Home ಕರಾವಳಿ Archive by category ಮಂಗಳೂರು (Page 189)

ದ.ಕ. ಜಿಲ್ಲೆಯಲ್ಲಿ 2023ರ ಕರಡು ಮತದಾರರ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯ ಮತದಾರರು ಕರಡ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 17,08, 955 ಮತದಾರರಿದ್ದು, 8, 71,364 ಮಹಿಳಾ ಮತ್ತು 8,37,527 ಪುರುಷ ಮತದಾರರಿದ್ದಾರೆ. ಡಿ.8ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಅವರು ನಗರದಲ್ಲಿ

ಅನಾಥ ವೃದ್ಧರಿಗೆ ಆಶ್ರಯ ನೀಡೋರಿಲ್ಲ : ಜಿಲ್ಲಾಧಿಕಾರಿಗಳಿಗೆ ಮೊರೆ ಹೋದ ಸಾಮಾಜಿಕ ಕಾರ್ಯಕರ್ತರು

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ ! ವೃದ್ಧರನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅವರಿಗೆ ವೃದ್ಧರನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾಸ್ಪತ್ರೆಯಿಂದ

ಮಿಲಾಗ್ರಿಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2022-23 ನೆ ಸಾಲಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿತು. ಕೆನರಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ, ಅಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಎಸ್ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಎನ್ನೆಸ್ಸೆಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನವಾಗುವುದರ ಜೊತೆಗೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು

ಕನ್ನಡದಲ್ಲೇ ವ್ಯವಹರಿಸಲು ಮನವಿ

ಕನ್ನಡ ನೆಲ, ಜಲ ಭಾಷೆ, ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸುವಲ್ಲಿ ಕಸಾಪ ಬಹುಮುಖ್ಯ ಭೂಮಿಕೆ ವಹಿಸುತ್ತಿದೆ : ಡಾ ಚೂಂತಾರುಕನ್ನಡ ನಾಡಲ್ಲಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುವಂತಾಗಬೇಕು. ಇತರ ರಾಜ್ಯದ ನೌಕರರು ನಮ್ಮ ರಾಜ್ಯದಲ್ಲಿ ಕೆಲಸ ಮಾಡುವಾಗ ಕನ್ನಡ ಭಾಷೆ ಕಲಿತು ಇಲ್ಲಿನ ಜನರೊಂದಿಗೆ ವ್ಯವಹರಿಸಬೇಕಾಗುತ್ತದೆ. ಕನ್ನಡ ಭಾಷೆಯಲ್ಲಿ ವ್ಯವಹರಿಸಿದರೆ ಇಲ್ಲಿಯ ಕನ್ನಡಿಗರ ಮನಸ್ಸನ್ನು ಗೆಲ್ಲಲು ಸಾಧ್ಯವಿದೆ ಎಂದು ಕಸಾಪ ನ ಗೌರವ ಕಾರ್ಯದರ್ಶಿ ಡಾ|| ಮುರಲೀ ಮೋಹನ್

ಉಳ್ಳಾಲ : ಬಸ್ ಕ್ಲೀನರ್ ನಿಂದ ವೈದ್ಯೆಯೊಂದಿಗೆ ಅಸಭ್ಯ ವರ್ತನೆ

ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ (KA51 AB 3649) ಬಸ್‌ನಲ್ಲಿ ಪ್ರಯಾಣ

ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಚಾಲಕ ಕುಸಿದು ಬಿದ್ದು ಗಂಭೀರ

ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಚಾಲಕ. ಇವರು ಸುಳ್ಯ ತಾಲೂಕಿನ ದೊಡ್ಡಡ್ಕದ ರಾಜರಾಂಪುರದ ನಿವಾಸಿಯಾಗಿದ್ದಾರೆ. ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಸಂಪಾಜೆಯಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ತಮ್ಮ ಆಟೋದಲ್ಲಿ ಕರೆದುಕೊಂಡು

ನ.19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬ

ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶದ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತಿ ಸಮಿತಿಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಹೇಳಿದರು. ಅವರು ನಗರದ ಓಶಿಯನ್

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲಾಧ್ಯಕ್ಷ ಲಾರೆನ್ಸ್ ಡಿಸೋಜ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಅಂದು ಅಪರಾಹ್ನ 3 ಗಂಟೆಗೆ ನಗರದ ಕೂಳೂರಿನ ಕೆಐಒಸಿಎಲ್ ಮುಂಭಾಗದಲ್ಲಿ ಈ ಜನಾಗ್ರಹ ಸಭೆ ನಡೆಯಲಿದೆ ಎಂದರು.ಘಟಕದ

ಮಂಗಳೂರು ವಿವಿ ಕಾಲೇಜ್ : ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು. ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು

ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ ವಿದ್ಯಾರ್ಥಿಗೆ ಗಂಭೀರ ಹಲ್ಲೆ

ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಎಂದು ತಿಳಿದುಬಂದಿದೆ.ಮಂಗಳೂರು ಖಾಸಗಿ ಆಸ್ಪತ್ರೆಗೆ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು