ಮಂಗಳೂರು :- ನಗರ ವಾಸ್ತುಶಿಲ್ಪಿಗಳು, ನಗರ ಯೋಜಕರು, ತಜ್ಞರು, ವಿನ್ಯಾಸಕರು, ಮಾನವ ಭೂಗೋಳ ಶಾಸ್ತ್ರಜ್ಞರು, ಸಾಮಾಜಿಕ ಕಾರ್ಯಕರ್ತರು, ಶಿಕ್ಷಣ ತಜ್ಞರು, ಸ್ಥಳೀಯರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ಪ್ಲೇಸ್ ಮೇಕಿಂಗ್ ಇಂಡಿಯಾ ತಂಡದಿಂದ ಮಂಗಳೂರು ನಗರದಲ್ಲಿ ಸಮುದಾಯ ಸ್ಥಳಗಳ ಪರಿಣಾಮಕಾರಿ ನಿರ್ವಹಣೆ ಕುರಿತಂತೆ ಸುರತ್ಕಲ್ ನಲ್ಲಿರುವ ನಿರ್ಮಿತಿ
-ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ಗ್ರಾಮ ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಶಾಲೆ, ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ ಸಹಕಾರ ದಲ್ಲಿ ಡಿ.3ರ ಶನಿವಾರ ಜಿಲ್ಲಾ ಮಟ್ಟದ ಸ್ವಚ್ಛ ಶನಿವಾರ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಸಕರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ
ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿರುತ್ತಾರೆ. ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು, ವ್ಯವಸ್ಥಾಪಕರು, ಆಡಳಿತ
ನವ ಮಂಗಳೂರು ಬಂದರಿಗೆ `ಸೆವೆನ್ ಸೀಸ್ ಎಕ್ಸ್ ಪ್ಲೋರರ್ ‘ ಹಡಗು ಆಗಮಿಸಿದ್ದು, ಇದು ಈ ಋತುವಿನ ಎರಡನೇ ಕ್ರೂಸ್ ಹಡಗು ಆಗಿದೆ. ಈ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿ ವರ್ಗದ ಸದಸ್ಯರಿದ್ದರು. ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ಎನ್‍ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಸ್ವಾಗತ ಕೋರಿದರು. ಈ ತಂಡದ ಸದಸ್ಯರು ನಗರದ ಸಂತ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಕುದ್ರೋಳಿ ದೇವಸ್ಥಾನ, ಸ್ಥಳೀಯ ಮಾರುಕಟ್ಟೆ, ಗೋಡಂಬಿ
ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35
ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟಕ್ಕಾಗಿ ಡಾ. ಬೋಬಿ ಚೆಮ್ಮನ್ನೂರು ನೇತೃತ್ವದಲ್ಲಿ ಖತರ್‍ಗೆ ಕೊಂಡೊಯ್ಯಲಾಗುವ ಫುಟ್ಬಾಲ್ ದಂತಕತೆ ಡಿಗೊ ಮರಡೋನ ಅವರ ಹ್ಯಾಂಡ್ ಆಫ್ ಗಾಡ್ ಚಿನ್ನದ ಮೂರ್ತಿಯನ್ನು ನಗರದ ಮೈದಾನಕ್ಕೆ ತರಲಾಯಿತು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯದ ವಿರುದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ದಕ್ಷಿಣ ಕನ್ನಡ ಫುಟ್ಪಾಲ್ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್, ಕಾರ್ಪೋರೇಟರ್ ಲತೀಫ್ ಕಂದಕ್
ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಆಹೋರಾತ್ರಿ ಹೋರಾಟವು ಬುಧವಾರ ರಾತ್ರಿ ಮುಕ್ತಾಯಗೊಂಡಿದ್ದು, ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಗುರುವಾರದಂದು ಸುರತ್ಕಲ್ ಧರಣಿ ವೇದಿಕೆಯಲ್ಲಿ ವಿಜಯೋತ್ಸವ ಆಚರಿಸಿದರು. ಸಾಮೂಹಿಕ ಹೋರಾಟದ ಫಲವಾಗಿ ಸುರತ್ಕಲ್ ಅಕ್ರಮ ಟೋಲ್ ಮುಚ್ಚುವಂತಾಯಿತು, ದೇಶದಲ್ಲಿ ಇರುವ ಎಲ್ಲಾ ಅಕ್ರಮ ಟೋಲ್ ಗಳ ಮುಚ್ಚುಗಡೆಗೆ ಈ ಹೋರಾಟ
ಮುಸ್ಲಿಂ ಸಮುದಾಯಕ್ಕಾಗುವ ದೌರ್ಜನ್ಯ, ಅನ್ಯಾಯ ಹಾಗೂ ನಿಂದನೆಗಳನ್ನು ಗಮನದಲ್ಲಿಟ್ಟುಕೊಂಡು ಮುಸ್ಲಿಂ ಸಮಾಜಕ್ಕೆ ಆಸರೆಯಾಗಲು ಹಾಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಸ್ಲಿಂ ಜಸ್ಟೀಸ್ ಫೋರಮ್ ದ.ಕ. ವತಿಯಿಂದ ಡಿ.3ರಂದು ಸಂಜೆ 4ಕ್ಕೆ ಕಂಕನಾಡಿಯಲ್ಲಿರುವ ಜಮ್ಯಿಯ್ಯತುಲ್ ಫಲಾಹ್ ಸಭಾಂಗಣದ ಮರ್ಹೂಂ ಜನಾಬ್ ಅಮೀರ್ ತುಂಬೆ ವೇದಿಕೆಯಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ರಫೀಯುದ್ದೀನ್ ಕುದ್ರೋಳಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಕಳೆದ ದಿನಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ರದ್ದಾಗ ಬೇಕು ಎಂಬುದಾಗಿ ಸಾಕಷ್ಟು ಸಂಘ-ಸಂಸ್ಥೆ ಸಂಘಟನೆಗಳ ಸಹಕಾರದೊಂದಿಗೆ ಹೋರಾಟದ ಮುಖಂಡತ್ವ ವಹಿಸಿ ಪರಿಣಾಮಕಾರಿ ಹೋರಾಟ ನಡೆಸಿದ ಆಪತ್ತ್ ಭಾಂದವ ಆಸೀಫ್ ಅವರನ್ನು ಮುಚ್ಚಿದ ಟೋಲ್ ಗೇಟ್ ಮುಂಭಾಗ ಸನ್ಮಾನಿಸಿ ಗೌರವಿಸಿದ್ದಲ್ಲದೆ, ವಾಹನ ಸವಾರರಿಗೆ ಸಿಹಿ ನೀಡಿ ಸಂತೋಷ ಸಂಭ್ರಮ ಹಂಚಿಕೊಂಡರು. ಈ ಸಂದರ್ಭ ಮಾತನಾಡಿದ ಆಸೀಫ್ ಆಪತ್ತ್ ಬಾಂಧವ, ನಾನು ಹೋರಾಟ ನಡೆಸಿದ ಆ ದಿನಗಳಲ್ಲಿ ಟೋಲ್ ವಿರುದ್ಧ ಹೋರಾಟಕ್ಕೆ ನನಗೆ ಬೆಂಬಲ
ಕೇವಲ ಬೆರಳೆಣಿಕೆಯ ಗ್ರಾಮಸ್ಥರ ಮಧ್ಯೆಯೇ 56ನೇ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ಪ್ರಥಮ ಗ್ರಾಮ ಸಭೆ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದಿದೆ. ಆರಂಭದಲ್ಲೇ ಸಭಾಭವನದಲ್ಲಿ ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಇಲ್ಲದೆ ಸಭೆ ಮಾತುಗಳು ಉಪಸ್ಥಿತರಿದ್ದ ಬೆರಳೆಣಿಕೆ ಮಂದಿಗೂ ಕೇಳದೆ ಸಭೆಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.15 ಮಂದಿ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಧಿಕಾರಿ ವರ್ಗ ಮಾತ್ರ ಸಭೆಯಲ್ಲಿ ಕಾಣಿಸುತ್ತಿದ್ದು ಗ್ರಾ.ಪಂ. ಕಾರ್ಯವೈಕರಿ




























