಮಗಳನ್ನು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಮನಗಂಡು ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಇದನ್ನು ಸಕರಾತ್ಮಕವಾಗಿ ಪರಿಗಣಿಸಿದ ಸರ್ಕಾರ ಗುರುಪರ ಹೋಬಳಿಯಿಂದ ಈ ಗ್ರಾಮಗಳನ್ನು ಕೈಬಿಟ್ಟು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿ ಆದೇಶ
ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ ಎಂಬುವುದನ್ನ ಕಳೆದ ನಾಲ್ಕು ವರ್ಷ ಜನರಿಗೆ ತೋರಿಸಿಕೊಟ್ಟಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಇಂತಹ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ವಿಚಾರಗೋಷ್ಟಿ ನಡೆಯಿತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಚಾರಗೋಷ್ಟಿ ನಡೆಯಿತು. ಹಿರಿಯ ಪತ್ರಕರ್ತರಾದ ಅನಿಲ್ ಶಾಸ್ತ್ರಿ ಅವರು ವಿಷಯ ಮಂಡಿಸಿದರು. ಓಶಿಯನ್ ಪರ್ಲ್ ಹೋಟೆಲ್‍ನ ಉಪಾಧ್ಯಕ್ಷರಾದ ಗಿರೀಶ್ ಅವರು ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ಮಾತನಾಡಿ,
ತುಳು ವಿದ್ವಾಂಸ, ಸಂಶೋಧಕ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ 2022-23 ಸಾಲಿನ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿಯನ್ನು ತುಳು ಸಾಹಿತ್ಯ ಕ್ಷೇತ್ರಕ್ಕೆ ಅಗಾಧ ಕೊಡುಗೆ ನೀಡಿದ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರು ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05, ಜನವರಿ 2023ರಂದು ಕೆನರಾ ಪ್ರೌಢಶಾಲೆ ಡೊಂಗರಕೇರಿಯ ಭುವನೇಂದ್ರ ಸಭಾಂಗಣದಲ್ಲಿ ಸಂಜೆ ಸರಿಯಾಗಿ 4:30ಕ್ಕೆ ಜರುಗಲಿದೆ. ಉತ್ತಮ ಶಿಕ್ಷಕ, ಅಪ್ರತಿಮ ವಾಗ್ಮಿ ಹಾಗೂ ಅನೇಕ
ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ
“ಕೊಂಕಣಿ ಸಾಹಿತ್ಯ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕೊಂಕಣಿ ಪತ್ರಿಕೆ ಮತ್ತು ನಿಯತಕಾಲಿಕೆಗಳು ಮುಖ್ಯ ಕಾರಣ. ಕೊಂಕಣಿ ಪತ್ರಿಕೊದ್ಯಮಕ್ಕೆ ಶತಮಾನದ ಇತಿಹಾಸವಿದೆ. ಕೊಂಕಣಿ ಬರಹಗಾರರಿಗೆ ಉತ್ತೇಜನ ನೀಡಿ, ಅವರನ್ನು ಸಾಹಿತಿಗಳನ್ನಾಗಿ ಮಾಡುವುದರಲ್ಲಿ ಕೊಂಕಣಿ ಪತ್ರಿಕೆಗಳ ಪ್ರಕಾಶಕರು ಮತ್ತು ಸಂಪಾದಕರ ಶ್ರಮ ಗಣನೀಯ. ಅವರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸುವುದು ಉತ್ತಮ ಕೆಲಸ. ಹಿರಿಯ ಮತ್ತು ನಿವೃತ್ತ ಪತ್ರಕರ್ತರನ್ನು ಮಾತ್ರವಲ್ಲ, ಹಾಲಿ
ಮಂಗಳೂರು; ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿದೆ ಎಂದು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನ -2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಎಲ್ಲಾ ಬೆಳವಣಿಗೆಗೆ
ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‍ಕ್ಷಣವೆ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಜ.2ರಂದು ಮನವಿ
ಶಾಲಾ ಬಾಲಕನಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಧಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚರಣ್ (15) ಗುರುತಿಸಲಾಗಿದೆ. ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಚರಣ್ ಸ್ಧಳದಲ್ಲಿಯೇ ಮೃತ ಪಟ್ಟಿದ್ದಾನೆ ಎನ್ನಲಾಗಿದೆ. ಸ್ಧಳಕ್ಕೆ
ವೈಕುಂಟ ಏಕಾದಶಿಯ ಪ್ರಯುಕ್ತ ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿಯವರು ಇಂದು ಮಂಗಳೂರಿನ ಡೊಂಗರಕೇರಿಯ ಶ್ರೀ ವೆಂಕಟ್ರಮಣ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಪೂಜೆಯ ಬಳಿಕ ಜನಾರ್ದನ ಪೂಜಾರಿಯವರನ್ನು ಸನ್ಮಾನಿಸಿದರು ಈ ವೇಳೆ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅವರು ಜನಾರ್ದನ ಪೂಜಾರಿಯವರ ಜೊತೆಗಿದ್ದರು




























