Home ಕರಾವಳಿ Archive by category ಮಂಗಳೂರು (Page 186)

ಚಲಿಸುತ್ತಿದ್ದ ಅಟೋರಿಕ್ಷಾದೊಳಗೆ ಸ್ವೋಟ : ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತ! -ಡಿಜಿಪಿ

ಚಲಿಸುತ್ತಿದ್ದ ಅಟೋರಿಕ್ಷಾ ಸೊಳಗೆ ಸ್ವೋಟ ಉಂಟಾಗಿ ಪ್ರಯಾಣಿಕ ಮತ್ತು ಚಾಲಕ… ಗಾಯಗೊಂಡಿರುವ ಪುಟನೆ ನಗರದ ಕಂಕನಾಡಿ ಪೆÇಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆ ಯಾಗಿದೆ. ಆಟೋರಿಕ್ಷಾದ ಒಳಗಿನ ಕೆಲವು ಭಾಗಗಳು ಸುಟ್ಟು ಹೋಗಿವೆ. ಪ್ರಯಾಣಿಕನ ಚೀಲದಲ್ಲಿದ್ದ ಪರಿಕರದಿಂದ ಬೆಂಕಿ

ತೋಕೂರು ಗುತ್ತು ವಾರಿಜಾಕ್ಷಿ ಶೆಟ್ಟಿ ನಿಧನ

ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20 ರಂದು ಮುಂಜಾನೆ ಸ್ವಗೃಹದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಮೃತರು ಪುತ್ರರಾದ ಉದ್ಯಮಿ ತೋಕೂರುಗುತ್ತು ಶರತ್ಚಂದ್ರ ಶೆಟ್ಟಿ ಮತ್ತು ರತ್ನಶೇಖರ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಕನ್ನಡದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದರೆ ಅಸಾಮಾನ್ಯವಾದದನ್ನು ಸಾಧಿಸಬಲ್ಲರು: ಬಿ.ಸಿ‌.ನಾಗೇಶ್

ಮಂಗಳೂರು: ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಮಾತೃ ಭಾಷೆ ಮತ್ತು ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ಅದಾಗಲೇ ಅಡಗಿರುವ ಸೂಪ್ತ ಪ್ರತಿಭೆಯ ಅನಾವರಣಗೊಳಿಸುವ ಪ್ರಯತ್ನವಾಗುತ್ತಿದೆ. ಸರ್ಕಾರದ ಈ ಪ್ರಯತ್ನಗಳ ಜೊತೆಗೆ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕನ್ನಡ ಶಾಲಾ ಮಕ್ಕಳ ಹಬ್ಬದ ಮೂಲಕ ಕನ್ನಡ ಮಾಧ್ಯಮದ ಮಕ್ಕಳಿಗೆ

ಆಧುನಿಕ ಜ್ಞಾನ – ಭಾರತೀಯ ಸಂಸ್ಕೃತಿಯ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ ವಿದ್ಯಾಲಯ[ಸ್ವಾಯತ್ತ]ದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು,ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ದೇಶದ ಅಖಂಡತೆ, ಸಾರ್ವಭೌಮತೆಯನ್ನು ಎತ್ತಿಹಿಡಿಯುವ

ಶಾಲಾ ಪಠ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ : ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿ ಮಾಡುವ ಜೊತೆಗೆ ಅವರ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಕಾರ್ಯವನ್ನು ಸರಕಾರದ ವತಿಯಿಂದ ಶೀಘ್ರವೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಅನಾವರಣ ಗೊಳಿಸಿದ ಬಳಿಕ ಕರಾವಳಿ ಉತ್ಸದ ಮೈದಾನದಲ್ಲಿ

ಬಾವುಟಗುಡ್ಡೆ : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಹಸಿರು ಯೋಜನೆಉತ್ಪಾದನೆಗೆ

ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು

 ಮತದಾರರ ಪಟ್ಟಿ ಪರಿಷ್ಕರಣೆ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ : ಸಿಎಂ ಬೊಮ್ಮಾಯಿ

ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ ಬಂದ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಅಶ್ವತ್ಥನಾರಾಯಣ, ಶಾಸಕ ವೇದವ್ಯಾಸ ಕಾಮತ್, ರಾಜೇಶ್

ಬಿ.ಎಸ್.ಪಿ . ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವು‌ ನಿಧನ

ಮಂಗಳೂರು : ಬಹುಜನ ಸಮಾಜ ಪಕ್ಷ( ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದಾಸಪ್ಪ ಎಡಪದವು (63)ಅವರು ಇಂದು ನಿಧನರಾದರು.ಇಂದು ಮುಂಜಾನೆ ಗುರುಪುರದ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ದಾಸಪ್ಪ ಅವರು ನಿಧನರಾದರು.ಗುರುಪುರ ದಲಿತ ಅಭಿವೃದ್ಧಿ ಸಮಿತಿಯ ಸ್ಥಾಪಕರಾಗಿದ್ದ ದಾಸಪ್ಪ ಅವರು , ಭೌದ್ಧ ಧರ್ಮದ ಅನುಯಾಯಿಯಾಗಿದ್ದರು. ಬಹುಜನ ಸಮಾಜ ಸಂಘಟನೆಯ ಸಲುವಾಗಿ ರಾಜ್ಯವ್ಯಾಪಿಯಾಗಿ ದಾಸಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಹಾಗೂ ನಾಲ್ವರು