Home ಕರಾವಳಿ Archive by category ಮಂಗಳೂರು (Page 206)

ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ – ಎಸ್ ವರಲಕ್ಷ್ಮಿ

ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ಧಾರೆ ಎರೆದು, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ

ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದೀಪಾವಳಿ ಧಮಾಕ

ದ್ವಿಚಕ್ರ ವಾಹನದಲ್ಲಿಯೇ ಹೆಸರುವಾಸಿಯಾಗಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದ್ವಿಚಕ್ರ ಖರೀದಿದಾರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ, ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದಾರೆ. ಪ್ರತಿವಾರ ಲಕ್ಕಿ ಡ್ರಾ ನಡೆಯಲಿದ್ದು ವಿಜೇತರಿಗೆ ಇಯರ್ ಪೋಡ್ಸ್ ಸಿಗಲಿದೆ, ಅದರ ಜೊತೆಗೆ ಬೈಕ್ ಖರೀದಿದಾರರಿಗೆ ಬಂಪರ್ ಡ್ರಾ ನಡೆಯಲಿದ್ದು, ವಿಜೇತರಿಗೆ ನಲ್ವತ್ತು ಇಂಚಿ ನ ಎಲ್‍ಇಡಿ ಟಿವಿ, ಸ್ಮಾರ್ಟ್ ವಾಚ್, ಮೊಬೈಲ್ ಫೋನ್

ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆಗೆ ಕಾರ್ಮಿಕರ ಬೆಂಬಲ ಘೋಷಣೆ

ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಬೆಂಬಲಿಸಲು ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರ ಉಪಸ್ಥಿತಿಯಲ್ಲಿ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.

ದೇಶದ 38ಕೋಟಿ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ : ಸಚಿವ ರಾಮೇಶ್ವರ ತೆಲಿ

ಮಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಸುರಕ್ಷತೆಗಾಗಿ ಇ ಶ್ರಮ್ ಕಾರ್ಡ್ ದೇಶದ 38ಕೋಟಿ ಕಾರ್ಮಿಕರಿಗೆ ನೀಡಲು ಗುರಿ ಹೊಂದಲಾಗಿ ದೆ.ಇದುವರೆಗೆ 28ಕೋಟಿ ಕಾರ್ಮಿಕರ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಪೆಟ್ರೋಲಿಯಂ, ನೈಸರ್ಗಿಕ ಅನಿಲ,ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಹಾಯಕ ಸಚಿವ ರಾಮೇಶ್ವರ ತೆಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಯ ಮೂಲಕ ಜನರ ಜೀವನದಲ್ಲಿ ಸುಧಾರಣೆ ಯಾಗಿದೆ.ಮೊದಲ ಅನಿಲ ಉಚಿತ ಮರು ಪೂರಣ ಉಚಿತ ಒಲೆ ಸಹಿತ ಸಂಪರ್ಕ ನೀಡಲು

ಅಪಾರ್ಟ್ ಮೆಂಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು

ದಸರಾ ಹಬ್ಬವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಘಪರಿವಾರ : ಅಬೂಬಕ್ಕರ್ ಕುಳಾಯಿ ಆರೋಪ

ಮಂಗಳೂರು: ತಲಾತಲಾಂತರದಿಂದ ಜಾರಿಯಲ್ಲಿರುವ ಹಲವಾರು ವರ್ಷಗಳ ಇತಿಹಾಸ ಇರುವ ದಸರಾ ಹಬ್ಬವನ್ನು ಸಂಘಪರಿವಾರವು ದುರುಪಯೋಗ ಪಡಿಸಿಕೊಂಡು ತಮ್ಮ ಕೋಮು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಎಸ್‍ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಆರೋಪಿಸಿದ್ದಾರೆ. ಹಲವಾರು ವರ್ಷಗಳ ಇತಿಹಾಸ ಇರುವ ನಾಡ ಹಬ್ಬವಾಗಿರುವ ದಸರಾ ಹಬ್ಬವನ್ನು ಸಂಘಪರಿವಾರವೂ ದ್ವೇಷ ಹಬ್ಬಿಸುವ ಹಬ್ಬವಾಗಿ ಮಾರ್ಪಡಿಸುತ್ತಿದೆ.ಗೂಂಡಾ ರಾಜ್ಯ ಎಂಬ ಕುಖ್ಯಾತಿ ಹೊಂದಿದ ಉತ್ತರ ಪ್ರದೇಶ

ದಕ್ಷಿಣಕನ್ನಡ ಹಾಲು ಒಕ್ಕೂಟ : ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ

ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ ರೂ.2.05 ಪೈಸೆ ನೀಡಲಾಗುವುದು. ಇದರಿಂದ ಹಾಲು

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಕೂಡಲೇ ಬಿಡುಗಡೆಗೆ ಆಗ್ರಹ- ಡಿವೈಎಫ್ಐ

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ ಪೊಲೀಸರು ವಿನಾಃ ಕಾರಣ ಬಂಧಿಸಿರುವುದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ. ಕರ್ನಾಟಕದ ರಾಜ್ಯದ ಬಿಜೆಪಿ ಸರಕಾರದ ದುರಾಡಳಿತದ ವಿರುಧ್ದ, ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ , ಭರತ್ ಶೆಟ್ಟರ ಅಕ್ರಮ,

ಬಿಎನ್‍ಐ ಇನ್‍ಸ್ಪಾಯರ್ : ನೂತನ ಅಧ್ಯಕ್ಷರಾಗಿ ರೋಶನ್ ಬಾಳಿಗಾ ಆಯ್ಕೆ

ಬಿಎನ್‍ಐ ಇನ್‍ಸ್ಪಾಯರ್ ಮಂಗಳೂರು ಅಧ್ಯಕ್ಷರಾಗಿ ಜಿ.ಡಿ. ಎಡ್ವರ್ಟೈಸಿಂಗ್ ಪ್ರೈ.ಲಿ. ಇದರ ಆಡಳಿತ ನಿರ್ದೇಶಕ ರೋಶನ್ ಬಾಳಿಗಾ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀತಾ ಡಿಸೋಜಾ, ಕಾರ್ಯದರ್ಶಿ ಹಾಗೂ ಖಜಾಂಜಿಯಾಗಿ ಅರವಿಂದ ಪ್ರಭು ಆಯ್ಕೆಯಾಗಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ ತುಳಭವನದಲ್ಲಿ ಸಿರಿ ಚಾವಡಿಯಲ್ಲಿ ನಾಟಕಕಾರ , ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮದ ಪ್ರಯಕ್ತ ಅವರ ಭಾವಚಿತ್ರಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಇನ್ನು ಸಭಾ ಕಾರ್ಯಕ್ರಮವನ್ನು ಪ್ರಪುಲ್ಲ