ಯಂಗ್ ಫ್ರೆಂಡ್ಸ್ ಕೊಟ್ಟಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇವರ ಸಹಕಾರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅಬತರ ತುಳು ಸಿನಿಮಾ ತಂಡ ಭಾಗವಹಿಸಿ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡರು. ಅಬತರ ಚಿತ್ರದ ನಟ ಅರ್ಜುನ್ ಕಾಪಿಕಾಡ್ ಅವರು ದೀಪ ಬೆಳಗಿಸಿ
ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಯೆನೆಪೋಯ ತಂಡ ಮೂರು ವಿಭಾಗಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ನೆಹರೂ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್. ಗಣೇಶ್ ರಾವ್ ಅವರು ಮಾತನಾಡಿ,
ಮಂಗಳೂರಿನ ವಿ.ಕೆ ಫರ್ನೀಚರ್ ಆಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ರಾಧಾ ಕೃಷ್ಣ ಪೋಟೋ ಸ್ಪರ್ಧೆ-2022 ಅನ್ನು ಹಮ್ಮಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ 8 ವರ್ಷದ ಒಳಗಿನ ಮಕ್ಕಳ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.ಕೃಷ್ಣ ಅಥವಾ ರಾಧೆಯ ಕನಿಷ್ಠ ಎರಡು ರೀತಿಯಲ್ಲಿ ಪೋಟೋವನ್ನ ಕಳುಹಿಸಲು ಮಾತ್ರ ಅವಕಾಶವಿದೆ. ಪೋಟೋ ಅನ್ನು ಈ ಮೇಲ್ ಗೆ [email protected] ಅಥವಾ 8748800666 ನಂಬರ್ ಗೆ ವಾಟ್ಸ್ ಆಪ್ ಮೂಲಕ
ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಆಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆಹಾಗೂ ಸಮೀಪ ರಿಕ್ಷಾ ಚಾಲಕರಿಗೆ ಸಮಸ್ಯೆ ಆಗುತ್ತಿದ್ದು, ಇದರಿಂದಾಗಿ ರಸ್ತೆಯಲ್ಲಿ ಹಾಕಿದ ಜಲ್ಲಿ ಕಲ್ಲುಗಳು ಹೆದ್ದು ಹೋಗಿದ್ದು,
ಮಂಗಳೂರು ಲೇಡೀಸ್ ಬ್ಯೂಟಿ ಅಸೋಸಿಯೇಶನ್ ನ ತಿಂಗಳ ಸಭೆಯು ಉರ್ವಸ್ಟೋರ್ ತುಳುಭವನದಲ್ಲಿ ನಡೆಯಿತು .ಈ ಸಭೆಯಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಅಧ್ಯಕ್ಷರಾದಂತಹ ಕತ್ತಲ್ ಸಾರ್ ಎಪ್ಪತ್ತೈದನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದ ಕುರಿತು ಹಿತನುಡಿಗಳನ್ನಾಡಿದರು . ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದಂತಹ ಬಬಿತಾ ಯು ಶೆಟ್ಟಿ , ಕಾರ್ಯದರ್ಶಿ ಫರ್ಜಾನಾ , ಉಪಾಧ್ಯಕ್ಷರು ಸುಲತಾ ಸುರತ್ಕಲ್, ಕೋಶಾಧಿಕಾರಿ ಝೀನಾ ಉಪಸ್ಥಿತರಿದ್ದರು . 18ರಿಂದ 40
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ರು.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು
ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತಾ.20-08-2022ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಮಿಲಾಗ್ರಿಸ್ ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ. ಸಹಾನುಭೂತಿ ಮತ್ತು ಆಧ್ಯಾತ್ಮಿಕತೆ’ ಎಂಬ ವಿಷಯದ ಮೇಲೆ ನಡೆಯುವ ಚಿತ್ರಕಲಾ ಸ್ಪರ್ಧೆಯನ್ನು ಹೈಸ್ಕೂಲ್,
ಮಂಗಳೂರು : ಹೊಂಡ-ಗುಂಡಿಗಳ ಹಾಗೂ ಅನಧಿಕೃತ ಅಗೆತಗಳ ಬಗ್ಗೆ ದೂರುಗಳಿದ್ದಲ್ಲಿ WhatsApp ಸಂಖ್ಯೆ 9449007722 ಹಾಗೂ ಮಹಾನಗರಪಾಲಿಕೆಯ ಸಹಾಯವಾಣಿ ಸಂಖ್ಯೆ 0824-2220306ಗೆ ತಿಳಿಸಬಹುದಾಗಿದೆ ಎಂದು ಮನಪಾ ಪ್ರಕಟನೆ ತಿಳಿಸಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2022ರ ಮಳೆಗಾಲದಲ್ಲಿ ಜೂನ್ ಹಾಗೂ ಜುಲೈ ಮಾಹೆಯಲ್ಲಿ ಸಾಮಾನ್ಯ ಮಳೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುತ್ತದೆ. ಭಾರೀ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಉಂಟಾಗುವ
ಮಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ
ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ



























