Home ಕರಾವಳಿ Archive by category ಮಂಗಳೂರು (Page 183)

ಇರುವೈಲ್‍ನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ : 35 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ

ಮೂಡುಬಿದಿರೆ: ದ.ಕ ಜಿಲ್ಲಾಡಳಿತ , ದ.ಕ. ಜಿ.ಪಂ ವತಿಯಿಂದ ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಡೀಮ್ಡ್ ಫಾರೆಸ್ಟ್, ಹಾಗೂ ಖಾಸಗಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ 35 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಸರ್ಕಾರದ ಮಟ್ಟದಲ್ಲಿ ಪರಿಹರಿಸಬಹುದಾದ

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ; ಮಾ.5 ರಿಂದ 13 ರವರೆಗೆ ಬ್ರಹ್ಮಕಲಶ ಮತ್ತು ಜಾತ್ರಾ ಮಹೋತ್ಸವ

ಚಿತ್ರಾಪುರ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಚಿತ್ರಾಪುರ ಇಲ್ಲಿನ ಜೀರ್ಣೋದ್ಧಾರಕ್ಕೆ ಸರ್ವ ಭಕ್ತರು ಕೈ ಜೋಡಿಸಿ ದೇವಸ್ಥಾನವನ್ನು ಐತಿಹಾಸಿಕವಾಗಿ ಬೆಳಗಿಸಿ ಶ್ರೀ ದೇವಿಯ ಆಶೀರ್ವಾದ ಪಡೆಯುವಂತಾಗಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬ್ರಹ್ಮಕಲಶಾಧಿ ದಾರ್ಮಿಕ ಸೇವಾ ಕಾರ್ಯಗಳು ಮಾ.5 ರಿಂದ 13 ರವರೆಗೆ ಜರಗಲಿದ್ದು ,13 ರಂದು ಬ್ರಹ್ಮಕಲಶ ಮತ್ತು 14 ರಿಂದ ಜಾತ್ರಾ ಮಹೋತ್ಸವ

ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನ ಸಂಪರ್ಕ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ನವೆಂಬರ್ 27ರಂದು ನಗರದ ಡಾನ್ ಬಾಸ್ಕೋ ಹಾಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಮೇಕ್ಸಿಂ ಡಿಸಿಲ್ವ ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಬೇಡಿಕೆ, ಮುಂದಿನ ಕಾರ್ಯತಂತ್ರಗಳ ರೂಪಿಸುವಿಕೆ ಹಾಗೂ ವೇದಿಕೆಯ ಕಾನೂನು ಸಲಹೆ

ಸಮಾಜದಲ್ಲಿ ಭೀತಿ ಮೂಡಿಸುವ ಚಟುವಟಿಕೆ ಮಟ್ಟ ಹಾಕುತ್ತೇವೆ -ಸಚಿವ ಸುನೀಲ್ ಕುಮಾರ್

ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್‍ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ;ಆಟೋ ಚಾಲಕನ ಆರೋಗ್ಯ ವಿಚಾರಿಸಿದ ಸಚಿವ ಸುನೀಲ್ ಕುಮಾರ್

ಮಂಗಳೂರು ಸಮೀಪದ ನಾಗೂರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮರವರನ್ನು ಮಾನ್ಯ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ತೆರಳಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು ಹಾಗೂ ಕುಟುಂಬದವರಿಗೆ ಧೈರ್ಯ ತುಂಬಲಾಯಿತು..

ಡಿ.1ರಿಂದ ಆಟೊ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಡಿ.1ರಿಂದ ಅನ್ವಯಗೊಳ್ಳುವಂತೆ ಪರಿಷ್ಕರಿಸಿ ದ.ಕ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ. ಕನಿಷ್ಟ ದರ ಮೊದಲ ಒಂದುವರೆ ಕಿ.ಮೀ.ಗೆ 35 ರೂ., ನಂತರದ ಪ್ರತೀ 1 ಕಿ.ಮೀ. 20 ರೂ. ಆಗಿರುತ್ತದೆ. ಮೊದಲ 15 ನಿಮಿಷಗಳವರೆಗೆ ಕಾಯುವ ದರವಿರುವುದಿಲ್ಲ. ಅದು ಉಚಿತವಾಗಿರುತ್ತದೆ.ಬಳಿಕದ 15 ನಿಮಿಷಕ್ಕೆ 5 ರೂ.

ADGP ಅಲೋಕ್​ ಕುಮಾರ್​ಗೆ ಬೆದರಿಕೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇದೀಗ ಆರೋಪಿ ಶಾರೀಕ್​​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮತ್ತೊಂದು ದಾಳಿಯ ಎಚ್ಚರಿಕೆ ನೀಡಿದೆ. ಇನ್ನು ಈ ಹೇಳಿಕೆಯಲ್ಲಿ ಎಡಿಜಿಪಿ

ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ

ಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ಸ್ ಮೂಲಗಳು ತಿಳಿಸಿದೆ.

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ. ಪ್ರಕರಣದ ವಿವರಪಾಣೆಮಂಗಳೂರು ನರಿಕೊಂಬು ನಿವಾಸಿ ಅಣ್ಣು ಪೂಜಾರಿ (55) ಮತ್ತು ಗಂಗಯ್ಯ ನೀಲಕಂಠಯ್ಯ